
ಹರಾರೆ(ಏ.24): ಪಾಕಿಸ್ತಾನ ವಿರುದ್ಧ 2ನೇ ಟಿ20 ಪಂದ್ಯದಲ್ಲಿ 19 ರನ್‌ಗಳ ಗೆಲುವು ಸಾಧಿಸಿದ ಜಿಂಬಾಬ್ವೆ ಇತಿಹಾಸ ಬರೆದಿದೆ. ಟಿ20 ಮಾದರಿಯಲ್ಲಿ ಜಿಂಬಾಬ್ವೆಗಿದು ಪಾಕಿಸ್ತಾನ ವಿರುದ್ಧ ಮೊದಲ ಜಯ. ಈ ಮೊದಲು ಆಡಿದ್ದ 15 ಪಂದ್ಯಗಳಲ್ಲಿ ಜಿಂಬಾಬ್ವೆ ಸೋಲುಂಡಿತ್ತು.
ಶುಕ್ರವಾರ(ಏ.23) ನಡೆದ ಪಂದ್ಯದಲ್ಲಿ ಜಿಂಬಾಬ್ವೆ ನೀಡಿದ್ದ 119 ರನ್‌ಗಳ ಸುಲಭ ಗುರಿ ಬೆನ್ನತ್ತಲು ವಿಫಲವಾದ ಪಾಕಿಸ್ತಾನ ಕೇವಲ 99 ರನ್‌ಗೆ ಆಲೌಟ್ ಆಯಿತು. ಪಾಕಿಸ್ತಾನ ತಂಡವು ಕೊನೆ 21 ರನ್‌ಗೆ 7 ವಿಕೆಟ್ ಕಳೆದುಕೊಳ್ಳುವ ಮೂಲಕ ನಾಟಕೀಯ ಕುಸಿತ ಕಂಡು ಆಘಾತಕಾರಿ ಸೋಲು ಕಂಡಿತು.
ಸಾಧಾರಣ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡಕ್ಕೆ ನಾಯಕ ಬಾಬರ್ ಅಜಂ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ ಮೊದಲ ವಿಕೆಟ್‌ಗೆ 21 ರನ್‌ಗಳ ಜತೆಯಾಟವಾಡಿದರು. ರಿಜ್ವಾನ್ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ಬಾಬರ್ ಅಜಂ 41 ರನ್ ಬಾರಿಸಿದರು. ಮಧ್ಯಮ ಕ್ರಮಾಂಕದಲ್ಲಿ ಡ್ಯಾನಿಷ್ ಅಜೀಜ್ 22 ರನ್ ಬಾರಿಸಿದ್ದು ಬಿಟ್ಟರೆ, ಉಳಿದ್ಯಾವ ಪಾಕಿಸ್ತಾನದ ಬ್ಯಾಟ್ಸ್‌ಮನ್‌ಗಳು ಎರಡಂಕಿ ಮೊತ್ತ ಬಾರಿಸಲು ಸಫಲವಾಗಲಿಲ್ಲ.
ಮೊದಲ ಟೆಸ್ಟ್: ಶ್ರೀಲಂಕಾ ವಿರುದ್ಧ ಬಾಂಗ್ಲಾ ಮೇಲುಗೈ
ಜಿಂಬಾಬ್ವೆ ತಂಡದ ಲೂಕ್ ಜಾಂಗ್ವೆ ಕೇವಲ 18 ರನ್ ನೀಡಿ ಪ್ರಮುಖ 4 ವಿಕೆಟ್ ಕಬಳಿಸುವ ಮೂಲಕ ಪಾಕಿಸ್ತಾನದ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿದರು. ಇವರಿಗೆ ರೆಯಾನ್ ಬ್ರಲ್(2), ಮಜರಾಬ್ನಿ ಹಾಗೂ ರಿಚರ್ಡ್ ನಗರವ ತಲಾ ಒಂದೊಂದು ವಿಕೆಟ್ ಕಬಳಿಸುವ ಮೂಲಕ ಉತ್ತಮ ಸಾಥ್ ನೀಡಿದರು.
ಸ್ಕೋರ್:
ಜಿಂಬಾಬ್ವೆ 118/9
ಪಾಕಿಸ್ತಾನ 99/10
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.