
ಮುಂಬೈ(ಡಿ.08): ಎರಡನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಆಟಗಾರ್ತಿಯರ ಹರಾಜಿಗೆ ಇದೀಗ ಕ್ಷಣಗಣನೆ ಶುರುವಾಗಿದೆ. ಡಿಸೆಂಬರ್ 09ರಂದು ಆಟಗಾರ್ತಿಯರ ಹರಾಜು ನಡೆಯಲಿದೆ. ಎರಡನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯು ಮುಂಬರುವ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ನಡೆಯಲಿದೆ.
ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜಿನಲ್ಲಿ ಒಟ್ಟು 165 ಆಟಗಾರ್ತಿಯರು ಪಾಲ್ಗೊಳ್ಳುತ್ತಿದ್ದಾರೆ. ಈ ಪೈಕಿ 104 ಆಟಗಾರ್ತಿಯರು ಭಾರತೀಯರಾದರೆ, 61 ಆಟಗಾರ್ತಿಯರು ವಿದೇಶಿಯವರಾಗಿದ್ದಾರೆ. ಒಟ್ಟು 165 ಆಟಗಾರ್ತಿಯರ ಪೈಕಿ 5 ಫ್ರಾಂಚೈಸಿಗಳು ಈ ಬಾರಿಯ ಹರಾಜಿನಲ್ಲಿ ಗರಿಷ್ಠ 30 ಆಟಗಾರ್ತಿಯರನ್ನು ಮಾತ್ರ ಖರೀದಿಸಲು ಅವಕಾಶವಿದೆ.
IPL ಹರಾಜಿನಲ್ಲಿ RCB ಈ ಇಬ್ಬರನ್ನು ಖರೀದಿಸಿದ್ರೆ, ಈ ಸಲ ಕಪ್ ನಮ್ದೇ...!
ಪ್ರತಿ ಫ್ರಾಂಚೈಸಿಯು ಗರಿಷ್ಠ 18 ಆಟಗಾರ್ತಿಯರನ್ನು ತಮ್ಮ ತಂಡದಲ್ಲಿ ಹೊಂದಲು ಅವಕಾಶ ನೀಡಲಾಗಿದೆ. ಈಗಾಗಲೇ ಎಲ್ಲಾ ಐದು ಫ್ರಾಂಚೈಸಿಗಳು ಹರಾಜಿಗೂ ಮುನ್ನ ತಮಗೆ ಬೇಕಾದ ಆಟಗಾರ್ತಿಯರನ್ನು ರೀಟೈನ್ ಮಾಡಿಕೊಂಡಿವೆ. ಇದೀಗ ಹರಾಜಿನಲ್ಲಿ ಸಾಕಷ್ಟು ಅಳೆದು-ತೂಗಿ ತಮಗೆ ಬೇಕಾದ ಆಟಗಾರ್ತಿಯರನ್ನು ಖರೀದಿಸಲು ರಣತಂತ್ರ ಹೆಣೆದುಕೊಂಡು ಹರಾಜಿಗೆ ಸಜ್ಜಾಗಿವೆ.
ಹರಾಜಿನ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ:
* ಯಾವಾಗ ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ನಡೆಯಲಿದೆ?
ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಡಿಸೆಂಬರ್ 09ರ ಶನಿವಾರದಂದು ನಡೆಯಲಿದೆ.
* ಎಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ನಡೆಯಲಿದೆ?
ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ನಡೆಯಲಿದೆ.
* ಎಷ್ಟು ಗಂಟೆಯಿಂದ ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಆರಂಭವಾಗಲಿದೆ?
ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಭಾರತೀಯ ಕಾಲಮಾನ ಮಧ್ಯಾಹ್ನ 2.30ರಿಂದ ಆರಂಭವಾಗಲಿದೆ.
* ಟಿವಿಯಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ನೋಡಲು ಅವಕಾಶ ಇದೆಯಾ?
ಹೌದು, ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜನ್ನು ಭಾರತದಲ್ಲಿ Sports18 network ಚಾನೆಲ್‌ನಲ್ಲಿ ವೀಕ್ಷಿಸಬಹುದು.
* ಎಲ್ಲಿ ಉಚಿತವಾಗಿ ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜನ್ನು ವೀಕ್ಷಿಸಬಹುದು?
ಜಿಯೋ ಸಿನಿಮಾ ಅಪ್ಲಿಕೇಷನ್ ಹಾಗೂ ವೆಬ್‌ಸೈಟ್‌ನಲ್ಲಿ ಉಚಿತವಾಗಿ ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ವೀಕ್ಷಿಸಬಹುದಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.