WPL 2023 Final ಪ್ರಶಸ್ತಿಗಾಗಿ ಹೋರಾಟ, ಮುಂಬೈ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್!

Published : Mar 26, 2023, 07:05 PM ISTUpdated : Mar 26, 2023, 07:25 PM IST
WPL 2023 Final ಪ್ರಶಸ್ತಿಗಾಗಿ ಹೋರಾಟ, ಮುಂಬೈ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್!

ಸಾರಾಂಶ

ಇದೇ ಮೊದಲ ಬಾರಿಗೆ ಆಯೋಜನೆಗೊಂಡ ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಗೆ ಇಂದು ತೆರೆಬೀಳುತ್ತಿದೆ. ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ಮುಂಬೈ(ಮಾ.26):  ಚೊಚ್ಚಲ ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಗೆ ಇಂದಿನ ಫೈನಲ್ ಪಂದ್ಯದೊಂದಿಗೆ ತೆರೆ ಬೀಳಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪ್ರಶಸ್ತಿಗಾಗಿ ಹೋರಾಟ ಮಾಡುತ್ತಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.  ಮುಂಬೈನ ಬ್ರೇಬೋರ್ನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ರೋಚಕ ಪಂದ್ಯದಲ್ಲಿ ಯಾರು ಪ್ರಶಸ್ತಿಗೆ ಮುತ್ತಿಕ್ಕುತ್ತಾರೆ ಅನ್ನೋ ಕುತೂಹಲ ಹೆಚ್ಚಾಗಿದೆ.  

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11
ಮೆಗ್ ಲ್ಯಾನಿಂಗ್(ನಾಯಕಿ), ಶೆಫಾಲಿ ವರ್ಮಾ, ಜೇಮಿಯಾ ರೋಡ್ರಿಗೆಸ್, ಮಾರಿಜಾನೆ ಕ್ಯಾಪ್, ಆಲಿಸ್ ಕ್ಯಾಪ್ಸಿ, ಜೆಸ್ ಜೋನಾಸನ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ, ಮಿನ್ನು ಮಣಿ, ರಾಧಾ ಯಾದವ್, ಶಿಖಾ ಪಾಂಡೆ 

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ಯಾಸ್ತಿಕಾ ಭಾಟಿಯಾ, ಹೀಲೇ ಮ್ಯಾಥ್ಯೂಸ್, ನ್ಯೂಟ್ ಸ್ಕಿವಿಯರ್ ಬ್ರಂಟ್, ಹರ್ಮನ್‌ಪ್ರೀತ್ ಕೌರ್(ನಾಯಕಿ), ಮೀಲೆ ಕೆರ್, ಪೂಜಾ ವಸ್ತ್ರಾಕರ್, ಇಸಿ ವಾಂಗ್, ಅಮನಜೋತ್ ಕೌರ್, ಹುಮೈರಾ ಕಾಜಿ, ಜಿಂತಮಣಿ ಕಲಿತಾ, ಸೈಕಾ ಇಶಾಖ್ 

RCB Unbox ಕಾರ್ಯಕ್ರಮ ಕಣ್ತುಂಬಿಕೊಳ್ಳಲು ಕಿಕ್ಕಿರಿದು ಸೇರಿದ ಆರ್‌ಸಿಬಿ ಫ್ಯಾನ್ಸ್‌..!

ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ನೇರವಾಗಿ ಫೈನಲ್ ಪ್ರವೇಶಿಸಿದೆ. ಇತ್ತ ಮುಂಬೈ ಇಂಡಿಯನ್ಸ್ ಲೀಗ್ ಹಂತದಲ್ಲಿ 2 ಸೋಲು ಅನುಭವಿಸಿ ನೆಟ್ ರನ್‌ರೇಟ್ ಕುಸಿತ ಕಂಡಿತ್ತು. ಹೀಗಾಗಿ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ. ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಹಾಗೂ ಮುಂಬೈ ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿದೆ.

ಮುಂಬೈ ಇಂಡಿಯನ್ಸ್ ತಂಡಕ್ಕೆ ಹರ್ಮನ್ ಪ್ರೀತ್ ಕೌರ್ ನಾಯಕಿಯಾಗಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಸ್ಟ್ರೇಲಿಯಾದ ಲ್ಯಾನಿಂಗ್‌ ನಾಯಕಿ. ಪ್ರಶಸ್ತಿ ಸುತ್ತಿನ ಹೋರಾಟದಲ್ಲಿ ಲ್ಯಾನಿಂಗ್ ಹೆಚ್ಚು ಯಶಸ್ಸು ಸಾಧಿಸಿದ್ದಾರೆ. ಇತ್ತೀಚೆಗೆ ನಡೆದ ಟಿ20 ಮಹಿಳಾ ವಿಶ್ವಕಪ್ ಟೂರ್ನಿ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಆಸೀಸ್ ಬಗ್ಗು ಬಡಿದಿತ್ತು. ಇಷ್ಟೇ ಫೈನಲ್ ಪಂದ್ಯದಲ್ಲಿ ಟ್ರೋಫಿ ಗೆದ್ದುಕೊಂಡಿತ್ತು.

ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಡೆಲ್ಲಿ ಹಾಗೂ ಮುಂಬೈ ತಂಡ ಎರಡು ಬಾರಿ ಮುಖಾಮುಖಿಯಾಗಿದೆ. ಎರಡೂ ತಂಡಗಳು ಒಂದೊಂದು ಗೆಲುವು ದಾಖಲಿಸಿದೆ.  

ನಮಸ್ಕಾರ ಬೆಂಗಳೂರು, ಎಂಜಾಯ್ ಮಾಡಿ, ಓಡು ಗುರು: ವಿರಾಟ್ ಕೊಹ್ಲಿ ಕನ್ನಡ ಪ್ರೀತಿಗೆ ಫ್ಯಾನ್ಸ್ ಫಿದಾ..!

ಟೂರ್ನಿಯಲ್ಲಿ ಗರಿಷ್ಠ ರನ್ ಸಿಡಿಸಿದ ಪಟ್ಟಿಯಲ್ಲಿ ಡೆಲ್ಲಿ ನಾಯಕಿ ಲ್ಯಾನಿಂಗ್ ಮೊದಲ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ತಂಡದ ನ್ಯಾಟ್ ಸ್ಕೀವಿಯರ್ ಎರಡನೇ ಸ್ಥಾನದಲ್ಲಿದ್ದಾರೆ. ಲ್ಯಾನಿಂಗ್ 310 ರನ್ ಸಿಡಿಸಿದ್ದರೆ, ಸ್ಕೀವಿಯರ್ 272 ರನ್ ದಾಖಲಿಸಿದ್ದಾರೆ. ಇನ್ನು ಗರಿಷ್ಠ ವಿಕೆಟ್ ಸಾಧನೆಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸೈಕಾ ಇಶಾಖ್ 15 ವಿಕೆಟ್ ಪೆಡೆದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಖಾ ಪಾಂಡೆ 10 ವಿಕೆಟ್ ಕಬಳಿಸಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!