
ನವದೆಹಲಿ(ಮಾ.10): ಸ್ಮೃತಿ ಮಂಧನಾ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿಂದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಈ ಪಂದ್ಯಕ್ಕೆ ಅರುಣ್ ಜೇಟ್ಲಿ ಮೈದಾನ ಆತಿಥ್ಯವನ್ನು ವಹಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿರುವ 6 ಪಂದ್ಯಗಳಲ್ಲಿ 4 ಗೆಲುವು ಹಾಗೂ 3 ಸೋಲುಗಳೊಂದಿಗೆ 8 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಆರ್‌ಸಿಬಿ ತಂಡವು 6 ಪಂದ್ಯಗಳಲ್ಲಿ 3 ಗೆಲುವು ಹಾಗೂ 3 ಸೋಲು ಸಹಿತ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಪ್ಲೇ ಆಫ್ ಪ್ರವೇಶಿಸುವ ದೃಷ್ಟಿಯಿಂದ ಈ ಪಂದ್ಯದಲ್ಲಿ ಗೆಲುವು ಸಾಧಿಸುವುದು ಮಂಧನಾ ಪಡೆಗೆ ಮಹತ್ವದ್ದೆನಿಸಿದೆ.
ಹರ್ಮನ್‌ಪ್ರೀತ್ ಸಾಹಸ: ಗುಜರಾತ್ ವಿರುದ್ಧ ಗೆದ್ದ ಮುಂಬೈ ನಾಕೌಟ್‌ಗೆ
ನವದೆಹಲಿ: ಹರ್ಮನ್‌ಪ್ರೀತ್ ಪ್ರದರ್ಶಿಸಿದ ಸಾಹಸದಿಂದಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 2ನೇ ಆವೃತ್ತಿ ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯುಎಫ್‌ಐ)ನಲ್ಲಿ ನಾಕೌಟ್ ಪ್ರವೇಶಿಸಿದೆ.
ಶನಿವಾರ ಗುಜರಾತ್ ಜೈಂಟ್ಸ್ ವಿರುದ್ಧ ಮುಂಬೈ 7 ವಿಕೆಟ್ ರೋಚಕ ಗೆಲುವು ಸಾಧಿಸಿತು. 7 ಪಂದ್ಯಗಳಲ್ಲಿ 5ನೇ ಜಯ ದಾಖಲಿಸಿದ ಮುಂಬೈ ನಾಕೌಟ್ ಪ್ರವೇಶಿಸಿದ ಮೊದಲ ತಂಡ ಎನಿಸಿಕೊಂಡಿತು. ಗುಜರಾತ್ 6 ಪಂದ್ಯಗಳಲ್ಲಿ 5ನೇ ಸೋಲನುಭವಿಸಿತು.
112 ವರ್ಷಗಳಲ್ಲೇ ಮೊದಲು..! ಆಂಗ್ಲರನ್ನು ಬಗ್ಗುಬಡಿದು ಅಪರೂಪದ ದಾಖಲೆ ಬರೆದ ಟೀಂ ಇಂಡಿಯಾ
ಮೊದಲು ಬ್ಯಾಟ್ ಮಾಡಿದ ಗುಜರಾತ್ 20 ಓವರಲ್ಲಿ 7 ವಿಕೆಟ್‌ಗೆ 190 ರನ್ ಕಲೆಹಾಕಿತು. ಬೆಥ್ ಮೂನಿ 35 ಎಸೆತದಲ್ಲಿ 66, ದಯಾಲನ್ ಹೇಮಲತಾ 40 ಎಸೆತಗಳಲ್ಲಿ 74 ರನ್ ಚಚ್ಚಿದರು. ಈ ಜೋಡಿ 2ನೇ ವಿಕೆಟ್‌ಗೆ 121 ರನ್ ಜೊತೆಯಾಟವಾಡಿತು.
ಬೃಹತ್ ಗುರಿ ಬೆನ್ನತ್ತಿದ ಮುಂಬೈ ಒಂದು ಹಂತದಲ್ಲಿ ಸೋಲಿನ ಸುಳಿಗೆ ಸಿಲುಕಿತ್ತು. ಯಸ್ತಿಕಾ ಭಾಟಿಯಾ(49) ಔಟಾದ ಬಳಿಕ ಹರ್ಮನ್‌ಪ್ರೀತ್ ಏಕಾಂಗಿ ಹೋರಾಟ ಪ್ರದರ್ಶಿಸಿದರು. ಕೇವಲ 48 ಎಸೆತಗಳಲ್ಲಿ 10 ಬೌಂಡರಿ, 5 ಸಿಕ್ಸರ್‌ನೊಂದಿಗೆ 95 ರನ್ ಚಚ್ಚಿದ ಹರ್ಮನ್ ಒಂದು ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲ್ಲಿಸಿದರು.
2ನೇ ಟೆಸ್ಟ್: ಆಸೀಸ್ ವಿರುದ್ಧ ಕಿವೀಸ್ ಮುನ್ನಡೆ
ಕ್ರೈಸ್ಟ್‌ಚರ್ಚ್: ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ಮುನ್ನಡೆ ಸಾಧಿಸಿದೆ. ಮೊದಲ ಇನ್ನಿಂಗ್ಸಲ್ಲಿ 162ಕ್ಕೆ ಆಲೌಟ್ ಆಗಿದ್ದ ಕಿವೀಸ್, ಆಸ್ಟ್ರೇಲಿಯಾವನ್ನು ಮೊದಲ ಇನ್ನಿಂಗ್ಸಲ್ಲಿ 256 ರನ್‌ಗೆ ಕಟ್ಟಿಹಾಕಿತು. ಲಬುಶೇನ್ 90 ರನ್ ಗಳಿಸಿದರೆ, ಮ್ಯಾಟ್ ಹೆನ್ರಿ 7 ವಿಕೆಟ್ ಕಿತ್ತರು. 2ನೇ ಇನ್ನಿಂಗ್ಸ್ ಆರಂಭಿಸಿರುವ ಕಿವೀಸ್, 2ನೇ ದಿನದಂತ್ಯಕ್ಕೆ 2 ವಿಕೆಟ್‌ಗೆ 134 ರನ್ ಗಳಿಸಿ, 40 ರನ್ ಮುನ್ನಡೆ ಪಡೆದಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.