Tumakuru: ಗೌರಿ ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಪೂಜೆಗೆ ತೆರಳಿದ್ದ ವೇಳೆ ಹಾವು ಕಡಿದು ಬಾಲಕಿ ಸಾವು

By Govindaraj S  |  First Published Sep 6, 2024, 9:37 PM IST

ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ಪೂಜೆಗೆ ತೆರಳಿದ್ದ ಬಾಲಕಿ ಹಾವು ಕಡಿತದಿಂದ ಮೃತಪಟ್ಟ ವಿದ್ರಾವಕ ಘಟನೆ ಕುಣಿಗಲ್ ಪಟ್ಟಣದ 22ನೇ ವಾರ್ಡ್‌ನಲ್ಲಿ ಶುಕ್ರವಾರ ನಡೆದಿದೆ. ಸ್ಪಂದನ (13), ಮೃತ ಬಾಲಕಿ.


ತುಮಕೂರು (ಸೆ.06): ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ಪೂಜೆಗೆ ತೆರಳಿದ್ದ ಬಾಲಕಿ ಹಾವು ಕಡಿತದಿಂದ ಮೃತಪಟ್ಟ ವಿದ್ರಾವಕ ಘಟನೆ ಕುಣಿಗಲ್ ಪಟ್ಟಣದ 22ನೇ ವಾರ್ಡ್‌ನಲ್ಲಿ ಶುಕ್ರವಾರ ನಡೆದಿದೆ. ಸ್ಪಂದನ (13), ಮೃತ ಬಾಲಕಿ. ಕುಟುಂಬದವರ ಜೊತೆ ಗೌರಿ ಹಬ್ಬದ ನಿಮಿತ್ತ ಪಟ್ಟಣದ ವೈಕೆ ಆರ್ ಪಾರ್ಕ್ ಬಳಿ ಇರುವ ಮುಳ್ಳುಕಟ್ಟಮ್ಮ ದೇವಾಲಯಕ್ಕೆ ಪೂಜೆಗೆ ಸ್ಪಂದನ ತೆರಳಿದ್ದಳು. ಬಾಲಕಿ ದೇವಾಲಯ ಆವರಣದಲ್ಲಿದ್ದ ವಿಶ್ರಾಂತಿ ಪಡೆಯುವ ಚೇರ್ ಮೇಲೆ ಕುಳಿತಿದ್ದಾಗ  ಹಾವು ಕಡಿತಕ್ಕೆ ಒಳಗಾಗಿದ್ದಾಳೆ. 

ಈ ವೇಳೆ ಹಾವು ಕಡಿದಿದ್ದನ್ನ ಬಾಲಕಿ ಗಮನಿಸಿಲ್ಲ. ಪೂಜೆ ಮುಗಿಸಿಕೊಂಡು ಕುಟುಂಬದವರೊಂದಿಗೆ ಮನೆಗೆ ಬಂದ ಬಾಲಕಿ, ಕೆಲಕಾಲ ಆಟ ಆಡಿದ್ದಾಳೆ. ನಂತರ ತೀವ್ರ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾಳೆ. ಕೂಡಲೇ ಕುಣಿಗಲ್ ತಾಲ್ಲೂಕು ಆಸ್ಪತ್ರೆಗೆ ಮನೆಯವರು ಕರೆದುಕೊಂಡು ಹೋಗಿದ್ದಾರೆ. ಮತ್ತಷ್ಟು ಚಿಕಿತ್ಸೆಗೆ ಚಿಕಿತ್ಸೆಗೆ ಬೆಳ್ಳೂರ್ ಕ್ರಾಸ್ ಬಳಿ ಇರುವ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ. ಇನ್ನು ಬಾಲಕಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Latest Videos

undefined

ಬಯಲುಸೀಮೆಯನ್ನು ಬಂಗಾರದ ಸೀಮೆ ಮಾಡುವ ಶುಭ ಘಳಿಗೆ: ಡಿ.ಕೆ.ಶಿವಕುಮಾರ್

ಬಾಟಲ್ ಮುಚ್ಚಳ ಗಂಟಲಲ್ಲಿ ಸಿಲುಕಿ ಮಗು ದಾರುಣ ಸಾವು: ಜ್ಯೂಸ್ ಬಾಟಲ್ ಮುಚ್ಚಳದ ಜತೆ ಆಟವಾಡುತ್ತಿದ್ದ ಪುಟ್ಟ ಮಗು ಆಕಸ್ಮಿಕವಾಗಿ ಬಾಯಿಗೆ ಹಾಕಿಕೊಂಡು ಗಂಟಲಿನಲ್ಲಿ ಸಿಲುಕಿಕೊಂಡ ಪರಿಣಾಮ ಉಸಿರಾಡಲು ಆಗದೆ ಮೃತಪಟ್ಟ ಹೃದಯ ವಿದ್ರಾವಕ ಘಟನೆ ತಾಲೂಕಿನ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ. 

ಗ್ರಾಮದ ವೇದಮೂರ್ತಿ ಗಂಗಾದರ ಶಾಸ್ತ್ರಿ, ಅನುಷಾರವರ 1.5 ವರ್ಷದ ಪುತ್ರ ನಂದೀಶ ಬೆಳಿಗ್ಗೆ ಜ್ಯೂಸ್ ಬಾಟಲಿ ಮುಚ್ಚಳದ ಜತೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾಯಿಗೆ ಹಾಕಿಕೊಂಡು ಗಂಟಲಿನಲ್ಲಿ ಸಿಲುಕಿಕೊಂಡಿದೆ ಕೂಡಲೇ ಉಸಿರಾಟದಲ್ಲಿ ಏರುಪೇರಾಗಿದ್ದು ಗಮನಿಸಿದ ಪೋಷಕರು ವಾಹನದಲ್ಲಿ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯೆ ಮಗು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಂಜೆ ವೇಳೆಯಲ್ಲಿ ಗ್ರಾಮದಲ್ಲಿ ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

click me!