ನನ್ನನ್ನು ಕೈಬಿಟ್ಟಿದ್ದಕ್ಕೆ ಥ್ಯಾಂಕ್ಯೂ: ಆರ್‌ಸಿಬಿ ಕಾಲೆಳೆದ ಪಾರ್ಥಿವ್ ಪಟೇಲ್‌..!

Suvarna News   | Asianet News
Published : Jan 21, 2021, 12:39 PM IST
ನನ್ನನ್ನು ಕೈಬಿಟ್ಟಿದ್ದಕ್ಕೆ ಥ್ಯಾಂಕ್ಯೂ: ಆರ್‌ಸಿಬಿ ಕಾಲೆಳೆದ ಪಾರ್ಥಿವ್ ಪಟೇಲ್‌..!

ಸಾರಾಂಶ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಾರ್ಥಿವ್ ಪಟೇಲ್‌ ಅವರನ್ನು ರಿಲೀಸ್‌ ಮಾಡಿದ ಬೆನ್ನಲ್ಲೇ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಆರ್‌ಸಿಬಿ ತಂಡದ ಕಾಲೆಳೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಮುಂಬೈ(ಜ.23): ಕಳೆದ ತಿಂಗಳಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ಪಾರ್ಥಿವ್‌ ಪಟೇಲ್‌ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ರಿಲೀಸ್‌ ಮಾಡಿದೆ. ಇದರ ಬೆನ್ನಲ್ಲೇ ಪಾರ್ಥಿವ್ ಪಟೇಲ್‌ ಆರ್‌ಸಿಬಿ ತಂಡದ ಕಾಲೆಳೆದಿದ್ದಾರೆ.

ಪಾರ್ಥಿವ್ ಪಟೇಲ್‌ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡವಾಗಲಿ ಅಥವಾ ಇನ್ಯಾವುದೇ ತಂಡವನ್ನು ಪ್ರತಿನಿಧಿಸುವುದಿಲ್ಲ ಎಲ್ಲರಿಗೂ ತಿಳಿದ ವಿಚಾರವೇ ಆಗಿತ್ತು. 35 ವರ್ಷದ ಪಟೇಲ್‌ ಕಳೆದ ಡಿಸೆಂಬರ್‌ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಹೀಗಿದ್ದೂ ಆರ್‌ಸಿಬಿ ರಿಲೀಸ್‌ ಮಾಡಿದ ಪಟ್ಟಿಯಲ್ಲಿ ಟೀಂ ಇಂಡಿಯಾ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಪಾರ್ಥಿವ್ ಪಟೇಲ್‌ ಅವರ ಹೆಸರನ್ನು ಉಲ್ಲೇಕಿಸಲಾಗಿತ್ತು. ಇದರ ಬೆನ್ನಲ್ಲೇ ಪಾರ್ಥಿವ್ ಪಟೇಲ್‌ ಟ್ವೀಟ್‌ ಮಾಡಿದ್ದಾರೆ.

ಕೊಹ್ಲಿ, ಎಬಿಡಿ, ಪಡಿಕ್ಕಲ್; 12 ಆಟಗಾರರ ಉಳಿಸಿಕೊಂಡು, 10 ಮಂದಿಗೆ ಗೇಟ್‌ಪಾಸ್ ನೀಡಿದ RCB!

ನಾನು ನಿವೃತ್ತಿಯಾದ ಬಳಿಕ ನನ್ನನ್ನು ತಂಡದಿಂದ ಬಿಡುಗಡೆ ಮಾಡುತ್ತಿರುವುದು ನನಗೆ ಸಿಕ್ಕ ಅತ್ಯದ್ಭುತ ಗೌರವವಾಗಿದೆ. ಧನ್ಯವಾದಗಳು ಆರ್‌ಸಿಬಿ ಎಂದು ಪಾರ್ಥಿವ ಪಟೇಲ್ ಟ್ವೀಟ್‌ ಮಾಡಿದ್ದಾರೆ.

ಪಾರ್ಥಿವ್ ಪಟೇಲ್ 2018ರಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸದಸ್ಯರಾಗಿದ್ದರು. 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಾಡಲು ಯುಎಇಗೆ ತೆರಳಿದ್ದರು. ಆದರೆ ಒಂದೇ ಒಂದು ಪಂದ್ಯವನ್ನು ಪಟೇಲ್‌ ಆಡಿರಲಿಲ್ಲ. ಇದೀಗ ಮೊಯಿನ್ ಅಲಿ, ಶಿವಂ ದುಬೆ, ಆರೋನ್ ಫಿಂಚ್ ಜತೆ ಪಾರ್ಥಿವ್ ಪಟೇಲ್‌ ಅವರನ್ನು ಆರ್‌ಸಿಬಿ ರಿಲೀಸ್‌ ಮಾಡಿದೆ.

ಆರ್‌ಸಿಬಿಗೆ ಗುಡ್‌ ಬೈ ಹೇಳಿ ಮುಂಬೈ ಇಂಡಿಯನ್ಸ್ ಕೂಡಿಕೊಂಡ ಸ್ಟಾರ್ ಆಟಗಾರ..!

ಆರ್‌ಸಿಬಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಪಾರ್ಥಿವ್ ಪಟೇಲ್‌ ಮುಂಬೈ ಇಂಡಿಯನ್ಸ್‌ ಪಡೆಯನ್ನು ಕೂಡಿಕೊಂಡಿದ್ದು, ಟಾಲೆಂಟ್ ಸ್ಕೌಟ್‌ ಆಗಿ ನೇಮಕವಾಗಿದ್ದಾರೆ. ಮುಂಬೈ ತಂಡಕ್ಕೆ ಪ್ರತಿಭಾನ್ವಿತ ಆಟಗಾರರನ್ನು ಹುಡುಕಿಕೊಡುವ ಮಹತ್ತರವಾದ ಜವಾಬ್ದಾರಿಯನ್ನು ಮುಂಬೈ ಫ್ರಾಂಚೈಸಿ ಪಾರ್ಥಿವ್ ಪಟೇಲ್‌ಗೆ ನೀಡಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿರಾಟ್ ಕೊಹ್ಲಿಯಲ್ಲ, ಈ ಆಟಗಾರ ಹೆಚ್ಚು ಹಾರ್ಡ್‌ ವರ್ಕ್ ಮಾಡುವ ಆಟಗಾರ ಎಂದ ಯಶಸ್ವಿ ಜೈಸ್ವಾಲ್!
14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!