ಸ್ಕೂಟರ್‌ನಲ್ಲೇ ಕೀ ಬಿಟ್ಟ ಮಹಿಳೆ: ಡಿಕ್ಕಿಯಲ್ಲಿದ್ದ 1.50 ಲಕ್ಷ ಎಗರಿಸಿ ಪರಾರಿ

Published : Dec 14, 2022, 10:30 AM IST
ಸ್ಕೂಟರ್‌ನಲ್ಲೇ ಕೀ ಬಿಟ್ಟ ಮಹಿಳೆ: ಡಿಕ್ಕಿಯಲ್ಲಿದ್ದ 1.50 ಲಕ್ಷ ಎಗರಿಸಿ ಪರಾರಿ

ಸಾರಾಂಶ

ಕೌಶಲ್ಯ ಭವನದ ವಿಭಾಗೀಯ ಕಚೇರಿಯ ಪ್ರಥಮ ದರ್ಜೆ ಸಹಾಯಕಿಎಂ.ಶೋಭಾ ಹಣ ಕಳೆದುಕೊಂಡವರು. ದೂರಿನ ಮೇರೆಗೆ ದುಷ್ಕರ್ಮಿಗಳ ಪತ್ತೆಗೆ ತನಿಖೆ ಕೈಗೊಂಡ ಪೊಲೀಸರು. 

ಬೆಂಗಳೂರು(ಡಿ.14):  ಹೊಸೂರು ರಸ್ತೆಯ ಕೌಶಲ್ಯ ಭವನದ ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನದ ಡಿಕ್ಕಿ ತೆರೆದು ಅದರಲ್ಲಿದ್ದ  1.50 ಲಕ್ಷವನ್ನು ದುಷ್ಕರ್ಮಿಗಳು ಎಗರಿಸಿರುವ ಘಟನೆ ನಡೆದಿದೆ. ಕೌಶಲ್ಯ ಭವನದ ವಿಭಾಗೀಯ ಕಚೇರಿಯ ಪ್ರಥಮ ದರ್ಜೆ ಸಹಾಯಕಿ(ಎಫ್‌ಡಿಎ) ಎಂ.ಶೋಭಾ ಹಣ ಕಳೆದುಕೊಂಡವರು. ಇವರು ನೀಡಿದ ದೂರಿನ ಮೇರೆಗೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

ಚಿಕ್ಕಮಗಳೂರು ಮೂಲದ ಶೋಭಾ ಅವರು ಕೌಶಲ್ಯ ಭವನದಲ್ಲಿ ಎಫ್‌ಡಿಎ ಆಗಿ ಕೆಲಸ ಮಾಡುತ್ತಿದ್ದಾರೆ. ಊರಿನ ಮನೆಯ ರಿಪೇರಿ ಮಾಡಿಸುವ ಉದ್ದೇಶದಿಂದ ಖಾತೆಯಿಂದ .1.50 ಲಕ್ಷ ಡ್ರಾ ಮಾಡಿ ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಇರಿಸಿದ್ದರು. ಅಂದು ಮಧ್ಯಾಹ್ನ 12.30ರ ಸುಮಾರಿಗೆ ಕರ್ತವ್ಯಕ್ಕೆ ಹಾಜರಾಗಲು ಡೈರಿ ಸರ್ಕಲ್‌ ಬಳಿ ಇರುವ ಐಟಿಐ ಕಾಲೇಜು ಆವರಣದ ಪಾರ್ಕಿಂಗ್‌ ಸ್ಥಳದಲ್ಲಿ ದ್ವಿಚಕ್ರ ವಾಹನ ನಿಲುಗಡೆ ಮಾಡಿ, ಡಿಕ್ಕಿಯಲ್ಲಿದ್ದ ಮೊಬೈಲ್‌ ಹಾಗೂ ಕಚೇರಿ ಕೀ ತೆಗೆದುಕೊಂಡು ದ್ವಿಚಕ್ರ ವಾಹನದ ಕೀಯನ್ನು ಮರೆತು ಡಿಕ್ಕಿಯಲ್ಲೇ ಬಿಟ್ಟು ಕಚೇರಿಗೆ ತೆರಳಿದ್ದಾರೆ.

ಮನೆ ಕಳ್ಳತನಕ್ಕೆ ಬಂದವನಿಗೆ ಗುಂಡು ಹಾರಿಸಿದ ಮಾಲೀಕ

ಮಧ್ಯಾಹ್ನ 2.30ಕ್ಕೆ ಊಟ ಸಮಯವಾದ್ದರಿಂದ ಊಟದ ಬ್ಯಾಗ್‌ ನೆನಪಾಗಿದೆ. ಈ ವೇಳೆ ದ್ವಿಚಕ್ರ ವಾಹನದ ಕೀ ಹುಡುಕಿದಾಗ ದ್ವಿಚಕ್ರ ವಾಹನದಲ್ಲೇ ಮರೆತು ಕೀ ಬಿಟ್ಟಿರುವುದು ನೆನಪಾಗಿದೆ. ಕೂಡಲೇ ಪಾರ್ಕಿಂಗ್‌ ಸ್ಥಳಕ್ಕೆ ಬಂದು ನೋಡಿದಾಗ ದ್ವಿಚಕ್ರ ವಾಹನದಲ್ಲಿ ಕೀ ಇರಲಿಲ್ಲ. ಬಳಿಕ ಸೆಕ್ಯೂರಿಟಿ ಚೇರ್‌ ಮೇಲೆ ಕೀ ಕಂಡು ಬಂದಿದೆ. ಆ ಕೀ ತೆಗೆದುಕೊಂಡು ಡಿಕ್ಕಿ ತೆರೆದು ನೋಡಿದಾಗ ಬ್ಯಾಗ್‌ನಲ್ಲಿ ಇರಿಸಿದ್ದ .1.50 ಲಕ್ಷ ಇರಲಿಲ್ಲ. ಈ ಬಗ್ಗೆ ಸೆಕ್ಯೂರಿಟಿ ಗಾರ್ಡ್‌ ಹಾಗೂ ವಿದ್ಯಾರ್ಥಿಗಳನ್ನು ವಿಚಾರಿಸಿದಾಗ ಯಾರೊಬ್ಬರು ತಮಗೆ ಗೊತ್ತಿಲ್ಲ ಎಂದಿದ್ದಾರೆ. ಹೀಗಾಗಿ ಶೋಭಾ ಅವರು ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!
ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ