ಇಂಡೋ-ಆಸೀಸ್ 3ನೇ ಟೆಸ್ಟ್ ಡ್ರಾ ಆದ್ರೆ WTC ಫೈನಲ್‌ ತಲುಪುತ್ತಾ ಟೀಂ ಇಂಡಿಯಾ? ಇಲ್ಲಿದೆ ಹೊಸ ಲೆಕ್ಕಾಚಾರ

Published : Dec 15, 2024, 04:03 PM IST
ಇಂಡೋ-ಆಸೀಸ್ 3ನೇ ಟೆಸ್ಟ್ ಡ್ರಾ ಆದ್ರೆ WTC ಫೈನಲ್‌ ತಲುಪುತ್ತಾ ಟೀಂ ಇಂಡಿಯಾ? ಇಲ್ಲಿದೆ ಹೊಸ ಲೆಕ್ಕಾಚಾರ

ಸಾರಾಂಶ

ಗಾಬಾ ಟೆಸ್ಟ್ ಮಳೆಯಿಂದಾಗಿ ಡ್ರಾ ಆಗುವ ಸಾಧ್ಯತೆ. ಡ್ರಾ ಆದರೆ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಕಠಿಣ. ಉಳಿದ ಎರಡೂ ಪಂದ್ಯ ಗೆದ್ದರೆ ಫೈನಲ್ ಖಚಿತ. ಒಂದು ಗೆಲುವು, ಒಂದು ಸೋಲು ಆದರೆ ಶ್ರೀಲಂಕಾ ಆಸೀಸ್ ವಿರುದ್ಧ ಗೆಲ್ಲಬೇಕು. ಆಸೀಸ್ ಒಂದು ಪಂದ್ಯ ಗೆದ್ದರೆ, ಭಾರತಕ್ಕೆ ಪಾಕಿಸ್ತಾನ, ಶ್ರೀಲಂಕಾ ಗೆಲುವು ಅಗತ್ಯ.

ಬ್ರಿಸ್ಬೇನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯಕ್ಕೆ ಇಲ್ಲಿನ ಗಾಬಾ ಮೈದಾನ ಆತಿಥ್ಯ ವಹಿಸಿದೆ. ಈಗಾಗಲೇ ಮೊದಲೆರಡು ಪಂದ್ಯಗಳ ಪೈಕಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಜಯಿಸಿದ್ದು, ಇದೀಗ ಮೂರನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸಲು ಹಾತೊರೆಯುತ್ತಿವೆ. ಹೀಗಿರುವಾಗಲೇ ಮೂರನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯವಾಗುವ ಭೀತಿ ಎದುರಾಗಿದೆ. ಒಂದು ವೇಳೆ ಗಾಬಾ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯವಾದರೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಭಾರತ ತಲುಪಲು ಸಾಧ್ಯವಾಗುತ್ತಾ ಎನ್ನುವ ಕುತೂಹಲ ಕೂಡಾ ಜೋರಾಗಿದೆ.

ಹೌದು, ಇಲ್ಲಿನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಮೊದಲ ದಿನದಾಟಕ್ಕೆ ಮಳೆರಾಯ ಅಡ್ಡಿಯಾಗಿತ್ತು. ಇನ್ನು ಎರಡನೇ ದಿನದಾಟಕ್ಕೆ ಮಳೆ ಅಡ್ಡಿಯಾಗಿರಲಿಲ್ಲ. ಎರಡನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ ತಂಡವು 7 ವಿಕೆಟ್ ಕಳೆದುಕೊಂಡು 405 ರನ್ ಬಾರಿಸಿದ್ದು, ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. ಆದರೆ ತುಂಬಾ ಇಂಟ್ರೆಸ್ಟಿಂಗ್ ಸಂಗತಿಯೆಂದರೆ, ಮುಂದಿನ ಮೂರು ದಿನವೂ ಪಂದ್ಯಕ್ಕೆ ಮಳೆರಾಯ ಅಡ್ಡಿಯನ್ನುಂಟು ಮಾಡುವ ಸಾಧ್ಯತೆಯಿದೆ. ಒಂದು ವೇಳೆ ಹೀಗಾದಲ್ಲಿ ಪಂದ್ಯ ಡ್ರಾ ಆದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನ ಲೆಕ್ಕಾಚಾರ ಮತ್ತಷ್ಟು ಚುರುಕಾಗಲಿದೆ.

ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟ ಯುವರಾಜ್‌ ಸಿಂಗ್‌ಗೆ ಬಿಸಿಸಿಐನಿಂದ ಸಿಗುವ ತಿಂಗಳ ಪೆನ್ಷನ್ ಎಷ್ಟು?

ಗಾಬಾ ಟೆಸ್ಟ್ ಡ್ರಾ ಆದರೆ ಟೆಸ್ಟ್ ವಿಶ್ವಕಪ್ ಫೈನಲ್ ಯಾರಿಗೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಗಾಬಾ ಟೆಸ್ಟ್ ಪಂದ್ಯವು ಮಳೆಯ ಭೀತಿಯ ನಡುವೆಯೇ ಸಾಗುತ್ತಿದೆ. ಈ ಟೆಸ್ಟ್ ಪಂದ್ಯದ ಕೊನೆಯ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಒಂದು ವೇಳೆ ಮೂರನೇ ಟೆಸ್ಟ್ ಪಂದ್ಯವು ಡ್ರಾ ಆದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಹಾದಿ ಟೀಂ ಇಂಡಿಯಾ ಪಾಲಿಗೆ ಮತ್ತಷ್ಟು ದುರ್ಗಮಗೊಳಿಸಲಿದೆ. ಯಾಕೆಂದರೆ ಇನ್ನುಳಿದ ಎರಡು ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ ಶತಾಯಗತಾಯ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಲಿದೆ. ಒಂದು ವೇಳೆ ಟೀಂ ಇಂಡಿಯಾ ಮೂರನೇ ಟೆಸ್ಟ್ ಪಂದ್ಯ ಡ್ರಾ ಆಗಿ, ಇನ್ನುಳಿದ ಎರಡು ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಅನಾಯಾಸವಾಗಿ ಫೈನಲ್ ಪ್ರವೇಶಿಸಲಿದೆ. ಮೂರನೇ ಆವೃತ್ತಿಯ ಟೆಸ್ಟ್ ವಿಶ್ವಕಪ್‌ ಫೈನಲ್‌ನಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ದಕ್ಷಿಣ ಆಫ್ರಿಕಾ ಜತೆ ಕಾದಾಡಲಿದೆ.

ಒಂದು ವೇಳೆ ಭಾರತ ತಂಡವು ಈ ಪಂದ್ಯ ಡ್ರಾ ಆಗಿ, ಇನ್ನುಳಿದ ಎರಡು ಪಂದ್ಯಗಳ ಪೈಕಿ ಒಂದು ಗೆಲುವು ಹಾಗೂ ಒಂದು ಸೋಲು ಅನುಭವಿಸಿ 2-1 ಅಂತರದಲ್ಲಿ ಸರಣಿ ಜಯಿಸಿದರೂ, ಟೆಸ್ಟ್ ವಿಶ್ವಕಪ್ ಫೈನಲ್ ಟಿಕೆಟ್ ಸಿಗಲಿದೆ. ಆದರೆ ಕೊಂಚ ಅದೃಷ್ಟ ಕೈಹಿಡಿಯಬೇಕಷ್ಟೇ. ಒಂದು ವೇಳೆ ಭಾರತ ತಂಡವು 2-1 ಅಂತರದಲ್ಲಿ ಸರಣಿ ಜಯಿಸಿದರೆ, ಇದಾದ ಬಳಿಕ ಶ್ರೀಲಂಕಾ ತಂಡವು ತವರಿನಲ್ಲಿ ಆಸೀಸ್ ಎದುರು ಉತ್ತಮ ಪ್ರದರ್ಶನ ತೋರಲಿ ಎಂದು ಪ್ರಾರ್ಥನೆ ಮಾಡಿಕೊಳ್ಳಬೇಕು. ಆಸೀಸ್‌ ತಂಡವು ಲಂಕಾ ಪ್ರವಾಸದಲ್ಲಿ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಪೈಕಿ ಲಂಕಾ ಒಂದು ಟೆಸ್ಟ್ ಪಂದ್ಯವನ್ನು ಜಯಿಸಿದರೆ, ಭಾರತದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಸುಗಮವಾಗಲಿದೆ.

ಗಾಬಾದಲ್ಲಿ ಭಾರತಕ್ಕೆ ಬೌನ್ಸರ್‌ ಟೆಸ್ಟ್‌: ಟೀಂ ಇಂಡಿಯಾಗೆ ಈ ಬಾರಿ ಮತ್ತೊಮ್ಮೆ ಕಠಿಣ ಸವಾಲು!

ಒಂದು ವೇಳೆ ಆಸೀಸ್ ಗೆದ್ದರೇ ಲೆಕ್ಕಾಚಾರವೇ ಉಲ್ಟಾಪಲ್ಟ:

ಒಂದು ವೇಳೆ ಮೂರನೇ ಟೆಸ್ಟ್ ಪಂದ್ಯ ಡ್ರಾ ಆಗಿ ಇನ್ನುಳಿದ ಎರಡು ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಆಸೀಸ್ ಪಂದ್ಯವನ್ನು ಜಯಿಸಿದರೆ, ಟೆಸ್ಟ್ ವಿಶ್ವಕಪ್ ಫೈನಲ್ ಲೆಕ್ಕಾಚಾರವೇ ತಲೆಕೆಳಗಾಗಲಿದೆ. ಹೀಗಿದ್ದೂ ಭಾರತ ಟೆಸ್ಟ್ ವಿಶ್ವಕಪ್‌ ಫೈನಲ್‌ಗೇರಬೇಕಿದ್ದರೇ ನೆರೆಯ ಪಾಕಿಸ್ತಾನ ಸಾಥ್ ನೀಡಬೇಕಿದೆ. ಪಾಕಿಸ್ತಾನ ತಂಡವು ಹರಿಣಗಳ ನಾಡಿನಲ್ಲಿ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಜಯಿಸಬೇಕು. ಇದರ ಜೆತೆಗೆ ನೆರೆಯ ಶ್ರೀಲಂಕಾ ತಂಡ ಕೂಡಾ ತವರಿನಲ್ಲಿ ಆಸೀಸ್‌ ಎದುರು 2-0 ಅಂತರದಲ್ಲಿ ಜಯಿಸಬೇಕು. 


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!