ಟೀಂ ಇಂಡಿಯಾ ಜೊತೆ ಕೊಹ್ಲಿ IPL ನಾಯಕತ್ವ ಹೋಲಿಕೆ ಬೇಡ-ಗಂಗೂಲಿ!

Published : May 15, 2019, 11:03 AM IST
ಟೀಂ ಇಂಡಿಯಾ ಜೊತೆ  ಕೊಹ್ಲಿ IPL ನಾಯಕತ್ವ ಹೋಲಿಕೆ ಬೇಡ-ಗಂಗೂಲಿ!

ಸಾರಾಂಶ

ವಿರಾಟ್ ಕೊಹ್ಲಿ ಐಪಿಎಲ್ ನಾಯಕತ್ವವನ್ನು ಟೀಂ ಇಂಡಿಯಾ ಜೊತೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಗಂಗೂಲಿ ಸೂಚಿಸಿದ್ದಾರೆ. ವಿಶ್ವಕಪ್ ಟೂರ್ನಿ ಹಾಗೂ ಟೀಂ ಇಂಡಿಯಾ ಕುರಿತು ಗಂಗೂಲಿ ಹೇಳಿದ್ದೇನು? ಇಲ್ಲಿದೆ ವಿವರ.

ಕೋಲ್ಕತಾ(ಮೇ.15): ಐಪಿಎಲ್ ಟೂರ್ನಿ ಮುಗಿಸಿರುವ ಟೀಂ ಇಂಡಿಯಾ ಕ್ರಿಕೆಟಿಗರು ಇದೀಗ ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿದ್ದಾರೆ. ಇದರ ಬೆನ್ನಲ್ಲೇ ಐಪಿಎಲ್ ಟೂರ್ನಿ ಪ್ರದರ್ಶನದ  ಹೋಲಿಕೆ ಕೂಡ ನಡೆಯುತ್ತಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮಾಜಿ ನಾಯಕ ಸೌರವ್ ಗಂಗೂಲಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ 2019: ಸೆಮಿಫೈನಲ್‌ಗೆ ಯಾವ ತಂಡ? ಭವಿಷ್ಯ ನುಡಿದ ಗಂಗೂಲಿ!

ಐಪಿಎಲ್ ನಾಯಕತ್ವವನ್ನು ಟೀಂ ಇಂಡಿಯಾ ಜೊತೆ ಹೋಲಿಕೆ ಮಾಡುವುದು ಸರಿಯಲ್ಲ. ಐಪಿಎಲ್ ಟೂರ್ನಿಯಲ್ಲಿ ಕೊಹ್ಲಿ ನಾಯಕನಾಗಿ ವಿಫಲರಾಗಿದ್ದಾರೆ. ಆದರ ಟೀಂ  ಇಂಡಿಯಾ ಕಂಡ ಯಶಸ್ವಿ ನಾಯಕ ಕೊಹ್ಲಿ. 2019ರ ವಿಶ್ವಕಪ್ ಟೂರ್ನಿಯಲ್ಲಿ ಕೊಹ್ಲಿಗೆ ಸಲಹೆ ನೀಡಲು ಎಂ.ಎಸ್.ಧೋನಿ ಹಾಗೂ ರೋಹಿತ್ ಶರ್ಮಾ ಕೂಡ ತಂಡದಲ್ಲಿದ್ದಾರೆ ಎಂದು ಗಂಗೂಲಿ ಹೇಳಿದ್ದಾರೆ.

ಇದನ್ನೂ ಓದಿ: ಕೊಹ್ಲಿ ನಾಯಕತ್ವಕ್ಕೆ ಅಪಸ್ವರವೆತ್ತಿದ ಗಂಭೀರ್‌ಗೆ ಗಂಗೂಲಿ ತಿರುಗೇಟು!

ಮೇ.20 ರಿಂದ  ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಪ್ರತಿಷ್ಠಿತ ಟೂರ್ನಿಗೆ ಇಂಗ್ಲೆಂಡ್ ಆತಿಥ್ಯ ವಹಿಸಿದೆ. ಜೂನ್ 5 ರಂದು ಸೌತ್ಆಫ್ರಿಕಾ ವಿರುದ್ಧ ಭಾರತ ಮೊದಲ ಪಂದ್ಯ ಆಡಲಿದೆ. ಜುಲೈ 14 ರಂದು  ಲಾರ್ಡ್ಸ್ ಮೈದಾನದಲ್ಲಿ ಫೈನಲ್ ಪಂದ್ಯ ಆಯೋಜಿಸಲಾಗಿದೆ.  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?