ಅಪ್ರಾಪ್ತ ಬಾಲಕಿಯ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಸುನೀಲಗೌಡ ಮಹಾದೇವಗೌಡ ಪಾಟೀಲ| ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದ ಪೊಲೀಸರು| ಆರೋಪಿಗೆ 10 ವರ್ಷಗಳ ಕಠಿಣ ಸಜೆ ಹಾಗೂ 7 ಸಾವಿರ ರು. ದಂಡ ವಿಧಿಸಿ ತೀರ್ಪು ಪ್ರಕಟ|
ಹಾವೇರಿ(ಫೆ.27): ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಲು ಕಾರಣನಾದ ಹಾನಗಲ್ ತಾಲೂಕಿನ ಯಳ್ಳೂರ ಗ್ರಾಮದ ಸುನೀಲಗೌಡ ಮಹಾದೇವಗೌಡ ಪಾಟೀಲ ಎಂಬಾತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಸಜೆ ಹಾಗೂ 7 ಸಾವಿರ ರು. ದಂಡ ವಿಧಿಸಿ ಗುರುವಾರ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶೆ ಕೆ.ಎಸ್. ಜ್ಯೋತಿಶ್ರೀ ತೀರ್ಪು ನೀಡಿದ್ದಾರೆ.
ಆರೋಪಿ ಸುನೀಲಗೌಡ ಮಹಾದೇವಗೌಡ ಪಾಟೀಲ ಎಂಬಾತ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿ ಅವಳ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕ ರೇವಪ್ಪ ಕಟ್ಟಿಮನಿ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪತ್ನಿ, ನಾದಿನಿ ಕೊಲೆ ಮಾಡಿದ್ದ ವೀಣಾ ವಾದಕನಿಗೆ ಜೀವಾವಧಿ
ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ 10 ವರ್ಷಗಳ ಕಠಿಣ ಸಜೆ ಹಾಗೂ 7 ಸಾವಿರ ರು. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸಂತ್ರಸ್ತೆಗೆ 5 ಲಕ್ಷ ಪರಿಹಾರ ನೀಡಲು ಆದೇಶಿಸಿ ತೀರ್ಪು ನೀಡಿದ್ದಾರೆ ಎಂದು ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದಮಂಡಿಸಿದ ಪೋಕ್ಸೊ ವಿಶೇಷ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ವಿನಾಯಕ ಎಸ್. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.