ಮುಂಬೈ(ಜೂ.15): ಪ್ರತಿಷ್ಠಿತ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಆರಂಭಗೊಂಡಿದೆ. ಜೂನ್ 18 ರಿಂದ ಸೌಥಾಂಪ್ಟನ್‌ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಬಿಸಿಸಿಐ 15 ಸದಸ್ಯರ ತಂಡ ಪ್ರಕಟಿಸಿದೆ. ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ, ಬಲಿಷ್ಠ ನ್ಯೂಜಿಲೆಂಡ್ ಎದುರಿಸಲು ಸಜ್ಜಾಗಿದೆ.
ಮುಂದಿನ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಕೆಲ ಬದಲಾವಣೆ ತರಲು ಮುಂದಾದ ಐಸಿಸಿ.
ಕೊಹ್ಲಿ ತಂಡ ಮುನ್ನಡೆಸಿದರೆ, ಎಂದಿನಂತೆ ಅಜಿಂಕ್ಯ ರಹಾನೆ ಉಪನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಇನ್ನು 15 ಸದಸ್ಯರ ತಂಡದಲ್ಲಿ ಆಲ್ರೌಂಡರ್ ಕೋಟಾದಲ್ಲಿ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಸ್ಥಾನ ಪಡೆದಿದ್ದಾರೆ. ಇನ್ನು ವಿಕೆಟ್ ಕೀಪರ್ ವೃದ್ಧಿಮಾನ್ ಸಾಹ ಹಾಗೂ ರಿಷಬ್ ಪಂತ್ ಕೂಡ ಸ್ಥಾನ ಪಡೆದಿದ್ದಾರೆ. ಆದರೆ ಅಂತಿಮ 11ರ ಬಳಗದಲ್ಲಿ ಯಾರು ಸ್ಥಾನ ಉಳಿಸಿಕೊಳ್ಳಲಿದ್ದಾರೆ ಅನ್ನೋ ಕುತೂಹಲ ಇದೀಗ ಮನೆ ಮಾಡಿದೆ.
ಬಿಸಿಸಿಐ ಪ್ರಕಟಿಸಿದ 15 ಸದಸ್ಯರ ತಂಡ ಇಲ್ಲಿದೆ.
ರೋಹಿತ್ ಶರ್ಮಾ, ಶುಭ್‌ಮಾನ್ ಗಿಲ್, ಚೇತೇಶ್ವರ್ ಪೂಜಾರಾ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಹನುಮಾ ವಿಹಾರಿ, ರಿಷಬ್ ಪಂತ್, ವೃದ್ಧಿಮಾನ್ ಸಾಹ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
🗒️ announce their 15-member squad for the Final 💪 👇 pic.twitter.com/ts9fK3j89t
— BCCI (@BCCI)ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ಬಹುಮಾನ ಮೊತ್ತ ಪ್ರಕಟಿಸಿದ ಐಸಿಸಿ
ಟೀಂ ಇಂಡಿಯಾಗೂ ಮೊದಲು ನ್ಯೂಜಿಲೆಂಡ್ ತಂಡ 15 ಸದಸ್ಯರ ತಂಡ ಪ್ರಕಟಿಸಿದೆ. ಕೇನ್ ವಿಲಿಯಮ್ಸನ್ ನಾಯಕತ್ವದ ತಂಡದಲ್ಲಿ ರಾಸ್ ಟೇಲರ್, ಟ್ರೆಂಟ್ ಬೌಲ್ಟ್ ಸೇರಿದಂತೆ ಸ್ಟಾರ್ ಕ್ರಿಕೆಟಿಗರು ಸ್ಥಾನ ಪಡೆದಿದ್ದಾರೆ.
ನ್ಯೂಜಿಲೆಂಡ್ 15 ಸದಸ್ಯರ ತಂಡ:
ಕೇನ್ ವಿಲಿಯಮ್ಸನ್, ಟಾಮ್ ಬ್ಲೆಂಡಲ್, ಟ್ರೆಂಟ್ ಬೌಲ್ಟ್, ಡೆವೊನ್ ಕೊನ್‌ವೆ, ಕೊಲಿನ್ ಡೆ ಗ್ರ್ಯಾಂಡ್‌ಹೊಮ್ಮೆ, ಮ್ಯಾಟ್ ಹೆನ್ರಿ, ಕೈಲ್ ಜ್ಯಾಮಿಸನ್, ಟಾಮ್ ಲಾಥಮ್, ಹೆನ್ರಿ ನಿಕೋಲಸ್, ಆಜಾಝ್ ಪಟೇಲ್, ಟಿಮ್ ಸೌಥಿ, ರಾಸ್ ಟೇಲರ್, ನೈಲ್ ವ್ಯಾಗ್ನರ್, ಬಿಜೆ ವಾಲ್ಟಿಂಗ್, ವಿಲ್ ಯಂಗ್