ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟಗೊಂಡಿದೆ. ಅಕ್ಟೋಬರ್ 5 ರಂದು ಟೂರ್ನಿ ಆರಂಭಗೊಳ್ಳುತ್ತಿದೆ . ನವೆಂಬರ್ 19ಕ್ಕೆ ಫೈನಲ್ ಪಂದ್ಯ ನಡೆಯಲಿದೆ. ವೇಳಾಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಸೆಮಿಫೈನಲ್‌ಗೆ ಲಗ್ಗೆ ಇಡುವ 4 ತಂಡದ ಭವಿಷ್ಯ ನುಡಿದಿದ್ದಾರೆ
ಮುಂಬೈ(ಜೂ.27): ಐಸಿಸಿ ವಿಶ್ವಕಪ್ ಟೂರ್ನಿಗೆ ಇದೀಗ ಕೌಂಟ್‌ಡೌನ್ ಆರಂಭಗೊಂಡಿದೆ. ಇದು ವೇಳಾಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಲೆಕ್ಕಾಚಾರಗಳು ಜೋರಾಗಿದೆ. ಅಕ್ಟೋಬರ್ 5 ರಿಂದ ನವೆಂಬರ್ 19ರವರಗೆ ಭಾರತದಲ್ಲಿ ಟೂರ್ನಿ ನಡೆಯಲಿದೆ. ತವರಿನಲ್ಲಿ ವಿಶ್ವಕಪ್ ಟೂರ್ನಿ ಆಯೋಜನೆಗೊಳ್ಳುತ್ತಿರುವ ಕಾರಣ ಟೀಂ ಇಂಡಿಯಾ ಮೇಲೆ ನಿರೀಕ್ಷೆಗಳು ಹೆಚ್ಚಾಗಿದೆ. ಇದರ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಸೆಮಿಫೈನಲ್ ಪ್ರವೇಶಿಸಬಲ್ಲ 4 ತಂಡಗಳ ಭವಿಷ್ಯ ನುಡಿದಿದ್ದಾರೆ. ಸೆಹ್ವಾಗ್ ಪ್ರಕಾರ ಆತಿಥೇಯ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡ ಈ ಬಾರಿಯ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಲಿದೆ ಎಂದಿದ್ದಾರೆ.
ನಾಲ್ಕು ಬಲಿಷ್ಠ ತಂಡಗಳು ಸೆಮಿಫೈನಲ್ ಪ್ರವೇಶ ಪಡೆಯಲಿದೆ. ಇಂಗ್ಲೆಂಡ್ ಹಾಲಿ ಚಾಂಪಿಯನ್ ತಂಡವಾಗಿದ್ದರೆ, ಆಸ್ಟ್ರೇಲಿಯಾ 5 ಬಾರಿ ಏಕದಿನ ವಿಶ್ವಕಪ್ ಗೆದ್ದ ತಂಡವಾಗಿದೆ. ಇನ್ನು ಪಾಕಿಸ್ತಾನ ಏಕದಿನ ಕ್ರಿಕೆಟ್‌ನಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ. 1992ರಲ್ಲಿ ಪಾಕಿಸ್ತಾನ ವಿಶ್ವಕಪ್ ಗೆದ್ದುಕೊಂಡಿದೆ. ಇತ್ತ ಟೀಂ ಇಂಡಿಯಾ ಕೂಡ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಜೊತೆಗೆ ತವರಿನಲ್ಲೇ ಪಂದ್ಯ ನಡೆಯುತ್ತಿರುವ ಕಾರಣ ನಿರೀಕ್ಷೆಗಳು ಹಚ್ಚಾಗಿದೆ.
ICC ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ, ಟೀಂ ಇಂಡಿಯಾ ಹೋರಾಟದ ಫುಲ್ ಲಿಸ್ಟ್!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 5 ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿದೆ. ಇದರಲ್ಲಿ ನವೆಂಬರ್ 11 ರಂದು ನಡೆಯಲಿರು ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ಕ್ವಾಲಿಫೈಯರ್ 1 ತಂಡ ಮುಕಾಮುಖಿಯಾಗಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶ್ವಕಪ ಪಂದ್ಯ 2023
ಅಕ್ಟೋಬರ್ 20: ಆಸ್ಟ್ರೇಲಿಯಾ-ಪಾಕಿಸ್ತಾನ(ಬೆಂಗಳೂರು)
ಅಕ್ಟೋಬರ್ 26: ಇಂಗ್ಲೆಂಡ್-ಕ್ವಾಲಿಫೈಯರ್ 2 ತಂಡ(ಬೆಂಗಳೂರು)
ನವೆಂಬರ್ 4:ನ್ಯೂಜೆಲೆಂಡ್-ಪಾಕಿಸ್ತಾನ(ಬೆಂಗಳೂರು)
ನವೆಂಬರ್ 9: ನ್ಯೂಜಿಲೆಂಡ್-ಕ್ವಾಲಿಫೈಯರ್ 2(ಬೆಂಗಳೂರು)
ನವೆಂಬರ್ 11: ಭಾರತ-ಕ್ವಾಲಿಫೈಯರ್ 1(ಬೆಂಗಳೂರು)
ಅಕ್ಟೋಬರ್ 5 ರಂದು ಏಕದಿನ ವಿಶ್ವಕಪ್ ಟೂರ್ನಿ ಆರಂಭಗೊಳ್ಳುತ್ತಿದೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8 ರಂದು ಆಡಲಿದೆ. ಆಸ್ಟ್ರೇಲಿಯಾ ವಿರುದ್ದ ಚೆನ್ನೈನಲ್ಲಿ ಈ ಪಂದ್ಯ ನಡೆಯಲಿದೆ. ಲೀಗ್ ಹಂತದಲ್ಲಿ ಟೀಂ ಇಂಡಿಯಾ ಒಟ್ಟು 9 ಪಂದ್ಯಗಳನ್ನು ಆಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ 9 ಬೇರೆ ಬೇರೆ ಮೈದಾನದಲ್ಲಿ ಟೀಂ ಇಂಡಿಯಾ ಲೀಗ್ ಪಂದ್ಯ ಆಡಲಿದೆ.
ಏಕದಿನ ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಬಿಡುಗಡೆ, ಅ.15ಕ್ಕೆ ಭಾರತ-ಪಾಕ್, ಅಹಮ್ಮದಾಬಾದ್‌ನಲ್ಲಿ ಫೈನಲ್!
ಟೀಂ ಇಂಡಿಯಾ ತಂಡದ ವೇಳಾಪಟ್ಟಿ ಇಲ್ಲಿದೆ
ಅಕ್ಟೋಬರ್ 8: ಭಾರತ-ಆಸ್ಟ್ರೇಲಿಯಾ(ಚೆನ್ನೈ)
ಅಕ್ಟೋಬರ್ 11: ಭಾರತ-ಅಪ್ಘಾನಿಸ್ತಾನ(ದೆಹಲಿ)
ಅಕ್ಟೋಬರ್15: ಭಾರತ-ಪಾಕಿಸ್ತಾನ( ಅಹಮ್ಮದಾಬಾದ್)
ಅಕ್ಟೋಬರ್ 19: ಭಾರತ-ಬಾಂಗ್ಲಾದೇಶ( ಪುಣೆ)
ಅಕ್ಟೋಬರ್ 22: ಭಾರತ-ನ್ಯೂಜಿಲೆಂಡ್(ಧರ್ಮಶಾಲಾ)
ಅಕ್ಟೋಬರ್ 29: ಭಾರತ-ಇಂಗ್ಲೆಂಡ್ (ಲಖನೌ)
ನವೆಂಬರ್ 2: ಭಾರತ-ಕ್ವಾಲಿಫೈಯರ್(ಮುಂಬೈ)
ನವೆಂಬರ್ 5: ಭಾರತ-ಆಫ್ರಿಕಾ ಪಂದ್ಯ(ಕೋಲ್ಕತಾ)
ನವೆಂಬರ್ 11: ಭಾರತ-ಕ್ವಾಲಿಫೈಯರ್ 1(ಬೆಂಗಳೂರು)