ಮಹಿಳಾ ಕ್ರಿಕೆಟ್‌: ಇಂಡೋ-ಆಫ್ರಿಕಾ 2ನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭ

By Suvarna NewsFirst Published Mar 9, 2021, 8:35 AM IST
Highlights

ಮಿಥಾಲಿ ರಾಜ್‌ ನೇತೃತ್ವದ ಭಾರತ ಮಹಿಳಾ ತಂಡವು ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲು ಸಜ್ಜಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಲಖನೌ(ಮಾ.09): ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ್ದ ಭಾರತ ಮಹಿಳಾ ಕ್ರಿಕೆಟ್‌ ತಂಡ, ಮಂಗಳವಾರ ಇಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳಲು ಎದುರು ನೋಡುತ್ತಿದೆ. 

ಮೊದಲ ಏಕದಿನ ಪಂದ್ಯದಲ್ಲಿ ನಾಯಕಿ ಮಿಥಾಲಿ ಹಾಗೂ ಉಪನಾಯಕಿ ಹರ್ಮನ್‌ಪ್ರೀತ್‌ ಆಕರ್ಷಕ ಆಟವಾಡಿದರೂ ಉಳಿದ ಬ್ಯಾಟರ್‌ಗಳು ಕಳಪೆ ಆಟವಾಡಿ ನಿರಾಸೆ ಮೂಡಿಸಿದ್ದರು. ಬೌಲಿಂಗ್‌ನಲ್ಲೂ ಭಾರತ ಸಾಧಾರಣ ಪ್ರದರ್ಶನ ತೋರಿತ್ತು. ಈ ಪಂದ್ಯದಲ್ಲಿ ಸಂಘಟಿತ ಆಟದೊಂದಿಗೆ ಜಯದ ಸಿಹಿ ಸವಿದು 5 ಪಂದ್ಯಗಳ ಸರಣಿಯಲ್ಲಿ ಸಮಬಲ ಸಾಧಿಸಲು ಕಾತರಿಸುತ್ತಿದೆ.

ಮಹಿಳಾ ಕ್ರಿಕೆಟ್: ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

ಲಖನೌದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಮಿಥಾಲಿ ರಾಜ್ ನೇತೃತ್ವದ ಭಾರತ ತಂಡ 9 ವಿಕೆಟ್ ಕಳೆದುಕೊಂಡು ಕೇವಲ 177 ರನ್‌ ಕಲೆಹಾಕಿತ್ತು. ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ ಕೇವಲ 2 ವಿಕೆಟ್‌ ಕಳೆದುಕೊಂಡು ಸುಲಭವಾಗಿ ಗೆಲುವು ನಗೆ ಬೀರಿತ್ತು. ಅನುಭವಿ ವೇಗಿ ಜೂಲನ್ ಗೋಸ್ವಾಮಿ ಹೊರತುಪಡಿಸಿ ಉಳಿದ್ಯಾವ ಬೌಲರ್‌ಗಳು ನಿರೀಕ್ಷಿತ ಬೌಲಿಂಗ್ ಪ್ರದರ್ಶನ ತೋರಿರಲಿಲ್ಲ. 

ಪಂದ್ಯ: ಬೆಳಗ್ಗೆ 9ಕ್ಕೆ

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

click me!