ಅಕ್ಟೋಬರ್ 05ರಂದು ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಇದೇ ಮೊದಲ ಬಾರಿಗೆ ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ 2019ರ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ.
ನವದೆಹಲಿ(ಅ.01): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ಆರಂಭವಾಗಲಿದ್ದು, ನವೆಂಬರ್ 19ರ ವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯವನ್ನು ವಹಿಸಿದೆ. ದಶಕದ ಬಳಿಕ ಟೀಂ ಇಂಡಿಯಾ ಐಸಿಸಿ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿದೆ. ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಮಧ್ಯಮ ಕ್ರಮಾಂಕ ಹೇಗಿರಲಿದೆ ಎನ್ನುವುದರ ಕುರಿತಂತೆ ಭವಿಷ್ಯ ನುಡಿದಿದ್ದಾರೆ.
ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಆಕರ್ಷಕ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್, ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 4ನೇ ಕ್ರಮಾಂಕದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ ಎಂದು ವೀರೂ ಅಭಿಪ್ರಾಯಪಟ್ಟಿದ್ದಾರೆ. ಗಾಯದ ಬಳಿಕ ಕಮ್‌ಬ್ಯಾಕ್ ಮಾಡಿರುವ ಶ್ರೇಯಸ್ ಅಯ್ಯರ್, ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪರ ಮಧ್ಯಮ ಕ್ರಮಾಂಕದ ವಿಭಾಗದಲ್ಲಿ 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, 5ನೇ ಕ್ರಮಾಂಕದಲ್ಲಿ ಕೆ ಎಲ್ ರಾಹುಲ್ ಹಾಗೂ ಆರನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಆಡಲಿದ್ದಾರೆ ಎಂದು ವಿರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಅನುಮಾನ ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.
undefined
ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾದ ಆಫರ್ ತಿರಸ್ಕರಿಸಿದ 'ಡೂಪ್ಲಿಕೇಟ್ ಅಶ್ವಿನ್'..!
"ನಂ.6 ಹಾಗೂ ನಂ.7ನೇ ಕ್ರಮಾಂಕದಲ್ಲಿ ಕೆ ಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಆಡಬಹುದು. ಹೀಗಾಗಿ ಈ ಸ್ಲಾಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಆಡಲು ಅವಕಾಶ ಸಿಗುವ ಸಾಧ್ಯತೆ ಕಡಿಮೆ. ನಂ.5ನೇ ಕ್ರಮಾಂಕದಲ್ಲೂ ಕಷ್ಟ. ಒಂದು ವೇಳೆ ಹಾರ್ದಿಕ್ ಪಾಂಡ್ಯ ಆರನೇ ಬೌಲರ್ ಆಗಿ ಕಣಕ್ಕಿಳಿದರೆ, ಕೆ ಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಕ್ರಮವಾಗಿ 5 ಹಾಗೂ 6ನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇದಾದ ಬಳಿಕ ಬೌಲರ್‌ಗಳು ಕಣಕ್ಕಿಳಿಯಲಿದ್ದಾರೆ. ಇಶಾನ್ ಕಿಶನ್ ಆಡುವ ಹನ್ನೊಂದರ ಬಳಗದಲ್ಲಿ ಎಲ್ಲಿಯಾದರೂ ಸ್ಥಾನ ಪಡೆಯಬಹುದು ಎಂದು ಭಾವಿಸಿದ್ದೆವು. ಆದರೆ ಶ್ರೇಯಸ್ ಅಯ್ಯರ್ ಶತಕ ಸಿಡಿಸಿದ್ದರಿಂದ ಹಾಗೂ ಒಳ್ಳೆಯ ಲಯದಲ್ಲಿ ಇರುವುದರಿಂದ ಅಯ್ಯರ್ ನಾಲ್ಕನೇ ಕ್ರಮಾಂಕವನ್ನು ಭದ್ರಪಡಿಸಿಕೊಂಡಿದ್ದಾರೆ. ಹೀಗಾಗಿ 4-5-6ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಸ್ಥಾನ ಪಡೆಯಲಿದ್ದಾರೆ" ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.
ಅಕ್ಟೋಬರ್ 05ರಂದು ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಇದೇ ಮೊದಲ ಬಾರಿಗೆ ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ 2019ರ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಇನ್ನು ಅತಿಥೇಯ ಭಾರತ ಕ್ರಿಕೆಟ್ ತಂಡವು ಅಕ್ಟೋಬರ್ 08ರಂದು 5 ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ದ ಚೆನ್ನೈನಲ್ಲಿ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.
ಕ್ರಿಕೆಟ್ ಪ್ರೇಮಿಗಳಿಗಿನ್ನು ವಿಶ್ವಕಪ್ ಫೀವರ್..! ವಿಶ್ವಕಪ್ ಹುಟ್ಟಿನ ಗುಟ್ಟೇನು?
ವಿಶ್ವಕಪ್‌ಗೆ ಭಾರತ ತಂಡ:
ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ(ಉಪನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್ ಬುಮ್ರಾ, ಮೊಹಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮದ್ ಶಮಿ, ಆರ್.ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.