
ಕೊಲಂಬೊ(ಜು.01): 2011ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಫಿಕ್ಸಿಂಗ್ ನಡೆದಿದೆ ಎನ್ನುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಶ್ರೀಲಂಕಾ ಸರ್ಕಾರ ತನಿಖೆಗೆ ಆದೇಶಿಸಿದ್ದು, ವಿಶೇಷ ಪೊಲೀಸ್ ತಂಡ ತನಿಖೆ ಆರಂಭಿಸಿದೆ.
ಮಾಜಿ ಕ್ರೀಡಾ ಸಚಿವ ಮಹೀಂದ್ರಾನಂದ ಅಲುತ್ಗಾಮಗೆ ಇತ್ತೀಚೆಗೆ ಫಿಕ್ಸಿಂಗ್ ಆರೋಪ ಮಾಡಿದ್ದರು. ಈ ಹಿಂದೆ 1996ರ ವಿಶ್ವಕಪ್ ವಿಜೇತ ನಾಯಕ ಅರ್ಜುಜ ರಣತುಂಗ ಸಹ ಫಿಕ್ಸಿಂಗ್ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದರು. 2011ರ ವಿಶ್ವಕಪ್ ತಂಡವನ್ನು ಆಯ್ಕೆ ಮಾಡಿದ್ದ ಮಾಜಿ ಆಟಗಾರ ಅರವಿಂದ ಡಿ ಸಿಲ್ವಾರನ್ನೂ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ವಿಶೇಷ ತನಿಖಾ ತಂಡ ಲಂಕಾ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಉಪುಲ್ ತರಂಗಾ ಅವರನ್ನು ತನಿಖೆಗೆ ಕರೆಯುವ ಸಾಧ್ಯತೆಯಿದೆ. 2011ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ತರಂಗಾ 30 ನಿಮಿಷಗಳ ಕಾಲ ಕ್ರೀಸ್‌ನಲ್ಲಿದ್ದು, 20 ಎಸೆತಗಳನ್ನು ಎದುರಿಸಿ ಕೇವಲ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ 2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಸಚಿನ್ ತೆಂಡುಲ್ಕರ್‌ಗೆ ಸ್ಮರಣೀಯ ಗೌರವವನ್ನು ಟೀಂ ಇಂಡಿಯಾ ಅರ್ಪಿಸಿತ್ತು.
ಕೊರೋನಾ ಟೆಸ್ಟ್ ಪಾಸಾದ ಇಂಗ್ಲೆಂಡ್,ಪಾಕ್ ಕ್ರಿಕೆಟಿಗರು
ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ಮಹೆಲಾ ಜಯವರ್ಧನೆ ಆಕರ್ಷಕ ಶತಕದ ನೆರವಿನಿಂದ ನಿಗಧಿತ 50 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 274 ರನ್ ಬಾರಿಸಿತ್ತು. ಬಳಿಕ ಆರಂಭದಲ್ಲೇ ವಿರೇಂದ್ರ ಸೆಹ್ವಾಗ್ ಹಾಗೂ ಸಚಿನ್ ತೆಂಡುಲ್ಕರ್ ವಿಕೆಟ್ ಕಬಳಿಸುವ ಮೂಲಕ ಲಂಕಾ ಮೇಲುಗೈ ಸಾಧಿಸಿತ್ತು. ಆ ಬಳಿಕ ನಾಟಕೀಯವಾಗಿ ಲಂಕಾ ಹಿನ್ನೆಡೆ ಅನುಭವಿಸಿತ್ತು. ಧೋನಿ-ಗಂಭೀರ್ ಆಕರ್ಷಕ ಶತಕದ ಜತೆಯಾಟದ ನೆರವಿನಿಂದ ಭಾರತ 28 ವರ್ಷಗಳ ಬಳಿಕ ವಿಶ್ವಕಪ್ ಎತ್ತಿಹಿಡಿದು ಸಂಭ್ರಮಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.