Ranchi Test: ಮತ್ತೆ ಟೀಂ ಇಂಡಿಯಾಗೆ ಆಸರೆಯಾದ ಯಶಸ್ವಿ ಜೈಸ್ವಾಲ್

Published : Feb 24, 2024, 05:43 PM IST
Ranchi Test: ಮತ್ತೆ ಟೀಂ ಇಂಡಿಯಾಗೆ ಆಸರೆಯಾದ ಯಶಸ್ವಿ ಜೈಸ್ವಾಲ್

ಸಾರಾಂಶ

ಇಂಗ್ಲೆಂಡ್ ತಂಡವನ್ನು ಮೊದಲ ಸೆಷನ್‌ನಲ್ಲೇ ಆಲೌಟ್ ಮಾಡಿ ಮೊದಲ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ನಾಯಕ ರೋಹಿತ್ ಶರ್ಮಾ ಕೇವಲ ಎರಡು ರನ್ ಗಳಿಸಿ ಜೇಮ್ಸ್ ಆಂಡರ್‌ಸನ್ ಬೌಲಿಂಗ್‌ನಲ್ಲಿ ಬೆನ್ ಫೋಕ್ಸ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ರಾಂಚಿ(ಫೆ.24): ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪ್ರತಿಭಾನ್ವಿತ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮತ್ತೊಮ್ಮೆ ಟೀಂ ಇಂಡಿಯಾಗೆ ಆಸರೆಯಾಗಿದ್ದಾರೆ. ಇಂಗ್ಲೆಂಡ್ ತಂಡವನ್ನು 353 ರನ್‌ಗಳಿಗೆ ಕಟ್ಟಿಹಾಕಿ ಮೊದಲ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಎರಡನೇ ದಿನದಾಟದಂತ್ಯದ ವೇಳೆಗೆ 7 ವಿಕೆಟ್ ಕಳೆದುಕೊಂಡು 219 ರನ್ ಬಾರಿಸಿದ್ದು, ಇನ್ನು 134 ರನ್‌ಗಳ ಹಿನ್ನಡೆಯಲ್ಲಿದೆ. ವಿಕೆಟ್ ಕೀಪರ್ ಬ್ಯಾಟರ್ ಧೃವ್ ಜುರೆಲ್(30) ಹಾಗೂ ಕುಲ್ದೀಪ್ ಯಾದವ್(17) ಮೂರನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇಂಗ್ಲೆಂಡ್ ತಂಡವನ್ನು ಮೊದಲ ಸೆಷನ್‌ನಲ್ಲೇ ಆಲೌಟ್ ಮಾಡಿ ಮೊದಲ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ನಾಯಕ ರೋಹಿತ್ ಶರ್ಮಾ ಕೇವಲ ಎರಡು ರನ್ ಗಳಿಸಿ ಜೇಮ್ಸ್ ಆಂಡರ್‌ಸನ್ ಬೌಲಿಂಗ್‌ನಲ್ಲಿ ಬೆನ್ ಫೋಕ್ಸ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್ ಹಾಗೂ ಶುಭ್‌ಮನ್ ಗಿಲ್ 82 ರನ್‌ಗಳ ಜತೆಯಾಟವಾಡಿದರು. ಉತ್ತಮವಾಗಿ ಆಡುತ್ತಿದ್ದ ಗಿಲ್ 38 ರನ್ ಗಳಿಸಿ ಶೋಯೆಬ್ ಬಷೀರ್‌ಗೆ ವಿಕೆಟ್ ಒಪ್ಪಿಸಿದರು.

KL Rahul Kannada: 'ಅದು ಕನ್ನಡ್ ಅಲ್ಲ ಕನ್ನಡ..' ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದ ಕೆ ಎಲ್ ರಾಹುಲ್..!

ಯಶಸ್ವಿ ಜೈಸ್ವಾಲ್ ಸಮಯೋಚಿತ ಅರ್ಧಶತಕ: ಹೌದು, ಕಳೆದೆರಡು ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ದ್ವಿಶತಕ ಸಿಡಿಸಿ ಮಿಂಚಿದ್ದ ಯಶಸ್ವಿ ಜೈಸ್ವಾಲ್, ಇದೀಗ ನಾಲ್ಕನೇ ಟೆಸ್ಟ್ ಪಂದ್ಯದಲ್ಲೂ ಜವಾಬ್ದಾರಿಯುತ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ಸಮಯೋಚಿತ ಬ್ಯಾಟಿಂಗ್ ನಡೆಸಿದ ಜೈಸ್ವಾಲ್ ಆಕರ್ಷಕ ಅರ್ಧಶತಕ ಸಿಡಿಸಿದರು. ಅಂತಿಮವಾಗಿ ಜೈಸ್ವಾಲ್ 117 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 73 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ದಿಢೀರ್ ಕುಸಿದ ಮಧ್ಯಮ ಕ್ರಮಾಂಕ: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ರಜತ್ ಪಾಟೀದಾರ್, ರವೀಂದ್ರ ಜಡೇಜಾ ಹಾಗೂ ಸರ್ಫರಾಜ್ ಖಾನ್ ತಮಗೆ ಸಿಕ್ಕ ಉತ್ತಮ ಆರಂಭವನ್ನು ದೊಡ್ಡಮೊತ್ತವನ್ನಾಗಿ ಪರಿವರ್ತಿಸಲು ವಿಫಲವಾದರು. ಪಾಟೀದಾರ್ 17 ರನ್‌ಗೆ ವಿಕೆಟ್ ಒಪ್ಪಿಸಿದರೆ, ಜಡೇಜಾ 12 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಕಳೆದ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿದ್ದ ಸರ್ಫರಾಜ್ ಖಾನ್ ಬ್ಯಾಟಿಂಗ್ 14 ರನ್‌ಗೆ ಸೀಮಿತವಾಯಿತು. ಬೌಲಿಂಗ್ ಆಲ್ರೌಂಡರ್ ಅಶ್ವಿನ್ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. 

Ranchi Test: ಜಡ್ಡುಗೆ 4 ವಿಕೆಟ್‌, ಇಂಗ್ಲೆಂಡ್ ಆಲೌಟ್ @353

ಜುರೆಲ್-ಕುಲ್ದೀಪ್ ಮೇಲೆ ಕಣ್ಣು: ಒಂದು ಹಂತದಲ್ಲಿ ಕೇವಲ 177 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು 200 ರನ್‌ಗಳೊಳಗಾಗಿ ಆಲೌಟ್ ಭೀತಿಗೆ ಸಿಲುಕಿದ್ದ ಟೀಂ ಇಂಡಿಯಾಗೆ 8ನೇ ವಿಕೆಟ್‌ಗೆ ಕುಲ್ದೀಪ್ ಯಾದವ್ ಹಾಗೂ ಧೃವ್ ಜುರೆಲ್ ಮುರಿಯದ 42 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಈ ಜತೆಯಾಟ ನಾಲ್ಕನೇ ದಿನದಾಟದಲ್ಲಿ ಎಲ್ಲಿಯವರೆಗೆ ಮುಂದುವರೆಯಲಿದೆ ಎನ್ನುವ ಕುತೂಹಲ ಜೋರಾಗಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!