ವಿಂಡೀಸ್‌-ಶ್ರೀಲಂಕಾ 2ನೇ ಟೆಸ್ಟ್‌ ಡ್ರಾನಲ್ಲಿ ಅಂತ್ಯ

Kannadaprabha News   | Asianet News
Published : Apr 04, 2021, 08:42 AM IST
ವಿಂಡೀಸ್‌-ಶ್ರೀಲಂಕಾ 2ನೇ ಟೆಸ್ಟ್‌ ಡ್ರಾನಲ್ಲಿ ಅಂತ್ಯ

ಸಾರಾಂಶ

ಶ್ರೀಲಂಕಾ ಹಾಗೂ ವೆಸ್ಟ್ ಇಂಡೀಸ್‌ ನಡುವಿನ ಎರಡು ಪಂದ್ಯಗಳ ಟೆಸ್ಟ್‌ ಸರಣಿಯ 2 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಆಂಟಿಗುವಾ(ಏ.04): ವೆಸ್ಟ್‌ಇಂಡೀಸ್‌ ಹಾಗೂ ಶ್ರೀಲಂಕಾ ನಡುವಿನ 2ನೇ ಟೆಸ್ಟ್‌ ಪಂದ್ಯ ಹಾಗೂ ಸರಣಿ 0-0 ಅಂತರದಲ್ಲಿ ಡ್ರಾನಲ್ಲಿ ಮುಕ್ತಾಯಗೊಂಡಿತು. 

ಮೊದಲ ಇನ್ನಿಂಗ್ಸ್‌ನಲ್ಲಿ 354 ರನ್‌ ಗಳಿಸಿದ್ದ ವೆಸ್ಟ್‌ಇಂಡೀಸ್‌, 2ನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟ್‌ ನಷ್ಟಕ್ಕೆ 280 ರನ್‌ ಗಳಿಸಿದ್ದಾಗ ಡಿಕ್ಲೇರ್‌ ಮಾಡಿಕೊಂಡಿತು. ಮೊದಲ ಇನ್ನಿಂಗ್ಸ್‌ನಲ್ಲಿ 258 ರನ್‌ಗಳಿಗೆ ಆಲೌಟ್‌ ಆಗಿದ್ದ ಶ್ರೀಲಂಕಾ, ಅಂತಿಮವಾಗಿ 376 ರನ್‌ಗಳ ಗುರಿ ಪಡೆಯಿತು. ಬೃಹತ್‌ ಮೊತ್ತ ಲಂಕಾ ಕೊನೆಯ ದಿನದ ಅಂತ್ಯಕ್ಕೆ 2 ವಿಕೆಟ್‌ ನಷ್ಟಕ್ಕೆ 193 ರನ್‌ ಗಳಿಸಲಷ್ಟೇ ಶಕ್ತವಾಯಿತು. ಅಂತಿಮವಾಗಿ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು.

ವಿರಾಟ್‌, ಹಾಶೀಂ ಆಮ್ಲಾ ದಾಖಲೆ ಅಳಿಸಿ ಹಾಕಿದ ಬಾಬರ್ ಅಜಂ..!

ಮೊದಲ ಟೆಸ್ಟ್ ಕೂಡಾ ನೀರಸ ಡ್ರಾನಲ್ಲಿ ಅಂತ್ಯ:

ಎನ್‌ಕ್ರುಮಾ ಬೋನ್ನರ್‌(113)ರ ಶತಕದ ನೆರವಿನಿಂದ ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ಡ್ರಾ ಸಾಧಿಸುವಲ್ಲಿ ವೆಸ್ಟ್‌ಇಂಡೀಸ್‌ ಯಶಸ್ವಿಯಾಗಿತ್ತು. ಗೆಲುವಿಗೆ 375 ರನ್‌ ಗುರಿ ಬೆನ್ನತ್ತಿದ್ದ ವಿಂಡೀಸ್‌, 4 ವಿಕೆಟ್‌ಗೆ 236 ರನ್‌ ಗಳಿಸಿ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು.

ಎರಡನೇ ಟೆಸ್ಟ್‌ನ ಸ್ಕೋರ್‌: 
ವೆಸ್ಟ್‌ಇಂಡೀಸ್‌: 354 ಮತ್ತು 280/4 ಡಿಕ್ಲೇರ್‌ 
ಶ್ರೀಲಂಕಾ: 258 ಮತ್ತು 193/2

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!