'ಈ ಸಲ ನಾವು...': 2027ರ ಏಕದಿನ ವಿಶ್ವಕಪ್ ಟೂರ್ನಿಯ ಬಗ್ಗೆ ಅಚ್ಚರಿ ಭವಿಷ್ಯ ನುಡಿದ ವಿರೇಂದ್ರ ಸೆಹ್ವಾಗ್..!

Published : Oct 12, 2026, 03:38 PM IST
Virender Sehwag

ಸಾರಾಂಶ

2027ರ ಏಕದಿನ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಸಿದ್ಧತೆ ನಡೆಸುತ್ತಿದ್ದು, ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ. ವಿಶ್ವಕಪ್ ಗೆಲ್ಲಲು ಭಾರತ ತನ್ನ ಬೌಲಿಂಗ್ ವಿಭಾಗವನ್ನು ಬಲಪಡಿಸಿಕೊಳ್ಳಬೇಕು ಮತ್ತು ಇದರಲ್ಲಿ ಜಸ್ಪ್ರೀತ್ ಬುಮ್ರಾ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಎಲ್ಲಾ ಕ್ರಿಕೆಟ್ ತಂಡಗಳು ಇದೀಗ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭರ್ಜರಿ ಸಿದ್ದತೆಗಳನ್ನು ಆರಂಭಿಸಿವೆ. ಈ ಮೂಲಕ ಪ್ರತಿಷ್ಠಿತ ಏಕದಿನ ವಿಶ್ವಕಪ್ ಜಯಿಸಲು ಎಲ್ಲಾ ತಂಡಗಳು ತುದಿಗಾಲಿನಲ್ಲಿ ನಿಂತಿವೆ. ಇನ್ನು ಕಳೆದ ಬಾರಿಯ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಜೇಯವಾಗಿ ಫೈನಲ್ ಪ್ರವೇಶಿಸಿ, ಪ್ರಶಸ್ತಿ ಸುತ್ತಿನಲ್ಲಿ ಆಸ್ಟ್ರೇಲಿಯಾ ಎದುರು ಮುಗ್ಗರಿಸಿದ್ದ ಟೀಂ ಇಂಡಿಯಾ, ಇದೀಗ ಮುಂಬರುವ ಏಕದಿನ ವಿಶ್ವಕಪ್ ಗೆಲ್ಲಲು ರಣತಂತ್ರ ಹೆಣೆಯುತ್ತಿದೆ.

ಇತ್ತೀಚೆಗಷ್ಟೇ ಭಾರತ ತಂಡವು ತವರಿನಲ್ಲಿ ವೆಸ್ಟ್ ಇಂಡೀಸ್ ಎದುರು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಿತ್ತು. ಈ ಸರಣಿಯನ್ನು ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ 2-1 ಅಂತರದಲ್ಲಿ ಜಯಿಸುವಲ್ಲಿ ಯಶಸ್ವಿಯಾಗಿತ್ತು. ಮೊದಲೆರಡು ಪಂದ್ಯ ಗೆದ್ದು ಬೀಗಿದ್ದ ಭಾರತ ತಂಡವು, ಕೊನೆಯ ಪಂದ್ಯದಲ್ಲಿ ಬೃಹತ್ ಬಾರಿಸಿಯೂ ಸೋಲೊಪ್ಪಿಕೊಂಡಿತ್ತು. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.

ಭವಿಷ್ಯ ನುಡಿದ ವಿರೇಂದ್ರ ಸೆಹ್ವಾಗ್:

ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, 2027ರ ಏಕದಿನ ವಿಶ್ವಕಪ್ ಕುರಿತಂತೆ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ. ಈ ಬಾರಿ ಭಾರತ ತಂಡವು ಏಕದಿನ ವಿಶ್ವಕಪ್ ಗೆಲ್ಲಬೇಕಿದ್ದರೇ, ತನ್ನ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದ್ದಾರೆ. ಇನ್ನು ಇದೇ ವೇಳೆ 2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾ ಪರ ಬೌಲಿಂಗ್‌ನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬುಮ್ರಾ ಕೀ ಪ್ಲೇಯರ್ ಆಗಲಿದ್ದಾರೆ:

2027ರ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ವರ್ಕ್‌ಲೋಡ್ ಮ್ಯಾನೇಜ್‌ ಮಾಡುವ ನಿಟ್ಟಿನಲ್ಲಿ ಜಸ್ಪ್ರೀತ್ ಬುಮ್ರಾಗೆ ಆಗಾಗ ವಿಶ್ರಾಂತಿ ನೀಡಲಾಗುತ್ತಿದೆ. ಬುಮ್ರಾ ಅನುಪಸ್ಥಿತಿಯಲ್ಲಿ ಯುವ ಬೌಲರ್‌ಗಳು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲು ವಿಫಲವಾಗುತ್ತಿದ್ದಾರೆ. ಈ ಕುರಿತಂತೆಯೂ ಸೆಹ್ವಾಗ್ ಮನಬಿಚ್ಚಿ ಮಾತನಾಡಿದ್ದಾರೆ. ವೆಸ್ಟ್ ಇಂಡೀಸ್ ಎದುರಿನ ಏಕದಿನ ಸರಣಿಯನ್ನು ಬುಮ್ರಾ ಮಿಸ್ ಮಾಡಿಕೊಂಡರು. ಆದರೆ ಆ ಸರಣಿಯಲ್ಲಿ ಪ್ರಸಿದ್ದ್ ಕೃಷ್ಣ, ಗುರ್ನೂರ್ ಬ್ರಾರ್ ಹಾಗೂ ಮೊಹಮ್ಮದ್ ಸಿರಾಜ್‌ಗೆ ತಂಡದಲ್ಲಿ ಆಡಲು ಅವಕಾಶ ಸಿಕ್ಕಿತು. ಆದರೆ ಅವರು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ವಿಫಲರಾದರು ಎಂದು ಸೆಹ್ವಾಗ್ ಹೇಳಿದ್ದಾರೆ.

'ಈಗಿರುವ ಬೌಲರ್‌ಗಳ ಪೈಕಿ ನಮ್ಮಲ್ಲಿ ಅತ್ಯುತ್ತಮ ಬೌಲರ್ ಎಂದರೆ ಅದು ಜಸ್ಪ್ರೀತ್ ಬುಮ್ರಾ. ನಮ್ಮ ಬೌಲಿಂಗ್ ವಿಭಾಗ ಮತ್ತಷ್ಟು ಬಲಿಷ್ಠವಾದರೆ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯನ್ನು ಸುಲಭವಾಗಿ ಜಯಿಸಬಹುದು' ಎಂದು ವಿರೇಂದ್ರ ಸೆಹ್ವಾಗ್ 2027ರ ಏಕದಿನ ವಿಶ್ವಕಪ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Prithvi Shaw: ಒಂದು ಕಡೆ ಪೃಥ್ವಿ ಕಂಬ್ಯಾಕ್‌; ಈಗ ಮತ್ತೆ ಆಕೃತಿಯಲ್ಲಿ ಅರಳಿದ ಪ್ರೀತಿ! ಶಾ ಕುರಿತು ಅಗರವಾಲ್ ಹೇಳಿದ್ದೇನು?
Mid-Flight : ಮಿಡ್‌ಫ್ಲೈಟ್‌ನಲ್ಲಿ ಧೋನಿ ಬಳಿ ಮನದ ಮಾತು ಬಿಚ್ಚಿಟ್ಟ ಏರ್ ಹೋಸ್ಟೆಸ್! ಮಾಹಿ ಕೊಟ್ಟ ಪ್ರತಿಕ್ರಿಯೆ ವೈರಲ್!