ಪ್ರಖ್ಯಾತ ನೆಟ್ಟಿಗರೊಬ್ಬರು ಇದೀಗ ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿ ಕಲಾವಿದನ 22 ಸೆಕೆಂಡ್‌ಗಳ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಅಭಿಮಾನಿ ತಮ್ಮ ನಾಲಿಗೆಯಲ್ಲಿ ವಿರಾಟ್ ಕೊಹ್ಲಿಯ ಕಲಾಕೃತಿ ಅನಾವರಣ ಮಾಡಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಬೆಂಗಳೂರು(ಸೆ.10): ವಿರಾಟ್ ಕೊಹ್ಲಿ ಆಧುನಿಕ ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್ ಎನ್ನುವುದರಲ್ಲಿ ಎರಡು ಮಾತಿಲ್ಲ. ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಭಾರತ ಮಾತ್ರವಲ್ಲದೇ ಜಗತ್ತಿನಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ. ವಿರಾಟ್ ಕೊಹ್ಲಿಯನ್ನು ಆರಾಧಿಸುವ ಕೋಟ್ಯಾಂತರ ಅಭಿಮಾನಿಗಳ ಪೈಕಿ ಇದೀಗ ಆಪ್ಪಟ ಅಭಿಮಾನಿ, ತಮ್ಮ ಅಭಿಮಾನವನ್ನು ವಿನೂತನ ರೀತಿಯಲ್ಲಿ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಅವರ ಚಿತ್ರವನ್ನು ನಾಲಿಗೆಯಲ್ಲಿ ಬಿಡಿಸಿ ಅಭಿಮಾನ ಅನಾವರಣ ಮಾಡಿದ್ದಾರೆ.
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಸದ್ಯ ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದಾರೆ. ಏಷ್ಯಾಕಪ್ ಟೂರ್ನಿಯಲ್ಲಿ ಗ್ರೂಪ್ ಹಂತದ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಪಾಕಿಸ್ತಾನ ಎದುರು ಕೇವಲ 4 ರನ್ ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದ್ದರು. ಇನ್ನು ನೇಪಾಳ ಎದುರಿನ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಇದೀಗ ಸೂಪರ್ 4 ಹಂತದಲ್ಲಿ ಭಾರತ ತಂಡವು ಮತ್ತೊಮ್ಮೆ ಪಾಕಿಸ್ತಾನ ಎದುರು ಮುಖಾಮುಖಿಯಾಗಿದ್ದು, ಬಲಿಷ್ಠ ಎದುರಾಳಿ ಪಡೆಯ ಎದುರು ದೊಡ್ಡ ಮೊತ್ತ ಕಲೆಹಾಕಿ, ವಿಶ್ವಕಪ್ ಟೂರ್ನಿಗೂ ಮುನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ವಿರಾಟ್ ಕೊಹ್ಲಿ ಎದುರು ನೋಡುತ್ತಿದ್ದಾರೆ.
Asia Cup 2023: ಭಾರತ ಎದುರು ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ
ಪ್ರಖ್ಯಾತ ನೆಟ್ಟಿಗರೊಬ್ಬರು ಇದೀಗ ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿ ಕಲಾವಿದನ 22 ಸೆಕೆಂಡ್‌ಗಳ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಅಭಿಮಾನಿ ತಮ್ಮ ನಾಲಿಗೆಯಲ್ಲಿ ವಿರಾಟ್ ಕೊಹ್ಲಿಯ ಕಲಾಕೃತಿ ಅನಾವರಣ ಮಾಡಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಹೀಗಿದೆ ನೋಡಿ ಆ ವಿಡಿಯೋ:
A fan made Virat Kohli's art with his tongue. pic.twitter.com/me6xZqappu
— Mufaddal Vohra (@mufaddal_vohra)ಸದ್ಯ ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ವಿರಾಟ್ ಕೊಹ್ಲಿ, ಕೊಲಂಬೊದ ಪ್ರೇಮದಾಸ ಸ್ಟೇಡಿಯಂನಲ್ಲಿ ಅದ್ಭುತ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದಾರೆ. ಆರ್ ಪ್ರೇಮದಾಸ್ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ 8 ಪಂದ್ಯಗಳನ್ನಾಡಿ 103.80 ಬ್ಯಾಟಿಂಗ್ ಸರಾಸರಿಯಲ್ಲಿ 519 ರನ್ ಬಾರಿಸಿದ್ದಾರೆ. ಅದರಲ್ಲೂ ಈ ಮೈದಾನದಲ್ಲಿ ಕಡೆಯ ಮೂರು ಪಂದ್ಯಗಳನ್ನಾಡಿದ್ದ ವಿರಾಟ್ ಕೊಹ್ಲಿ ಸತತ 3 ಪಂದ್ಯದಲ್ಲೂ ಶ್ರೀಲಂಕಾ ಎದುರು ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ.