
ಮುಂಬೈ(ಮೇ.07): ಐಪಿಎಲ್ ಟೂರ್ನಿ ರದ್ದಾಗಿರುವ ಕಾರಣ ಇದೀಗ ಟೀಂ ಇಂಡಿಯಾ ಕ್ರಿಕೆಟಿಗರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ. ಇದರ ನಡುವೆ ಬಿಸಿಸಿಐ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದೆ.
ಕೋವಿಡ್ ಪರಿಹಾರ ನಿಧಿಗೆ ವಿರುಷ್ಕಾ 2 ಕೋಟಿ ರೂ ದೇಣಿಗೆ, 7 ಕೋಟಿ ಸಂಗ್ರಹಿಸುವ ಗುರಿ.
ಸೌಥ್ಆ್ಯಂಪ್ಟನ್‌ನಲ್ಲಿ ಜೂನ್ 18 ರಿಂದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಆರಂಭಗೊಳ್ಳಲಿದೆ. ಇದಕ್ಕೆ ತಂಡದಲ್ಲೆ ಕೆಲ ಮಹತ್ವದ ಬದಲಾವಣೆ ಮಾಡಲಾಗಿದೆ. ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ತಂಡ ಸೇರಿಕೊಂಡಿದ್ದಾರೆ.
ಕೆಎಲ್ ರಾಹುಲ್ ಹಾಗೂ ವೃದ್ಧಿಮಾನ್ ಶಾ ಫಿಟ್ನೆಸ್ ಟೆಸ್ಟ್ ಕ್ಲೀಯರ್ ಮಾಡಬೇಕಿದೆ. ಆದರೆ ಹಾರ್ದಿಕ್ ಪಾಂಡ್ಯ, ಪೃಥ್ವಿ ಶಾ ಹಾಗೂ ಕುಲ್ದೀಪ್ ಯಾದವ್ ತಂಡದಿಂದ ಹೊರಬಿದ್ದಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ, ಟೆಸ್ಟ್ ಚಾಂಪಿಯನ್‌ಶಿಪ್ ಗೆಲುವಿನ ವಿಶ್ವಾಸದಲ್ಲಿದೆ.
ಬಯೋ ಬಬಲ್ ಲೋಪ ಹೇಗಾಯ್ತು ತಿಳಿಯುತ್ತಿಲ್ಲ: ಸೌರವ್ ಗಂಗೂಲಿ
ಟೀಂ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ಶುಭ್‌ಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಹನುಮಾ ವಿಹಾರಿ, ರಿಷಬ್ ಪಂತ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ವಾಶಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್
ಸ್ಟಾಂಡ್ ಬೈ ಆಟಗಾರರು:
ಅಭಿಮನ್ಯು ಈಶ್ವರನ್, ಪ್ರಸಿದ್ಧ ಕೃಷ್ಣ, ಅವೇಶ್ ಖಾನ್, ಅರ್ಜಾನ್ ನಾಗ್ವಾಸವಲ್ಲ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.