ಮಹಿಳಾ ಏಷ್ಯಾಕಪ್‌ ಟೂರ್ನಿ ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಭಾರತ-ಪಾಕಿಸ್ತಾನ ಪಂದ್ಯ

By Naveen KodaseFirst Published Sep 21, 2022, 11:44 AM IST
Highlights

ಮಹಿಳಾ ಏಷ್ಯಾಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟ
ಬಾಂಗ್ಲಾದೇಶದಲ್ಲಿ ನಡೆಯಲಿರುವ 2022ರ ಮಹಿಳಾ ಏಷ್ಯಾಕಪ್ ಟೂರ್ನಿ
ಅಕ್ಟೋಬರ್ 01ರಂದು ಟೂರ್ನಿಗೆ ಅಧಿಕೃತ ಚಾಲನೆ

ಕೌಲಾಲಂಪುರ(ಸೆ.21): ಮುಂದಿನ ತಿಂಗಳು ಬಾಂಗ್ಲಾದೇಶದ ಸೈಲ್ಹೆಟ್‌ನಲ್ಲಿ ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿ ನಡೆಯಲಿದ್ದು ಅಕ್ಟೋಬರ್ 7ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ. ಏಷ್ಯಾ ಕ್ರಿಕೆಟ್‌ ಸಮಿತಿ ಅಧ್ಯಕ್ಷ ಜಯ್‌ ಶಾ ಮಂಗಳವಾರ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದರು. 

ಅಕ್ಟೋಬರ್ 1ರಿಂದ ಆರಂಭಗೊಳ್ಳಲಿರುವ ಟೂರ್ನಿಯು 15 ದಿನಗಳ ಕಾಲ ನಡೆಯಲಿದ್ದು, ಒಟ್ಟು 7 ತಂಡಗಳು ಸೆಣಸಲಿವೆ. ಟೂರ್ನಿಯು ರೌಂಡ್‌ ರಾಬಿನ್‌ ಮಾದರಿಯಲ್ಲಿ ನಡೆಯಲಿದ್ದು ಅಗ್ರ 4 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಯುಎಇ, ಥಾಯ್ಲೆಂಡ್‌ ಮತ್ತು ಮಲೇಷ್ಯಾ ತಂಡಗಳು ಪಾಲ್ಗೊಳ್ಳಲಿವೆ. ತಾಲಿಬಾನ್‌ ಆಡಳಿತ ಬಂದ ಬಳಿಕ ಆಫ್ಘಾನಿಸ್ತಾನ ಮಹಿಳಾ ಕ್ರಿಕೆಟ್‌ ತಂಡವನ್ನು ನಿಷೇಧಗೊಳಿಸಿರುವ ಕಾರಣ, ಆ ತಂಡವು ಟೂರ್ನಿಯಲ್ಲಿ ಆಡುತ್ತಿಲ್ಲ.

ಮಹಿಳಾ ಏಷ್ಯಾಕಪ್ ಟೂರ್ನಿಗೆ ಆತಿಥ್ಯದ ಹಕ್ಕು ಪಡೆದಿರುವ ಬಾಂಗ್ಲಾದೇಶ ತಂಡವು, ಉದ್ಘಾಟನಾ ಪಂದ್ಯದಲ್ಲಿ ಥಾಯ್ಲೆಂಡ್ ತಂಡವನ್ನು ಎದುರಿಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇನ್ನು ಇದೇ ದಿನ ಭಾರತ ಹಾಗೂ ಶ್ರೀಲಂಕಾ ತಂಡಗಳು ಎರಡನೇ  ಪಂದ್ಯದಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಮಹಿಳಾ ಏಷ್ಯಾಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯಗಳು ಅಕ್ಟೋಬರ್ 13ರಂದು ನಡೆದರೆ, ಫೈನಲ್ ಪಂದ್ಯವು ಅಕ್ಟೋಬರ್ 15ರಂದು ನಡೆಯಲಿದೆ.  ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಆರು ಬಾರಿಯ ಚಾಂಪಿಯನ್ ಭಾರತ, ಆತಿಥೇಯ ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಥಾಯ್ಲೆಂಡ್, ಮಲೇಷ್ಯಾ ಹಾಗೂ ಯುಎಇ ತಂಡಗಳು ಪಾಲ್ಗೊಳ್ಳಲಿವೆ. 

IND vs AUS ಏಷ್ಯಾಕಪ್ ಬಳಿಕ ಆಸ್ಟ್ರೇಲಿಯಾ ವಿರುದ್ಧವೂ ಮುಗ್ಗರಿಸಿದ ಭಾರತ!

2018ರ ಬಳಿಕ ಇದೇ ಮೊದಲ ಬಾರಿಗೆ ಬಾಂಗ್ಲಾದೇಶವು ಮಹಿಳಾ ಕ್ರಿಕೆಟ್ ಟೂರ್ನಿಗಳಿಗೆ ಆತಿಥ್ಯ ವಹಿಸುತ್ತಿದೆ. ಮಹಿಳಾ ಏಷ್ಯಾಕಪ್ ಟೂರ್ನಿಯ ಎಲ್ಲಾ ಪಂದ್ಯಗಳು ಸೈಲ್ಹೆಟ್‌ನ ಅಂತಾರಾಷ್ಟ್ರೀಯ ಮೈದಾನ ಹಾಗೂ ಸೈಲ್ಹೆಟ್‌ ಹೊರಾಂಗಣ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿವೆ. 2018ರಲ್ಲಿ ನಡೆದ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡವು 6 ಬಾರಿಯ ಏಷ್ಯಾಕಪ್ ಚಾಂಪಿಯನ್ ಭಾರತದ ಎದುರು ರೋಚಕ ಗೆಲುವು ಸಾಧಿಸುವ ಮೂಲಕ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು. ಇನ್ನು 2020ರಲ್ಲಿ ನಡೆಯಬೇಕಿದ್ದ ಮಹಿಳಾ ಏಷ್ಯಾಕಪ್ ಟೂರ್ನಿಯು ಕೋವಿಡ್ ಕಾರಣದಿಂದ ರದ್ದಾಗಿತ್ತು.

ಏಷ್ಯಾಕಪ್ ಟೂರ್ನಿಯ ವೇಳಾಪಟ್ಟಿ ಹೀಗಿದೆ ನೋಡಿ:

I am extremely delighted to announce the schedule for the 8th edition of the 2022
Get set for some amazing matches & watch the women create history starting 1st October, with the final showdown on 15th October pic.twitter.com/ifj43xzBs0

— Jay Shah (@JayShah)

 
ಟಿ20 ರ‍್ಯಾಂಕಿಂಗ್‌‌: 2ನೇ ಸ್ಥಾನಕ್ಕೇರಿದ ಸ್ಮೃತಿ ಮಂಧನಾ

ದುಬೈ: ಭಾರತದ ತಾರಾ ಬ್ಯಾಟರ್‌ ಸ್ಮೃತಿ ಮಂಧನಾ ಐಸಿಸಿ ಟಿ20 ಬ್ಯಾಟರ್‌ಗಳ ರ‍್ಯಾಂಕಿಂಗ್‌‌ ಪಟ್ಟಿಯಲ್ಲಿ ವೃತ್ತಿಬದುಕಿನ ಶ್ರೇಷ್ಠ 2ನೇ ಸ್ಥಾನಕ್ಕೇರಿದ್ದಾರೆ. ಇದೇ ವೇಳೆ ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌‌ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಇಂಗ್ಲೆಂಡ್‌ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ 111 ರನ್‌ ಕಲೆಹಾಕಿದ ಸ್ಮೃತಿ ಮಂಧನಾ, 2 ಸ್ಥಾನಗಳ ಏರಿಕೆ ಕಂಡರು. ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನದಲ್ಲಿ 91 ರನ್‌ ಗಳಿಸಿದ ಬಳಿಕ 3 ಸ್ಥಾನಗಳ ಏರಿಕೆ ಕಂಡು 7ನೇ ಸ್ಥಾನ ತಲುಪಿದರು.
 

click me!