ಈ ವರ್ಷವೇ ಟಿ20 ವಿಶ್ವಕಪ್ ನಡೆಯುತ್ತಾ..? ಕೊನೆಗೂ ತುಟಿ ಬಿಚ್ಚಿದ ಐಸಿಸಿ

By Suvarna NewsFirst Published Apr 18, 2020, 12:34 PM IST
Highlights

ಕೊರೋನಾ ವೈರಸ್‌ ಭೀತಿಯಿಂದಾಗಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್ ಆಯೋಜನೆಯ ಬಗ್ಗೆ ಐಸಿಸಿ ಮೌನ ಮುರಿದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

ಮೆಲ್ಬರ್ನ್(ಏ.18)‌: ಟಿ20 ವಿಶ್ವಕಪ್‌ ನಡೆಸುವ ಬಗ್ಗೆ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಶುಕ್ರವಾರ ತಿಳಿಸಿದೆ. 

ಟೂರ್ನಿ ನಡೆಸಲು ಇರುವ ಎಲ್ಲಾ ಆಯ್ಕೆಗಳನ್ನು ಪರಿಗಣಿಸುತ್ತಿದ್ದು, ಆಟಗಾರರು, ಪ್ರೇಕ್ಷಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಐಸಿಸಿ ಸ್ಪಷ್ಟಪಡಿಸಿದೆ. ಅ.18ರಿಂದ ನ.15ರ ವರೆಗೂ ಆಸ್ಪ್ರೇಲಿಯಾದಲ್ಲಿ ಟಿ20 ವಿಶ್ವಕಪ್‌ ನಡೆಯಬೇಕಿದೆ. ಆದರೆ ಕೊರೋನಾ ವೈರಸ್ ಭೀತಿಯಿಂದಾಗಿ ಈಗಾಗಲೇ ಹಲವಾರು ಟೂರ್ನಿಗಳು ರದ್ದಾಗಿವೆ ಇಲ್ಲವೇ ಮುಂದೂಡಲ್ಪಟ್ಟಿವೆ. ಹೀಗಾಗಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್ ಟೂರ್ನಿಯೂ ನಡೆಯುವುದು ಅನುಮಾನ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಕೋವಿಡ್ 19 ಭೀತಿಯಿಂದಾಗಿ ಆಸ್ಟ್ರೇಲಿಯಾ ಈಗಾಗಲೇ ತನ್ನೆಲ್ಲಾ ಗಡಿಗಳನ್ನು ಬಂದ್ ಮಾಡಿದೆ. ಟಿ20 ವಿಶ್ವಕಪ್ ಟೂರ್ನಿಯು ಖಾಲಿ ಸ್ಟೇಡಿಯಂನಲ್ಲಿ ನಡೆಯಲಿದೆ, ಇಲ್ಲವೇ 2021ಕ್ಕೆ ಮುಂದೂಡಲಾಗುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಟಿ20 ವಿಶ್ವಕಪ್ ಟೂರ್ನಿ ಆಯೋಜನೆಯ ಅಡ್ಡಿ-ಆತಂಕಗಳ ಬಗ್ಗೆ ತಜ್ಞರು ಹಾಗೂ ಆಸ್ಟ್ರೇಲಿಯಾ ಸರ್ಕಾರದಿಂದ ಸಲಹೆಯನ್ನು ಪಡೆದುಕೊಳ್ಳುತ್ತೇವೆಂದು ಐಸಿಸಿ ತಿಳಿಸಿದೆ. ಕ್ರೀಡೆಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಮಾಹಿತಿಗಳನ್ನು ಗಮನದಲ್ಲಿಟ್ಟುಕೊಂಡು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ಐಸಿಸಿ ತಿಳಿಸಿದೆ.

IPL Birthday ಏಪ್ರಿಲ್ 18: ಅಪರೂಪದಲ್ಲೇ ಅಪರೂಪದ ಕ್ಷಣಗಳು ಇಲ್ಲಿವೆ ನೋಡಿ

ಆಸ್ಟ್ರೇಲಿಯಾ ಮಾಜಿ ನಾಯಕ ಅಲನ್ ಬಾರ್ಡರ್, ಆಸೀಸ್ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಖಾಲಿ ಮೈದಾನದಲ್ಲಿ ಟಿ20 ವಿಶ್ವಕಪ್ ಆಯೋಜಿಸಿ ಎನ್ನುವ ಸಲಹೆಗೆ ಜೈ ಎಂದಿದ್ದಾರೆ. ಇನ್ನು ಮಾಜಿ ಕ್ರಿಕೆಟಿಗ ಸೈಮನ್ ಕ್ಯಾಟಿಚ್ ಹಾಗೂ ಹಾಲಿ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್ ಅಲೆಕ್ಸ್ ಕ್ಯಾರಿ ಟೂರ್ನಿಯನ್ನು ಮುಂದೂಡುವುದು ಒಳಿತು ಎಂದು ಸಲಹೆ ನೀಡಿದ್ದಾರೆ.


 

click me!