
ಲಖನೌ(ಮಾ.08): ಕೋವಿಡ್ ಬಳಿಕ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ಭಾರತ ಮಹಿಳಾ ಕ್ರಿಕೆಟ್ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ ಭಾನುವಾರ ಇಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್‌ಗಳ ಸೋಲು ಅನುಭವಿಸಿತು.
ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡ ಆರಂಭದಲ್ಲೇ ಜೆಮಿಯಾ ರೋಡ್ರಿಗಸ್, ಸ್ಮೃತಿ ಮಂಧನಾ ಹಾಗೂ ಪೂನಂ ರಾವತ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು; ಆದರೆ ಮಧ್ಯಮ ಕ್ರಮಾಂಕಲ್ಲಿ ನಾಯಕಿ ಮಿಥಾಲಿ ರಾಜ್(50) ಹಾಗೂ ಹರ್ಮನ್‌ಪ್ರೀತ್ (40) ಆಕರ್ಷಕ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಇವರಿಬ್ಬರ ಹೋರಾಟದ ಹೊರತಾಗಿಯೂ ಭಾರತ ಮಹಿಳಾ ಕ್ರಿಕೆಟ್ ತಂಡ 9 ವಿಕೆಟ್‌ಗೆ 177 ರನ್ ಗಳಿಸಿತು.
6 ನಗರ, ಬೆಂಗಳೂರಲ್ಲಿ 10 ಪಂದ್ಯ; IPL 2021 ಟೂರ್ನಿಯಲ್ಲಿದೆ ಕೆಲ ಬದಲಾವಣೆ!
ಇನ್ನು ಸಾಧಾರಣ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 40.1 ಓವರಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಲೀ (83*) ಹಾಗೂ ವೂಲ್ವಾರ್ಟ್ (80) ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟರು. ಭಾರತ ಪರ ಜೂಲನ್ ಗೋಸ್ವಾಮಿ 2 ವಿಕೆಟ್ ಕಬಳಿಸಿದರು. ಉಳಿದ ಬೌಲರ್‌ಗಳು ಪರಿಣಾಮಕಾರಿ ದಾಳಿ ನಡೆಸಲು ವಿಫಲರಾದರು.
ಸ್ಕೋರ್:
ಭಾರತ 177/9
ದ.ಆಫ್ರಿಕಾ 178/2
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.