
ಬ್ರಿಸ್ಟಲ್(ಜೂ.19): ಚೊಚ್ಚಲ ಟೆಸ್ಟ್ ಪಂದ್ಯವನ್ನಾಡುತ್ತಿರುವ ದೀಪ್ತಿ ಶರ್ಮಾ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ಮಹಿಳಾ ತಂಡಗಳ ನಡುವಿನ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಕೊಂಚ ಮುನ್ನಡೆ ಸಾಧಿಸಿದೆ.
ಹೌದು, ಮೊದಲ ಇನಿಂಗ್ಸ್‌ನಲ್ಲಿ ದಿಢೀರ್ ಕುಸಿತ ಕಂಡು ಫಾಲೋ ಆನ್‌ಗೆ ಒಳಗಾಗಿದ್ದ ಭಾರತ ತಂಡಕ್ಕೆ ಎರಡನೇ ಇನಿಂಗ್ಸ್‌ನಲ್ಲಿ ಮೊದಲಿಗೆ ಶಫಾಲಿ ವರ್ಮಾ ಅರ್ಧಶತಕ ಬಾರಿಸಿ ಆಸರೆಯಾಗಿದ್ದರು. ಶಫಾಲಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್ ನೀಡಿದ ಎಡಗೈ ಬ್ಯಾಟರ್ ಶಫಾಲಿ ವರ್ಮಾ 157 ಎಸೆತಗಳನ್ನು ಎದುರಿಸಿ ಚೊಚ್ಚಲ ಟೆಸ್ಟ್ ಅರ್ಧಶತಕ ಪೂರೈಸಿದರು.
ಚೊಚ್ಚಲ ಟೆಸ್ಟ್‌ನ 2 ಇನಿಂಗ್ಸಲ್ಲಿ ಅರ್ಧಶತಕ: ಶಫಾಲಿ ವರ್ಮಾ ದಾಖಲೆ
ಪೂನಂ ರಾವತ್ ಹಾಗೂ ದೀಪ್ತಿ ಶರ್ಮಾ ಜೋಡಿ 72 ರನ್‌ಗಳ ಜತೆಯಾಟ ನಿಭಾಯಿಸಿದರು. ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದ ದೀಪ್ತಿ 168 ಎಸೆತಗಳನ್ನು ಎದುರಿಸಿ 54 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ನಾಲ್ಕನೇ ದಿನದಾಟದ ಲಂಚ್ ಬ್ರೇಕ್ ವೇಳೆಗೆ ಮಿಥಾಲಿ ರಾಜ್ ಪಡೆ 3 ವಿಕೆಟ್ ಕಳೆದುಕೊಂಡು 171 ರನ್ ಬಾರಿಸಿದ್ದು, ಒಟ್ಟಾರೆ 6 ರನ್‌ಗಳ ಮುನ್ನಡೆ ಸಾಧಿಸಿದೆ. ಸದ್ಯ ಪೂನಂ ರಾವತ್(39) ಹಾಗೂ ನಾಯಕಿ ಮಿಥಾಲಿ ರಾಜ್ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.