ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ಲೇಯಿಂಗ್ 11 ಪ್ರಕಟಿಸಿದ ಭಾರತ; ಅಶ್ವಿನ್, ಜಡ್ಡುಗೆ ಸ್ಥಾನ!

By Suvarna News  |  First Published Jun 17, 2021, 8:21 PM IST
  • ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಭಾರತ ತಂಡ ಪ್ರಕಟ
  • ನ್ಯೂಜಿಲೆಂಡ್ ವಿರುದ್ಧ ಜೂನ್ 18 ರಿಂದ ಫೈನಲ್ ಪಂದ್ಯ
  • ಅಶ್ವಿನ್, ಜಡೇಜಾ ಸೇರಿದಂತೆ ಬಲಿಷ್ಠ ತಂಡ ಪ್ರಕಟಿಸಿದ ಭಾರತ

ಸೌಥಾಂಪ್ಟನ್(ಜೂ.17): ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಟೆಸ್ಟ್ ಪಂದ್ಯಕ್ಕೆ ಕೌಂಟ್‌ಡೌನ್ ಆರಂಭಗೊಂಡಿದೆ. ನಾಳೆ(ಜೂ.18) ಆರಂಭಗೊಳ್ಳಲಿರುವ ಪ್ರತಿಷ್ಠಿತ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ 11 ಪ್ರಕಟಿಸಿದೆ. ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ತಂಡದಲ್ಲಿ ಅಲ್ರೌಂಡರ್ ಕೋಟಾದಲ್ಲಿ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಇಬ್ಬರು ಸ್ಥಾನ ಪಡೆದಿದ್ದಾರೆ.

ಟೆಸ್ಟ್‌ ರ‍್ಯಾಂಕಿಂಗ್‌‌: 4ನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ

Tap to resize

Latest Videos

undefined

ನ್ಯೂಜಿಲೆಂಡ್ ವಿರುದ್ಧದ ಈ ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್ ಪಂದ್ಯ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ವಿಶ್ವದ ಬಲಿಷ್ಠ ಟೆಸ್ಟ್ ತಂಡ ಯಾವುದು ಅನ್ನೋದು ಈ ಪಂದ್ಯದ ಮೂಲಕ ನಿರ್ಧಾರವಾಗಲಿದೆ. ಈ ಪ್ರತಿಷ್ಠಿತ ಪಂದ್ಯಕ್ಕೆ ವಿರಾಟ್ ಕೊಹ್ಲಿ ನೇತೃತ್ವದ ಆಡೋ 11ರ ಬಳಗವನ್ನು ಪಂದ್ಯಕ್ಕೆ ಒಂದು ದಿನ ಮೊದಲೆ ಪ್ರಕಟಿಸಲಾಗಿದೆ.

ವಿಕೆಟ್ ಕೀಪರ್‌ ಪೈಕಿ ರಿಷಬ್ ಪಂತ್ ಸ್ಥಾನ ಪಡೆದಿದ್ದಾರೆ. ಇನ್ನು ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ ಜೊತೆಗೆ ಇಶಾಂತ್ ಶರ್ಮಾ ಹಾಗೂ ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ. 

ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಭಾರತ, ಕಿವೀಸ್ ಸಿದ್ದತೆ ಹೇಗಿದೆ?

ಟೀಂ ಇಂಡಿಯಾ ಪ್ಲೇಯಿಂಗ್ 11:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ ಶುಭ್‌ಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ರಿಷಬ್ ಪಂತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ

 

🚨 NEWS 🚨

Here's 's Playing XI for the Final 💪 👇 pic.twitter.com/DiOBAzf88h

— BCCI (@BCCI)
click me!