
ಬೆಳಗಾವಿ(ಅ.17): ಉದ್ಯಮಿ ಸಂತೋಷ ಪದ್ಮನ್ನವರ ಕೊಲೆ ಪ್ರಕರಣದ ಆರೋಪಿಗಳನ್ನ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಮೂವರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಮೂವರನ್ನೂ ಮಾಳಮಾರುತಿ ಠಾಣೆ ಪೊಲೀಸರು ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ.
ಸಂತೋಷ ಪದ್ಮನ್ನವರ ಬೆಳಗಾವಿಯಲ್ಲಿ ಬಡ್ಡಿ ವ್ಯವಹಾರ, ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡ್ತಿದ್ದರು. ಸಂತೋಷ ಪದ್ಮನ್ನವರ ಅಕ್ಟೋಬರ್ 9 ರಂದು ಸಾವನ್ನಪ್ಪಿದ್ದರು. ತಂದೆಯ ಸಾವಿನ ಬಗ್ಗೆ ಪುತ್ರಿ ಸಂಜನಾ ಅನುಮಾನ ವ್ಯಕ್ತಪಡಿಸಿದ್ದರು.
ಪ್ರಕರಣದ ಆರೋಪಿಗಳಾದ ಸಂತೋಷ ಪತ್ನಿ ಉಮಾ ಪದ್ಮನ್ನವರ, ಶೋಭಿತ್‌ಗೌಡ, ಪವನ್ ಹಿಂಡಲಗಾ ಜೈಲಿಗೆ ರವಾನೆ ಮಾಡಲಾಗಿದೆ. ಮಂಗಳೂರಲ್ಲಿ ತಲೆ ಮರೆಸಿಕೊಂಡಿದ್ದ ಶೋಭಿತ್‌ಗೌಡ, ಪವನ್‌ನನ್ನ ಬೆಳಗಾವಿ ಮಾಳಮಾರುತಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದರು. ಇಡೀ ದಿನ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಮೂವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ