
ಮುಂಬೈ(ಮಾ.09): ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿನ ಓಟ ಮುಂದುವರಿದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 8 ವಿಕೆಟ್ ಭರ್ಜರಿ ಗೆಲುವು ಕಂಡಿದೆ. 15 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು. ಈ ಮೂಲಕ ಹರ್ಮನ್‌ಪ್ರೀತ್ ಕೌರ್ ಪಡೆ ಸತತ 3ನೇ ಗೆಲುವು ದಾಖಲಿಸಿದೆ.
ಮುಂಬೈ ಇಂಡಿಯನ್ಸ್ ಚೊಚ್ಚಲ ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ. ಇಂದು ನಡೆದ ಪ್ರಬಲ ಹೋರಾಟದಲ್ಲಿ ಮುಂಬೈ ಗೆಲುವಿನ ಸಿಹಿ ಕಾಣವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮುಂಬೈ ಇಂಡಿಯನ್ಸ್ ಪ್ರತಿ ಪಂದ್ಯದಲ್ಲಿ ಸಮತೋಲನದ ಹೋರಾಟ ನೀಡುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮಾರಕ ಬೌಲಿಂಗ್ ದಾಳಿ ಸಂಘಟಿಸಿದ ಮುಂಬೈ ಇಂಡಿಯನ್ಸ್ ಕೇವಲ 105 ರನ್‌ಳಿಗೆ ಕಟ್ಟಿಹಾಕಿತು.
106 ರನ್ ಟಾರ್ಗೆಟ್ ಪಡೆದ ಮುಂಬೈ ಇಂಡಿಯನ್ಸ್ ಯಾವುದೇ ಆತಂಕವಿಲ್ಲದೆ ಟಾರ್ಗೆಟ್ ಚೇಸ್ ಮಾಡಿತು. ಯಾಸ್ತಿಕಾ ಭಾಟಿಯಾ ಹಾಗೂ ಹೈಲೇ ಮ್ಯಾಥ್ಯೂಸ್ ಉತ್ತಮ ಆರಂಭ, ಮುಂಬೈ ತಂಡವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಿತು. ಮೊದಲ ವಿಕೆಟ್‍ಗೆ ಈ ಜೋಡಿ 65ರನ್ ಜೊತೆಯಾಟ ನೀಡಿತು.ಯಾಸ್ತಿಕಾ ಭಾಟಿಯಾ 41 ರನ್ ಕಾಣಿಕೆ ನೀಡಿದರು. ಇತ್ತ ಹೈಲೇ ಮ್ಯಾಥ್ಯೂಸ್ 32 ರನ್ ಸಿಡಿಸಿದರು.
ನ್ಯಾಟ್ ಸ್ಕೀವಿಯರ್ ಬ್ರಂಟ್ ಹಾಗೂ ನಾಯಕಿ ಹರ್ಮನ್‌ಪ್ರೀತ್ ಕೌರ್ ಜೊತೆಯಾಟದಿಂದ ಮುಂಬೈ ಇಂಡಿಯನ್ಸ್ ಗೆಲುವು ಖಚಿತಗೊಂಡಿತು. ಸ್ಕಿವಿಯರ್ ಬ್ರಂಟ್ ಅಜೇಯ 23 ರನ್ ಸಿಡಿಸಿದರೆ, ಹರ್ಮನ್‌ಪ್ರೀತ್ ಅಜೇಯ 11 ರನ್ ಸಿಡಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ 14 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು. 8 ವಿಕೆಟ್ ಭರ್ಜರಿ ಗೆಲುವು ಕಂಡ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ 6 ಅಂಕ ಪಡೆದು ಮೊದಲ ಸ್ಥಾನದಲ್ಲಿ ಮುಂದುವರಿಯಿತು. ಇತ್ತ ಡೆಲ್ಲಿ ಸತತ ಪಂದ್ಯ ಗೆದ್ದು 3ನೇ ಪಂದ್ಯದಲ್ಲಿ ಮುಗ್ಗರಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.