2ನೇ ಟಿ20: ಟಾಸ್ ಗೆದ್ದ ವಿಂಡೀಸ್ ಫೀಲ್ಡಿಂಗ್, 1 ಬದಲಾವಣೆ!

By Suvarna NewsFirst Published Dec 8, 2019, 6:33 PM IST
Highlights

ಹೈದರಾಬಾದ್ ಪಂದ್ಯದ ಬಳಿಕ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡ ಇದೀಗ ತಿರುವನಂತಪುರಂ ಹೋರಾಟಕ್ಕೆ ರೆಡಿಯಾಗಿದೆ. ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ಬದಲಾವಣೆ ಏನು? ಇಲ್ಲಿದೆ ವಿವರ.

ತಿರುವನಂತಪುರಂ(ಡಿ.08): ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಇದೀಗ ಸರಣಿ ಗೆಲುವಿನ ತವಕದಲ್ಲಿದೆ. ಹೈದರಾಬಾದ್ ಪಂದ್ಯದ ಭರ್ಜರಿ ಗೆಲುವಿನ ಬಳಿಕ ಇದೀಗ ತಿರುವನಂತಪರಂ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿದೆ. ವಿಂಡೀಸ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ದಿನೇಶ್ ರಾಮ್ದಿನ್ ಬದಲು ನಿಕೋಲಸನ್ ಪೂರನ್ ತಂಡ ಸೇರಿಕೊಂಡಿದ್ದಾರೆ.

ಇದನ್ನೂ ಓದಿ: ರಾಹುಲ್, ಕೊಹ್ಲಿ ಅರ್ಧಶತಕ; ವಿಂಡೀಸ್ ವಿರುದ್ಧ ಗೆದ್ದು ಬೀಗಿದ ಭಾರತ!

ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ 207 ರನ್ ಸಿಡಿಸಿತ್ತು. ಬೃಹತ್ ಗುರಿ ಬೆನ್ನಟ್ಟಿದ ಭಾರತಕ್ಕೆ ಕೆಎಲ್ ರಾಹುಲ್ ಹಾಗು ನಾಯಕ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ನೆರವಿನಿಂದ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ರಾಹುಲ್ 62 ರನ್ ಸಿಡಿಸಿದರೆ, ಕೊಹ್ಲಿ ಅಜೇಯ 94 ರನ್ ಚಚ್ಚಿದರು. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.

click me!