
ಮುಂಬೈ(ಮಾ.01): ಮಹಿಳಾ ಐಪಿಎಲ್ ಟೂರ್ನಿಗೆ ಕೌಂಟ್‌ಡೌನ್ ಶುರುವಾಗಿದೆ. ಮಾರ್ಚ್ 4 ರಂದು ಚೊಚ್ಚಲ ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿ ಆರಂಭಗೊಳ್ಳುತ್ತಿದೆ. ಉದ್ಘಟನಾ ಪಂದ್ಯಕ್ಕೂ ಮೊದಲು ಅದ್ಧೂರಿ ಒಪನಿಂಗ್ ಸೆರೆಮನಿ ಆಯೋಜಿಸಲಾಗಿದೆ. ಬಾಲಿವುಡ್ ನಟಿ ಕೃತಿ ಸನನ್, ಕಿಯಾರ ಅಡ್ವಾನಿ ಹೆಜ್ಜೆ ಹಾಕಲಿದ್ದಾರೆ. ಇದರ ಜೊತೆಗೆ ಕೆನಡಾದ ಖ್ಯಾತ ಸಿಂಗ್ AP ದಿಲೋನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮಾರ್ಚ್ 4 ರಂದು ಸಂಜೆ 5.30ಕ್ಕೆ ಉದ್ಘಾಟನಾ ಸಮಾರಂಭ ಆರಂಭಗೊಳ್ಳಲಿದೆ. ಒಪನಿಂಗ್ ಸೆರಮನಿ ಹಾಗೂ ಉದ್ಘಾಟನಾ ಪಂದ್ಯಕ್ಕೆ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಸಕಲ ರೀತಿಯಲ್ಲೂ ಸಜ್ಜಾಗಿದೆ.
ಬಾಲಿವುಡ್ ನಟಿಯರು, ಕೆನಡಾ ಸಿಂಗರ್ ಸೇರಿದಂತೆ ಹಲವು ಕಾರ್ಯಕ್ರಮಗಳು ಒಪನಿಂಗ್ ಸೆರಮನಿಯಲ್ಲಿ ಮೇಳೈಸಲಿದೆ. ಉದ್ಘಾಟನಾ ಸಮಾರಂಭದ ಬಳಿಕ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಹೋರಾಟ ನಡೆಸಲಿದೆ. ಸಂಜೆ 7.30ಕ್ಕೆ ಈ ಪಂದ್ಯ ಆರಂಭಗೊಳ್ಳಲಿದೆ. ಇದರ ಬೆನಲ್ಲೇ ಬಿಸಿಸಿಐ ಮಹಿಳಾ ಪ್ರಿಮೀಯರ್ ಲೀಗ್ ಟೂರ್ನಿ ಪಂದ್ಯಗಳ ಟಿಕೆಟ್ ಮಾರಾಟ ಆರಂಭಗೊಂಡಿದೆ.
ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಪಾಲ್ಗೊಳ್ಳುತ್ತಿರುವ ಟಾಪ್ 10 ಪ್ರತಿಭಾನ್ವಿತ ಕ್ರಿಕೆಟರ್ಸ್..!
ಆನ್‌ಲೈನ್ ಮೂಲಕ ಟಿಕೆಟ್ ಮಾರಾಟ ಆರಂಭಗೊಂಡಿದೆ. ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಗೆ ಅಭಿಮಾನಿಗಳನ್ನು ಸೆಳೆಯಲು ಬಿಸಿಸಿಐ ಅತೀ ಕಡಿಮೆ ಮೊತ್ತದ ಟಿಕೆಟ್ ಘೋಷಿಸಿದೆ. ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯ ಎಲ್ಲಾ 20 ಪಂದ್ಯದ ಟಿಕೆಟ್ 100 ರೂಪಾಯಿಯಿಂದ ಆರಂಭಗೊಳ್ಳುತ್ತಿದೆ. ಟಿಕೆಟ್ ಆನ್‌ಲೈನ್ ಬುಕಿಂಗ್ ಆರಂಭಗೊಂಡಿದೆ. ಇದೀಗ ಮೈದಾನದ ಬಳಿಯ ಕೇಂದ್ರದಲ್ಲಿ ಟಿಕೆಟ್ ಖರೀದಿಗೆ ಇನ್ನಷ್ಟೇ ಚಾಲನೆ ಸಿಗಬೇಕಿದೆ. ಇದರಲ್ಲಿ ಮತ್ತೊಂದು ವಿಶೇಷತೆ ಇದೆ. ಕ್ರೀಡಾಂಗಣದ ಕೇಂದ್ರಕ್ಕೆ ತೆರಳಿ ಟಿಕೆಟ್ ಖರೀದಿಸುವ ಮಹಿಳಾ ಹಾಗೂ ಮಕ್ಕಳಿಗೆ ಬಿಸಿಸಿಐ ವಿಶೇಷ ಆಫರ್ ನೀಡಲಿದೆ.
ಉದ್ಘಟನಾ ಪಂದ್ಯವಾಗಿರುವ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಮೊದಲ ಪಂದ್ಯದ ಟಿಕೆಟ್ ಕ್ರೀಡಾಂಗಣಧ ಕೇಂದ್ರದಿಂದ ಖರೀಗಿಸುವ ಮಹಿಳೆಯರು ಹಾಗೂ ಮಕ್ಕಳಿಗೆ ಉಚಿತವಾಗಿ ನೀಡಲು ಬಿಸಿಸಿಐ ಮುಂದಾಗಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಿದೆ.
ಸ್ಮೃತಿ ಮಂಧನಾಗೆ ಆರ್‌ಸಿಬಿ ಮಹಿಳಾ ತಂಡದ ನಾಯಕಿ ಪಟ್ಟ; ಶುಭ ಕೋರಿದ ಕೊಹ್ಲಿ, ಫಾಫ್ ಡು ಪ್ಲೆಸಿಸ್
ಮಹಿಳಾ ಐಪಿಎಲ್ ಟೈಟಲ್ ಪ್ರಾಯೋಜಕತ್ವಕ್ಕೆ 33 ಕೋಟಿ!
ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯುಪಿಎಲ್) ಶೀರ್ಷಿಕೆ ಪ್ರಾಯೋಜಕತ್ವ ಹಕ್ಕು ಪಡೆದಿರುವ ಟಾಟಾ ಸಮೂಹ ಬಿಸಿಸಿಐಗೆ ವಾರ್ಷಿಕ 33 ಕೋಟಿ ರು. ಪಾವತಿಸಲಿದೆ. 5 ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಒಟ್ಟು 165 ಕೋಟಿ ರು. ಪಾವತಿಸಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.ಮಂಗಳವಾರ ಬಿಸಿಸಿಐ ಕಾರ‍್ಯದರ್ಶಿ ಜಯ್ ಶಾ ಶೀರ್ಷಿಕೆ ಪ್ರಾಯೋಜಕತ್ವ ಟಾಟಾ ಸಮೂಹದ ಪಾಲಾಗಿದೆ ಎಂದು ಮಾಹಿತಿ ನೀಡಿದ್ದರು. ಆದರೆ ಒಪ್ಪಂದದ ಮೌಲ್ಯದ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಪುರುಷರ ಐಪಿಎಲ್‌ನ ಶೀರ್ಷಿಕೆ ಪ್ರಾಯೋಜಕತ್ವವೂ ಟಾಟಾ ಸಮೂಹದ ಬಳಿಯೇ ಇದೆ. 2022ರಲ್ಲಿ ಟಾಟಾ ಸಂಸ್ಥೆ 2 ವರ್ಷಗಳ ಅವಧಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಸಂಸ್ಥೆಯು ಬಿಸಿಸಿಐಗೆ ವಾರ್ಷಿಕ 300 ಕೋಟಿ ರು.ಗೆ ಪಾವತಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.