ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಭಾರತ ಕ್ರಿಕೆಟ್ ತಂಡ ಪ್ರಕಟ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಜೂನ್ 07ರಿಂದ ಆರಂಭ
ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ ಅಜಿಂಕ್ಯ ರಹಾನೆ
ಮುಂಬೈ(ಏ.25): ಬಹುನಿರೀಕ್ಷಿತ ಜೂನ್ 7ರಿಂದ ಲಂಡನ್ನ ಓವಲ್ನಲ್ಲಿ ನಡೆಯಲಿರುವ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿಯು ಪ್ರಕಟಿಸಿದೆ. ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲಿದ್ದು, ಐಪಿಎಲ್‌ನಲ್ಲಿ ಮಿಂಚಿನ ಪ್ರದರ್ಶನದ ಮೂಲಕ ಫಾರ್ಮ್‌ಗೆ ಮರಳಿರುವ ಅಜಿಂಕ್ಯ ರಹಾನೆ ಭಾರತ ತಂಡ ಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ಸೂರ್ಯಕುಮಾರ್ ಯಾದವ್ ಹಾಗೂ ಶ್ರೇಯಸ್ ಅಯ್ಯರ್, ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.
ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಡಲಿವೆ. ಫಾರ್ಮ್ ಸಮಸ್ಯೆಯಿಂದಾಗಿ ಕಳೆದೊಂದು ವರ್ಷದಿಂದ ಭಾರತ ಟೆಸ್ಟ್ ತಂಡದಿಂದ ಹೊರಬಿದ್ದಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ಅಜಿಂಕ್ಯ ಇದೀಗ ದೇಶಿ ಕ್ರಿಕೆಟ್ ಹಾಗೂ ಐಪಿಎಲ್‌ನಲ್ಲಿ ಮಿಂಚಿನ ಪ್ರದರ್ಶನ ತೋರುವ ಮೂಲಕ ರಾಷ್ಟ್ರೀಯ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರಹಾನೆ, ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಇದೀಗ ಅನುಭವಿ ಅಜಿಂಕ್ಯ ರಹಾನೆ, ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ.
ಸೂರ್ಯ-ಶ್ರೇಯಸ್‌ಗಿಲ್ಲ ಸ್ಥಾನ: ಮಹತ್ವದ ಟೆಸ್ಟ್ ವಿಶ್ವಕಪ್ ಫೈನಲ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್ ಹಾಗೂ ಶ್ರೇಯಸ್ ಅಯ್ಯರ್ ವಿಫಲವಾಗಿದ್ದಾರೆ. ಸೂರ್ಯಕುಮಾರ್ ಯಾದವ್ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ವಿಫಲವಾಗಿದ್ದರೆ, ಶ್ರೇಯಸ್ ಅಯ್ಯರ್, ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಕೆಲದಿನಗಳ ಹಿಂದಷ್ಟೇ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರು ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದು, ಅಜಿಂಕ್ಯ ರಹಾನೆ ಸೇರ್ಪಡೆ ತಂಡಕ್ಕೆ ಸೇರ್ಪಡೆ ಮಧ್ಯಮ ಕ್ರಮಾಂಕದ ಸಮಸ್ಯೆ ನೀಗಿಸುವ ಸಾಧ್ಯತೆಯಿದೆ.ಸೂರ್ಯ-ಶ್ರೇಯಸ್‌ಗಿಲ್ಲ ಸ್ಥಾನ: ಮಹತ್ವದ ಟೆಸ್ಟ್ ವಿಶ್ವಕಪ್ ಫೈನಲ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್ ಹಾಗೂ ಶ್ರೇಯಸ್ ಅಯ್ಯರ್ ವಿಫಲವಾಗಿದ್ದಾರೆ. ಸೂರ್ಯಕುಮಾರ್ ಯಾದವ್ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ವಿಫಲವಾಗಿದ್ದರೆ, ಶ್ರೇಯಸ್ ಅಯ್ಯರ್, ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಕೆಲದಿನಗಳ ಹಿಂದಷ್ಟೇ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರು ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದು, ಅಜಿಂಕ್ಯ ರಹಾನೆ ಸೇರ್ಪಡೆ ತಂಡಕ್ಕೆ ಸೇರ್ಪಡೆ ಮಧ್ಯಮ ಕ್ರಮಾಂಕದ ಸಮಸ್ಯೆ ನೀಗಿಸುವ ಸಾಧ್ಯತೆಯಿದೆ.
WTC Final: ಭಾರತ ಎದುರಿನ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಬಲಿಷ್ಠ ಆಸ್ಪ್ರೇಲಿಯಾ ತಂಡ ಪ್ರಕಟ
ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ಸ್ಥಾನ ಪಡೆದಿದ್ದಾರೆ. ಇನ್ನು ವಿಕೆಟ್ ಕೀಪರ್ ರೂಪದಲ್ಲಿ ಕೆ ಎಸ್ ಭರತ್ ಸ್ಥಾನ ಪಡೆದಿದ್ದಾರೆ. ಇನ್ನು ಕನ್ನಡಿಗ ಕೆ ಎಲ್ ರಾಹುಲ್ ಕೂಡಾ ವಿಕೆಟ್ ಕೀಪರ್ ಪಾತ್ರವನ್ನು ನಿಭಾಯಿಸಬಲ್ಲವರಾಗಿದ್ದಾರೆ. ಇನ್ನು ಸ್ಪಿನ್ ಆಲ್ರೌಂಡರ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ. ಇನ್ನು ವೇಗಿಗಳ ರೂಪದಲ್ಲಿ ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮೇಶ್ ಯಾದವ್ ಹಾಗೂ ಜಯದೇವ್ ಉನಾದ್ಕತ್ ಸ್ಥಾನ ಪಡೆದಿದ್ದಾರೆ.
ಟೆಸ್ಟ್ ವಿಶ್ವಕಪ್: ಮೇ 24ಕ್ಕೆ ಇಂಗ್ಲೆಂಡ್‌ಗೆ ಭಾರತ ತಂಡ
ನವದೆಹಲಿ: ಜೂನ್ 7ರಿಂದ ಲಂಡನ್ನ ಓವಲ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಪಾಲ್ಗೊಳ್ಳಲು ಭಾರತದ ಕೋಚ್ ರಾಹುಲ್ ದ್ರಾವಿಡ್, ಸಹಾಯಕ ಸಿಬ್ಬಂದಿ ಹಾಗೂ ಕೆಲ ಆಟಗಾರರು ಮೇ 23 ಅಥವಾ 24ಕ್ಕೆ ಇಂಗ್ಲೆಂಡ್ ಪ್ರಯಾಣಿಸಲಿದ್ದಾರೆ ಎಂದು ತಿಳಿದುಬಂದಿದೆ.
ಚೇತೇಶ್ವರ ಪೂಜಾರ ಸೇರಿದಂತೆ ಐಪಿಎಲ್‌ನಲ್ಲಿ ಪ್ಲೇ-ಆಫ್‌ಗೇರದ ತಂಡಗಳಲ್ಲಿ ಇರುವ ಕೆಲ ಆಟಗಾರರು ಮೊದಲೇ ಪ್ರಯಾಣಿಸಲಿದ್ದು, ಅಭ್ಯಾಸ ಆರಂಭಿಸಲಿದ್ದಾರೆ. ಐಪಿಎಲ್‌ನಲ್ಲಿ ಆಡುತ್ತಿರುವ ಆಟಗಾರರು ಟೂರ್ನಿ ಮುಕ್ತಾಯಗೊಂಡ ಬಳಿಕ ಅಂದರೆ ಮೇ 28ರ ನಂತರ ಇಂಗ್ಲೆಂಡ್‌ಗೆ ತೆರಳಿ ತಂಡ ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಭಾರತ ತಂಡ ಹೀಗಿದೆ ನೋಡಿ:
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ ಎಲ್ ರಾಹುಲ್, ಕೆ ಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್.
🚨 NEWS 🚨 squad for ICC World Test Championship 2023 Final announced.
Details 🔽 https://t.co/sz7F5ByfiU pic.twitter.com/KIcH530rOL