
ನವದೆಹಲಿ(ಮಾ.05): ಚೊಚ್ಚಲ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧನಾ ಮೊದಲ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಎರಡೂ ತಂಡಗಳು ಗೆಲುವಿನೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿದ್ದು, ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನಿರೀಕ್ಷಿಸಲಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಬ್ರೆಬೋರ್ನ್ ಮೈದಾನ ಆತಿಥ್ಯವನ್ನು ವಹಿಸಿದೆ. ಎರಡು ತಂಡದಲ್ಲೂ ಅತ್ಯುತ್ತಮ ಟಿ20 ಸ್ಪೆಷಲಿಸ್ಟ್ ಬ್ಯಾಟರ್‌ಗಳ ದಂಡೇ ಇರುವುದರಿಂದ ಅಭಿಮಾನಿಗಳು ಭರ್ಜರಿ ಮನರಂಜನೆಯನ್ನು ಎದುರು ನೋಡುತ್ತಿದ್ದಾರೆ
ಆಸ್ಪ್ರೇಲಿಯಾದ ದಿಗ್ಗಜೆ ಎಲೈಸಿ ಪೆರ್ರಿ, ಇಂಗ್ಲೆಂಡ್ ನಾಯಕಿ ಹೀಥರ್ ನೈಟ್, ನ್ಯೂಜಿಲೆಂಡ್ ನಾಯಕಿ ಸೋಫಿ ಡಿವೈನ್, ಭಾರತದ ಯುವ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್, ವೇಗಿ ರೇಣುಕಾ ಸಿಂಗ್ ಸಹ ತಂಡದಲ್ಲಿದ್ದಾರೆ.ಡೆಲ್ಲಿ ತಂಡಕ್ಕೆ ಆಸ್ಪ್ರೇಲಿಯಾದ ದಿಗ್ಗಜೆ ಮೆಗ್ ಲ್ಯಾನಿಂಗ್, ದ.ಆಫ್ರಿಕಾದ ಮಾರಿಯಾನೆ ಕಾಪ್, ಭಾರತದ ಜೆಮಿಮಾ ರೋಡ್ರಿಗ್ಸ್‌ರಂತಹ ಅನುಭವಿಗಳ ಬಲವಿದೆ.
WPL 2023: ಡೆಲ್ಲಿ ಎದುರಿನ ಪಂದ್ಯಕ್ಕೂ ಮುನ್ನ RCB ಮೆಂಟರ್ ಸಾನಿಯಾ ಮಿರ್ಜಾ ಮಹತ್ವದ ಸಂದೇಶ..!
ರಾಯಲ್ ಚಾಲೆಂಜರ್ಸ್ ಬೆಂಗಳೂರು:
ಸ್ಮೃತಿ ಮಂಧನಾ(ನಾಯಕಿ), ಸೋಫಿಯಾ ಡಿವೈನ್, ಎಲೈಸಿ ಪೆರ್ರಿ, ಹೀಥರ್ ನೈಟ್, ದಿಶಾ ಕಸತ್, ರಿಚಾ ಘೋಷ್(ವಿಕೆಟ್ ಕೀಪರ್), ಕನಿಕಾ ಅಹುಜಾ, ಮೆಘನಾ ಶುಟ್, ಆಶಾ ಶೋಬನಾ, ರೇಣುಕಾ ಸಿಂಗ್, ಪ್ರೀತಿ ಬೋಸ್.
ಡೆಲ್ಲಿ ಕ್ಯಾಪಿಟಲ್ಸ್:
ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗ್ಸ್, ಮೆಗ್ ಲ್ಯಾನಿಂಗ್ಸ್(ನಾಯಕಿ), ಮಾರಿಯಾನೆ ಕಾಪ್, ಅಲೈಸ್ ಕ್ಯಾಪ್ಸಿ, ತಾನಿಯಾ ಭಾಟಿಯಾ(ವಿಕೆಟ್ ಕೀಪರ್), ಜೆಸ್ ಜೋನ್ಸೆನ್, ಅರುಂದತಿ ರೆಡ್ಡಿ, ರಾಧಾ ಯಾದವ್, ಶಿಖಾ ಪಾಂಡೆ, ತಾರಾ ನೋರಿಸ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.