ಗೆಲುವಿನ ಖುಷಿಯಲ್ಲಿರುವ ಕೊಹ್ಲಿ ಸೈನ್ಯದ ವಿರುದ್ದ ಯುವರಾಜ್ ಅಸಮಧಾನ!

Published : Dec 07, 2019, 09:54 PM ISTUpdated : Dec 07, 2019, 10:00 PM IST
ಗೆಲುವಿನ ಖುಷಿಯಲ್ಲಿರುವ ಕೊಹ್ಲಿ ಸೈನ್ಯದ ವಿರುದ್ದ ಯುವರಾಜ್ ಅಸಮಧಾನ!

ಸಾರಾಂಶ

ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾವನ್ನು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಟೀಕಿಸಿದ್ದಾರೆ. ವಿಂಡೀಸ್ ವಿರುದ್ದ ಭಾರತ ತಂಡದ ಪ್ರದರ್ಶನ ಕಳಪೆಯಾಗಿತ್ತು ಎಂದಿದ್ದಾರೆ.

ಹೈದರಾಬಾದ್(ಡಿ.07): ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡೋ 6 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಬರೋಬ್ಬರಿ 208 ರನ್ ಟಾರ್ಗೆಟ್ ಬೆನ್ನಟ್ಟಿದ ಕೊಹ್ಲಿ ಸೈನ್ಯಕ್ಕೆ ಅಭಿನಂದನೆಗಳ ಸುರಿಮಳೆಯಾಗುತ್ತಿದೆ. ಆದರೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅಸಮಧಾನ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ: ರಾಹುಲ್, ಕೊಹ್ಲಿ ಅರ್ಧಶತಕ; ವಿಂಡೀಸ್ ವಿರುದ್ಧ ಗೆದ್ದು ಬೀಗಿದ ಭಾರತ!

ವಿರಾಟ್ ಕೊಹ್ಲಿ ಅಜೇಯ 94 ರನ್ ನೆರವಿನಿಂದ ಟೀಂ ಇಂಡಿಯಾ ಇನ್ನು 8 ಎಸೆತ ಬಾಕಿ ಇರುವಂತೆ ಗೆಲುವು ಸಾಧಿಸಿದೆ. ಕೊಹ್ಲಿ ಹಾಗೂ ಟೀಂ ಇಂಡಿಯಾ ಪ್ರದರ್ಶನವನ್ನು ಎಲ್ಲರೂ ಕೊಂಡಾಡಿದ್ದಾರೆ. ಆದರೆ ಯುವಿ, ಟೀಂ ಇಂಡಿಯಾಗೆ ಚಾಟಿ ಬೀಸಿದ್ದಾರೆ. ಹೈದರಾಬಾದ್ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಕಲಪೆ ಫೀಲ್ಡಿಂಗ್ ಪ್ರದರ್ಶನ ನೀಡಿದೆ. ಇದು ಸತತ ಕ್ರಿಕೆಟ್ ಪರಿಣಾಮವೇ? ಎಂದು ಪ್ರಶ್ನಿಸಿದ್ದಾರೆ.

 

ಇದನ್ನೂ ಓದಿ: ವಿಲಿಯಮ್ಸ್ ನೋಟ್‌ಬುಕ್ ಸಂಭ್ರಮಕ್ಕೆ ತಿರುಗೇಟು; ಕೊಹ್ಲಿಗೆ ಭೇಷ್ ಎಂದ ಫ್ಯಾನ್ಸ್!

ಭಾರತೀಯ ಫೀಲ್ಡರ್ ಪ್ರದರ್ಶನ ನೀರಸವಾಗಿತ್ತು ಎಂದು ಯುವಿ ಪ್ರತಿಕ್ರಿಯಿಸಿದ್ದಾರೆ.  ಫೀಲ್ಡಿಂಗ್ ವೇಳೆ ಟೀಂ ಇಂಡಿಯಾ ಕೆಲ ತಪ್ಪುಗಳನ್ನು ಮಾಡಿತ್ತು. ಕ್ಯಾಚ್ ಕೈಚೆಲ್ಲಿದ ಜೊತೆಗೆ ಚುರುಕಿನ ಫೀಲ್ಡಿಂಗ್ ಮಾಡುವಲ್ಲಿ ವಿಫಲವಾಗಿತ್ತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?