
ನವಿ ಮುಂಬೈ: 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿಂದು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕಿ ಅಲಿಸಾ ಹೀಲಿ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯ ವಹಿಸಿದೆ.
ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಆರಂಭಿಕ ಬ್ಯಾಟರ್ ಪ್ರತಿಕಾ ರಾವಲ್, ಬಾಂಗ್ಲಾದೇಶ ಎದುರಿನ ಪಂದ್ಯದ ವೇಳೆ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ಮತ್ತೋರ್ವ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ತಂಡ ಕೂಡಿಕೊಂಡಿದ್ದಾರೆ. ಇದಷ್ಟೇ ಅಲ್ಲದೇ ರಿಚಾ ಘೋಷ್ ಹಾಗೂ ಕ್ರಾಂತಿ ಗೌಡ್ ಕೂಡಾ ಹಾಗೂ ತಂಡ ಕೂಡಿಕೊಂಡಿದ್ದಾರೆ. ಹೀಗಾಗಿ ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ಹರ್ಲಿನ್ ಡಿಯೋಲ್ ಹಾಗೂ ಉಮಾ ಚೆಟ್ರಿಗೆ ವಿಶ್ರಾಂತಿ ನೀಡಲಾಗಿದೆ.
ಆಸ್ಟ್ರೆಲಿಯಾ ತಂಡವು ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಅಜೇಯವಾಗಿಯೇ ಫೈನಲ್ ಪ್ರವೇಶಿಸಿದೆ. ಆಡಿದ 7 ಪಂದ್ಯಗಳ ಪೈಕಿ ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು. 13 ಅಂಕಗಳೊಂದಿಗೆ ಅಗ್ರಸ್ಥಾನಿಯಾಗಿ ಕಾಂಗರೂ ಪಡೆ ಸೆಮೀಸ್ ಪ್ರವೇಶಿಸಿದೆ.
ಇನ್ನೊಂದೆಡೆ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ 3 ಗೆಲುವು ಹಾಗೂ ಮೂರು ಸೋಲು ಹಾಗೂ ಒಂದು ರದ್ದಾದ ಪಂದ್ಯ ಸೇರಿದಂತೆ 7 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಿಯಾಗಿ ಸೆಮೀಸ್ ಪ್ರವೇಶಿಸಿದೆ. ಇಂದು ಗೆಲ್ಲುವ ತಂಡವು ನವೆಂಬರ್ 02ರಂದು ನಡೆಯಲಿರುವ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಎದುರು ಪ್ರಶಸ್ತಿಗಾಗಿ ಕಾದಾಡಲಿದೆ.
ಉಭಯ ತಂಡಗಳ ಆಟಗಾರ್ತಿಯರ ಪಟ್ಟಿ
ಭಾರತ: ಸ್ಮೃತಿ ಮಂಧನಾ, ಶಫಾಲಿ ವರ್ಮಾ, ಅಮನ್‌ಜೋತ್ ಕೌರ್, ಹರ್ಮನ್‌ಪ್ರೀತ್ ಕೌರ್(ನಾಯಕಿ), ಜೆಮಿಯಾ ರೋಡ್ರಿಗ್ಸ್, ದೀಪ್ತಿ ಶರ್ಮಾ, ರಿಚಾ ಘೋಷ್(ವಿಕೆಟ್ ಕೀಪರ್), ಸ್ನೆಹ್ ರಾಣಾ, ಕ್ರಾಂತಿ ಗೌಡ್, ಶ್ರೀ ಚರಣಿ, ರೇಣುಕಾ ಠಾಕೂರ್.
ಆಸ್ಟ್ರೇಲಿಯಾ: ಅಲಿಸಾ ಹೀಲಿ(ನಾಯಕಿ&ವಿಕೆಟ್ ಕೀಪರ್), ಲಿಚ್‌ಫೀಲ್ಡ್, ಎಲೀಸಾ ಪೆರ್ರಿ, ಬೆಥ್ ಮೂನಿ, ಅನಾಬೆಲ್ ಸದರ್‌ಲೆಂಡ್, ಆಶ್ಲೆ ಗಾರ್ಡ್ನರ್, ತಾಹಿಲಾ ಮೆಗ್‌ರಾಥ್, ಸೋಫಿ ಮೋಲಿನಿಕ್ಸ್, ಕಿಮ್ ಗೆರಾತ್, ಅಲಾನಾ ಕಿಂಗ್, ಮೆಗಾನ್ ಶುಟ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.