
ಜಾರ್ಜ್ ಪಾರ್ಕ್(ಫೆ.20): ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಇಂದು ಮಹತ್ವದ ಪಂದ್ಯ. ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಮುಗ್ಗರಿಸಿದ ಕಾರಣ ಇಂದಿನ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಗೆಲ್ಲಲೇಬೇಕು. ಈ ಮಹತ್ವದ ಪಂದ್ಯದಲ್ಲಿ ಸ್ಮೃತಿ ಮಂಧಾನ ದಿಟ್ಟ ಹೋರಾಟ ನೀಡಿ 87 ರನ್ ಸಿಡಿಸಿದ್ದಾರೆ. ಇದರೊಂದಿಗೆ ಐರ್ಲೆಂಡ್‌ಗೆ 6 ವಿಕೆಟ್ ನಷ್ಟಕ್ಕೆ 155 ರನ್ ಸಿಡಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಭಾರತ ಮಹಿಳಾ ತಂಡ ಉತ್ತಮ ಆರಂಭ ಪಡೆಯಿತು. ಶೆಫಾಲಿ ವರ್ಮಾ ಹಾಗೂ ಸ್ಮೃತಿ ಮಂಧನಾ ಮೊದಲ ವಿಕೆಟ್‌ಗೆ 62 ರನ್ ಜೊತೆಯಾಟ ನೀಡಿದರು. ಶೆಫಾಲಿ ವರ್ಮಾ 24 ರನ್ ಸಿಡಿಸಿ ಔಟಾದರು. ಆದರೆ ಮಂಧನಾ ಹೋರಾಟ ಮುಂದುವರಿಸಿದರು. ಇತ್ತ ನಾಯಕಿ ಹರ್ಮನ್‌ಪ್ರೀತ್ ಕೌರ್ 13 ರನ್ ಸಿಡಿಸಿ ಮತ್ತೆ ನಿರಾಸೆ ಅನುಭವಿಸಿದರು.
ಸ್ಮೃತಿ ಮಂಧನಾಗೆ ಆರ್‌ಸಿಬಿ ಮಹಿಳಾ ತಂಡದ ನಾಯಕಿ ಪಟ್ಟ; ಶುಭ ಕೋರಿದ ಕೊಹ್ಲಿ, ಫಾಫ್ ಡು ಪ್ಲೆಸಿಸ್
ಕಳೆದ ಪಂದ್ಯದಲ್ಲಿ ಅಬ್ಬರಿಸಿದ ರಿಚಾ ಘೋಷ್ ಶೂನ್ಯಕ್ಕೆ ಔಟಾದರು. ಜೇಮಿ ರೋಡ್ರಿಗೆಸ್ 19 ರನ್ ಕಾಣಿಕೆ ನೀಡಿದರು. ದೀಪ್ತಿ ಶರ್ಮಾ ಡಕೌಟ್ ಆದರು. ಇತ್ತ ಮಂಧಾನ 56 ಎಸೆತದಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 87 ರನ್ ಸಿಡಿಸಿ ಅಬ್ಬರಿಸಿದರು. ಈ ಮೂಲಕ ಭಾರತ ಮಹಿಳಾ ತಂಡ 155 ರನ್ ಸಿಡಿಸಿತು.
ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ದ ಸೋಲು
ಸ್ಮೃತಿ ಮಂಧನಾ, ರಿಚಾ ಘೋಷ್ ಹೋರಾಟದ ಹೊರತಾಗಿಯೂ ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ಕಳೆದ ಬಾರಿ ರನ್ನರ್-ಅಪ್ ಭಾರತ ತಂಡ ಇಂಗ್ಲೆಂಡ್ ವಿರುದ್ಧ 11 ರನ್ ಸೋಲನುಭವಿಸಿದ್ದು, ಸೆಮಿಫೈನಲ್ ಹಾದಿಯನ್ನು ಕಠಿಣಗೊಳಿಸಿದೆ. ತಂಡ ಸದ್ಯ 3 ಪಂದ್ಯಗಳಲ್ಲಿ 4 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದು, ಕೊನೆ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಗೆಲ್ಲಲೇಬೇಕಾದ ಒತ್ತಡಕ್ಕೆ ಒಳಗಾಗಿದೆ. ಇಂಗ್ಲೆಂಡ್ ಹ್ಯಾಟ್ರಿಕ್ ಜಯದೊಂದಿಗೆ ಸೆಮೀಸ್ನಲ್ಲಿ ಬಹುತೇಕ ಸ್ಥಾನ ಖಚಿತಪಡಿಸಿಕೊಂಡಿದೆ.
Women's T20 World cup ಭಾರತ ವಿರುದ್ದ ಗೆದ್ದ ಇಂಗ್ಲೆಂಡ್ ಸೆಮಿಫೈನಲ್ ಪ್ರವೇಶ, ಐರ್ಲೆಂಡ್ ಪಂದ್ಯದತ್ತ ಎಲ್ಲರ ಚಿತ್ತ
ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ರೇಣುಕಾ ಸಿಂಗ್ ಮಾರಕ ದಾಳಿ ಹೊರತಾಗಿಯೂ 7 ವಿಕೆಟ್‌ಗೆ 151 ರನ್ ಗಳಿಸಿತು. ಭಾರತ 5 ವಿಕೆಟ್‌ಗೆ 140 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಶಫಾಲಿ ವರ್ಮಾ(08), ಜೆಮಿಮಾ ರೋಡ್ರಿಗ್್ಸ(13), ಹರ್ಮನ್‌ಪ್ರೀತ್(04) ವೈಫಲ್ಯ ತಂಡಕ್ಕೆ ಮುಳುವಾಯಿತು. ಸ್ಮೃತಿ 41 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಕೊನೆಯಲ್ಲಿ ಅಬ್ಬರಿಸಿದ ರಿಚಾ 34 ಎಸೆತಗಳಲ್ಲಿ 47 ರನ್ ಸಿಡಿಸಿದರೂ ತಂಡಕ್ಕೆ ಗೆಲುವು ತಂದುಕೊಡಲು ಆಗಲಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.