WI vs IND ಮೊದಲ ಟಿ20ಯಲ್ಲಿ ಟಾಸ್ ಗೆದ್ದ ವಿಂಡೀಸ್, ಅಶ್ವಿನ್ ಕಮ್‌ಬ್ಯಾಕ್!

Published : Jul 29, 2022, 07:36 PM ISTUpdated : Jul 29, 2022, 08:14 PM IST
WI vs IND ಮೊದಲ ಟಿ20ಯಲ್ಲಿ ಟಾಸ್ ಗೆದ್ದ ವಿಂಡೀಸ್,  ಅಶ್ವಿನ್ ಕಮ್‌ಬ್ಯಾಕ್!

ಸಾರಾಂಶ

ಭಾರತ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಟ್ರಿನಿಡ್ಯಾಡ್(ಜು.29):  ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಯಶಸ್ವಿಯಾಗಿ ಮುಗಿಸಿರುವ ಟೀಂ ಇಂಡಿಯಾ ಇದೀಗ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದೆ. 5 ಪಂದ್ಯಗಳ ಟಿ20 ಸರಣಿ ಆರಂಭಗೊಂಡಿದೆ. ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್  ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.  ರೋಹಿತ್ ಶರ್ಮಾ, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಆರ್ ಅಶ್ವಿನ್ ತಂಡ ಸೇರಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ತಂಡದಲ್ಲಿ  ಅಲ್ಜಾರಿ ಜೋಸೆಫ್ ಪದಾರ್ಪಣೆ ಮಾಡಿದ್ದಾರೆ. ಇನ್ನು ಶಿಮ್ರೊನ್ ಹೆಟ್ಮೆಯರ್ ತಂಡ ಸೇರಿಕೊಂಡಿದ್ದಾರೆ. 

ಟೀಂ ಇಂಡಿಯಾ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ರಿಷಬ್ ಪಂತ್,  ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ರವೀಂದ್ರ ಜಡೇಜಾ , ರವಿ ಬಿಶ್ನೋಯ್ ಭುವನೇಶ್ವರ್ ಕುಮಾರ್, ಆರ್ ಅಶ್ವಿನ್, ಅರ್ಶದೀಪ್ ಸಿಂಗ್

ಆಫ್ಘಾನ್ ಲೀಗ್ ಪಂದ್ಯದ ನಡುವೆ ಆತ್ಮಾಹುತಿ ಬಾಂಬ್ ದಾಳಿ, ಕ್ರಿಕೆಟಿಗರು ಬಂಕರ್‌ಗೆ ಶಿಫ್ಟ್!

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11
ಶಮ್ರಾ ಬ್ರೂಕ್ಸ್, ಶಿಮ್ರೋನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ನಿಕೋಲಸ್ ಪೂರನ್, ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಅಕೀಲ್ ಹುಸೈನ್, ಒಡೆನ್ ಸ್ಮಿತ್, ಅಲ್ಜಾರಿ ಜೋಸೆಫ್, ಕೀಮೋ ಪೌಲ್

ಟಾಸ್ ಗೆದ್ದ ಬಳಿಕ ಮಾತನಾಡಿದ ನಿಕೋಲಸ್ ಪೂರನ್, ಟೀಂ ಇಂಡಿಯಾವನ್ನು ಅಲ್ಪಮೊತ್ತಕ್ಕೆ ಕಟ್ಟಿ ಹಾಕಿ ರನ್ ಚೇಸ್ ಮಾಡುತ್ತೇವೆ. ಈ ಪಿಚ್‌ನಲ್ಲಿ ಚೇಸಿಂಗ್ ಹೆಚ್ಚಿನ ನರೆವು ನೀಡುವ ವಿಶ್ವಾಸವಿದೆ ಎಂದಿದ್ದಾರೆ. ಕೆಲದಿನಗಳ ವಿಶ್ರಾಂತಿ ಬಳಿಕ ಮತ್ತೆ ತಂಡ ಸೇರಿಕೊಂಡಿರುವುದು ಖುಷಿ ನೀಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದಾರೆ. ಉತ್ತಮ ಹೋರಾಟ ನೀಡಲಿದ್ದೇವೆ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. 

Ind vs WI: ಕೆ ಎಲ್ ರಾಹುಲ್ ಔಟ್, ಟೀಂ ಇಂಡಿಯಾಗೆ ಬಲಿಷ್ಠ ಆಟಗಾರ ಸೇರ್ಪಡೆ..!

ಈ ಪಂದ್ಯದಲ್ಲಿ ಮತ್ತೊಂದು ವಿಶೇಷತೆ ಇದೆ. ಟೀಂ ಇಂಡಿಯಾ ಪರ ಯಾರು ಆರಂಭಿಕ ಬ್ಯಾಟ್ಸ್‌ಮನ್ ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ರೋಹಿತ್ ಶರ್ಮಾ ಜೊತೆ ಸೂರ್ಯಕುಮಾರ್ ಯಾದವ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ತಂಡದಲ್ಲಿ ರಿಷಬ್ ಪಂತ್, ದಿನೇಶ್ ಕಾರ್ತಿಕ್, ಆರ್ ಅಶ್ವಿನ್ ಸೇರಿದಂತೆ ಸ್ಟಾರ್ ಕ್ರಿಕೆಟಿಗರು ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. 

ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ ಕ್ವೀನ್ ಸ್ವೀಪ್ ಗೆಲುವು ದಾಖಲಿಸಿದೆ. ಈ ಮೂಲಕ ವಿಂಡೀಸ್ ಪ್ರವಾಸವನ್ನು ಭರ್ಜರಿಯಾಗಿ ಆರಂಭಿಸಿದೆ. ಇದೀಗ 5 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ಮುಂದಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಜಯ್‌ ಹಜಾರೆ ಟ್ರೋಫಿ: ಒಂದೂವರೆ ದಶಕದ ಬಳಿಕ ಡೆಲ್ಲಿ ಪರ ವಿರಾಟ್ ಕೊಹ್ಲಿ ಮೈದಾನಕ್ಕೆ! ಬೆಂಗಳೂರಲ್ಲಿ ನಡೆಯುತ್ತೆ ಮ್ಯಾಚ್‌
ಬೆಂಗಳೂರಲ್ಲಿ ಐಪಿಎಲ್‌ ನಡೆಸಲು ಸಂಪುಟ ಅಸ್ತು