ಭಾರತ ಹಾಗೂ ಪಾಕಿಸ್ತಾನ ತಂಡಗಳು ಕೊನೆಯ ಬಾರಿಗೆ 2019ರ ಏಕದಿನ ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಿದ್ದವು. ರೋಹಿತ್ ಶರ್ಮಾ ಬಾರಿಸಿದ ಸ್ಪೋಟಕ 140 ರನ್‌ಗಳ ನೆರವಿನಿಂದ ಟೀಂ ಇಂಡಿಯಾ 336 ರನ್ ಕಲೆಹಾಕಿತ್ತು. ಇನ್ನು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದರಿಂದಾಗಿ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ ಭಾರತ ತಂಡವು 89 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿ ಬೀಗಿತ್ತು.
ಅಹಮದಾಬಾದ್(ಅ.13): ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿ ಮುಖಾಮುಖಿಯಾಗಿ 41 ವರ್ಷಗಳಾಗಿವೆ. ಆದರೆ ಇದುವರೆಗೂ ಭಾರತ ಎದುರು ಏಕದಿನ ವಿಶ್ವಕಪ್‌ನಲ್ಲಿ ಗೆಲ್ಲಲು ಪಾಕಿಸ್ತಾನ ತಂಡಕ್ಕೆ ಸಾಧ್ಯವಾಗಿಲ್ಲ. ಇದೀಗ ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ಮುಖಾಮುಖಿಗೆ ವೇದಿಕೆ ಸಜ್ಜಾಗಿದೆ. ಅಕ್ಟೋಬರ್ 14ರಂದು ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಹೀಗಿರುವಾಗಲೇ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ, ಖಡಕ್ ವಾರ್ನಿಂಗ್ ನೀಡಿದ್ದಾರೆ.
ಭಾರತ ತಂಡವು ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನ ವಿರುದ್ದ 7 ಪಂದ್ಯಗಳನ್ನಾಡಿದ್ದು, ಏಳು ಪಂದ್ಯಗಳಲ್ಲೂ ಗೆಲುವಿನ ನಗೆ ಬೀರಿದೆ. ಈ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಬಾಬರ್ ಅಜಂ, "ನಾವು ಈ ಹಿಂದಿನ ಫಲಿತಾಂಶ ಏನಾಗಿದೆ ಎನ್ನುವುದರ ಬಗ್ಗೆ ಹೆಚ್ಚು ಆಲೋಚನೆ ಮಾಡುವುದಿಲ್ಲ. ನಮ್ಮ ಗಮನವೇನಿದ್ದರೂ, ಮುಂದೇನು ಮಾಡಬೇಕು ಎನ್ನುವುದರ ಕುರಿತಾಗಿದೆ. ರೆಕಾರ್ಡ್ಸ್‌ಗಳು ಇರುವುದೇ ಮುರಿಯುವುದಕ್ಕಾಗಿ. ನಾವು ಶಕ್ತಿ ಮೀರಿ ಹೋರಾಟ ಮಾಡುವ ಮೂಲಕ, ಈ ದಾಖಲೆ ಮುರಿಯಲು ಎದುರು ನೋಡುತ್ತಿದ್ದೇವೆ. ನಾಳೆ ನಾವು ಚೆನ್ನಾಗಿ ಆಡುವ ವಿಶ್ವಾಸವನ್ನು ಹೊಂದಿದ್ದೇವೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವು ಆ ದಿನ ಯಾರು ಚೆನ್ನಾಗಿ ಆಡುತ್ತಾರೋ ಪಂದ್ಯ ಅವರ ಪಾಲಾಗಲಿದೆ. ನಮ್ಮ ಹುಡುಗರು ಆ ಬಿಗ್ ಡೇ ನಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ಬಾಬರ್ ಅಜಂ ಹೇಳಿದ್ದಾರೆ.
undefined
ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿ ಗೆದ್ದ ಶುಭ್‌ಮನ್ ಗಿಲ್..! ಸಚಿನ್ ಪುತ್ರಿಯ ಪೋಸ್ಟ್ ಮತ್ತೆ ವೈರಲ್
ಭಾರತ ಹಾಗೂ ಪಾಕಿಸ್ತಾನ ತಂಡಗಳು ಕೊನೆಯ ಬಾರಿಗೆ 2019ರ ಏಕದಿನ ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಿದ್ದವು. ರೋಹಿತ್ ಶರ್ಮಾ ಬಾರಿಸಿದ ಸ್ಪೋಟಕ 140 ರನ್‌ಗಳ ನೆರವಿನಿಂದ ಟೀಂ ಇಂಡಿಯಾ 336 ರನ್ ಕಲೆಹಾಕಿತ್ತು. ಇನ್ನು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದರಿಂದಾಗಿ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ ಭಾರತ ತಂಡವು 89 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿ ಬೀಗಿತ್ತು.
ಇನ್ನು ಹೈವೋಲ್ಟೇಜ್ ಪಂದ್ಯದ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಾಬರ್ ಅಜಂ, "ನಿಜ ಹೇಳಬೇಕೆಂದರೆ, ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವು ಸಾಕಷ್ಟು ಪೈಪೋಟಿಯಿಂದ ಕೂಡಿರುವ ನಿರೀಕ್ಷೆಯಿದೆ. ಮಹತ್ವದ ಪಂದ್ಯದಲ್ಲಿ ನಾವು ನಮ್ಮ ಅದ್ಭುತ ಪ್ರದರ್ಶನ ತೋರಲು ಎದುರು ನೋಡುತ್ತಿದ್ದೇವೆ. ಅಹಮದಾಬಾದ್ ಒಂದು ದೊಡ್ಡ ಸ್ಟೇಡಿಯಂ. ಸಾಕಷ್ಟು ಫ್ಯಾನ್ಸ್ ಕೂಡ ಪಂದ್ಯ ವೀಕ್ಷಿಸಲು ಬಂದಿರುತ್ತಾರೆ. ಹೀಗಾಗಿ ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಲು ಸುವರ್ಣಾವಕಾಶವಾಗಿದೆ" ಎಂದು ಬಾಬರ್ ಅಜಂ ಹೇಳಿದ್ದಾರೆ.