
ಲಖನೌ(ಮಾ.17): ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಕೊನೆಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಫೀಲ್ಡಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಮಿಥಾಲಿ ರಾಜ್ ನೇತೃತ್ವದ ಭಾರತ ತಂಡ ಮೊದಲು ಬ್ಯಾಟ್ ಮಾಡಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯನ್ನು 1-3ರಲ್ಲಿ ಈಗಾಗಲೇ ಸೋತಿರುವ ಭಾರತ ಮಹಿಳಾ ತಂಡ, ಬುಧವಾರ ನಡೆಯಲಿರುವ 5ನೇ ಪಂದ್ಯದಲ್ಲಿ ಪ್ರತಿಷ್ಠೆಗಾಗಿ ಆಡಲಿದೆ. 2ನೇ ಪಂದ್ಯದಲ್ಲಿ 9 ವಿಕೆಟ್ ಗೆಲುವು ಸಾಧಿಸಿದ್ದನ್ನು ಹೊರತುಪಡಿಸಿದರೆ ಭಾರತ ಉಳಿದ ಮೂರು ಪಂದ್ಯಗಳಲ್ಲಿ ಸಂಘಟಿತ ಪ್ರದರ್ಶನ ತೋರಲು ವಿಫಲವಾಗಿದೆ.
ಪೂನಂ ಶತಕ ವ್ಯರ್ಥ, ಏಕದಿನ ಸರಣಿ ಹರಿಣಗಳು ಪಾಲು..!
ಪ್ರಮುಖವಾಗಿ ಬೌಲಿಂಗ್ ವಿಭಾಗದಲ್ಲಿ ಭಾರತ ಕಳಪೆ ಆಟವಾಡಿದ್ದು ಸರಣಿ ಸೋಲಿಗೆ ಕಾರಣವಾಗಿದೆ. ಈ ಪಂದ್ಯದಲ್ಲಿ ಉತ್ತಮ ಆಟವಾಡಿ ಮುಂಬರುವ ಟಿ20 ಸರಣಿಗೆ ಸಿದ್ಧತೆ ನಡೆಸಲು ಭಾರತ ಎದುರು ನೋಡುತ್ತಿದೆ.
ಪಂದ್ಯ ಆರಂಭ: ಬೆಳಗ್ಗೆ 9ಕ್ಕೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.