ನಿವೃತ್ತಿ ಯೋಚನೆ ಸದ್ಯಕ್ಕಿಲ್ಲ, ಇನ್ನೂ 2 ವಿಶ್ವಕಪ್‌ ಆಡುವೆ: ಕ್ರಿಸ್‌ ಗೇಲ್‌!

By Suvarna News  |  First Published Jan 2, 2021, 2:59 PM IST

ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ತಾವು ಇನ್ನೂ 5 ವರ್ಷ ಕ್ರಿಕೆಟ್‌ ಆಡುವ ಇಂಗಿತ ವ್ಯಕ್ತಪಡಿಸಿದ್ದು, ನಿವೃತ್ತಿ ಆಲೋಚನೆ ಸದ್ಯಕ್ಕಿಲ್ಲ ಎಂದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


ದುಬೈ(ಜ.02): ವೆಸ್ಟ್‌ಇಂಡೀಸ್‌ನ ಸ್ಫೋಟಕ ಬ್ಯಾಟ್ಸ್‌ಮನ್‌ ಕ್ರಿಸ್‌ ಗೇಲ್‌ ಸದ್ಯಕ್ಕೆ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

41 ವರ್ಷದ ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್‌ 2021, 2022ರ ಟಿ20 ವಿಶ್ವಕಪ್‌ನಲ್ಲಿ ಆಡುವುದಾಗಿ ಹೇಳಿಕೊಂಡಿದ್ದು, ಇನ್ನೂ 5 ವರ್ಷಗಳ ಕಾಲ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿರುವುದಾಗಿ ಹೇಳಿಕೊಂಡಿದ್ದಾರೆ. 

Tap to resize

Latest Videos

2019ರಲ್ಲಿ ಗೇಲ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸುವುದಾಗಿ ಹೇಳಿಕೊಂಡಿದ್ದರು. ಆದರೆ ಕೆಲ ದಿನಗಳ ಬಳಿಕ ನಿವೃತ್ತಿ ನಿರ್ಧಾರವನ್ನು ಹಿಂಪಡೆದಿರುವುದಾಗಿ ಸ್ಪಷ್ಟಪಡಿಸಿದ್ದರು. 

ಇನ್ನು ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಆಕರ್ಷಕ ಪ್ರದರ್ಶನ ತೋರಿದ್ದ ಗೇಲ್‌, ಕೇವಲ 7 ಇನ್ನಿಂಗ್ಸ್‌ಗಳಲ್ಲಿ 137.14ರ ಸ್ಟ್ರೈಕ್‌ರೇಟ್‌ನಲ್ಲಿ 3 ಅರ್ಧಶತಕ ಸಹಿತ 288 ರನ್‌ ಕಲೆಹಾಕಿದ್ದರು.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!

ಕ್ರಿಸ್‌ ಗೇಲ್‌ ವೆಸ್ಟ್‌ ಇಂಡೀಸ್‌ ಪರ 301 ಏಕದಿನ ಹಾಗೂ 58 ಟಿ20 ಪಂದ್ಯಗಳನ್ನಾಡಿದ್ದು, ಕ್ರಮವಾಗಿ 10480 ಹಾಗೂ 1627 ರನ್‌ ಬಾರಿಸಿದ್ದಾರೆ. ಈ ಎರಡು ಮಾದರಿಯ ಕ್ರಿಕೆಟ್‌ನಲ್ಲಿ ಒಟ್ಟಾರೆ 27 ಶತಕ ಹಾಗೂ 67 ಅರ್ಧಶತಕಗಳು ದಾಖಲಾಗಿವೆ. 
 

click me!