
ಸೌಥಾಂಪ್ಟನ್(ಜೂ.19): ನಾಯಕ ವಿರಾಟ್ ಕೊಹ್ಲಿ ದಿಟ್ಟ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಎರಡನೇ ದಿನದಾಟದ ಚಹಾ ವಿರಾಮದ ವೇಳೆಗೆ 3 ವಿಕೆಟ್ ವಿಕೆಟ್ ಕಳೆದುಕೊಂಡು 120 ರನ್ ಬಾರಿಸಿದ್ದು, ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡುವತ್ತ ದಿಟ್ಟ ಹೆಜ್ಜೆಯಿಟ್ಟಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡಕ್ಕೆ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಜೋಡಿ ಮೊದಲ ವಿಕೆಟ್‌ಗೆ 62 ರನ್‌ಗಳ ಜತೆಯಾಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಆದರೆ ಉತ್ತಮ ಆರಂಭವನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸುವಲ್ಲಿ ಈ ಜೋಡಿ ವಿಫಲವಾಯಿತು. ರೋಹಿತ್ ಶರ್ಮಾ 34 ರನ್ ಬಾರಿಸಿ ಜೇಮಿಸನ್‌ಗೆ ವಿಕೆಟ್ ಒಪ್ಪಿಸಿದರೆ, ಇದರ ಬೆನ್ನಲ್ಲೇ ಗಿಲ್ ಸಹಾ 28 ರನ್ ಬಾರಿಸಿ ವ್ಯಾಗ್ನರ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಚೇತೇಶ್ವರ್ ಪೂಜಾರ(08) ಸಹಾ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದರು.
ಮಿಲ್ಖಾ ಸಿಂಗ್‌ಗೆ ಗೌರವ ನಮನ; WCTfinal ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿದ ಟೀಂ ಇಂಡಿಯಾ!
ನೆಲಕಚ್ಚಿ ಆಡುತ್ತಿರುವ ಕೊಹ್ಲಿ-ರಹಾನೆ: ಒಂದು ಹಂತದಲ್ಲಿ 88 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಭಾರತ ತಂಡಕ್ಕೆ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ಅಜಿಂಕ್ಯ ರಹಾನೆ ಅಸರೆಯಾಗಿದ್ದಾರೆ. ಕೊಹ್ಲಿ 94 ಎಸೆತಗಳನ್ನು ಎದುರಿಸಿ ಕೇವಲ ಒಂದು ಬೌಂಡರಿ ಸಹಿತ 35 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದರೆ, ಮತ್ತೊಂದು ತುದಿಯಲ್ಲಿ ರಹಾನೆ 54 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ 13 ರನ್ ಬಾರಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.