
ಬೆಂಗಳೂರು (ಆ.23) : ಗುತ್ತಿಗೆದಾರರಿಗೆ ಪಾವತಿಸಬೇಕಿದ್ದ ಹಣವನ್ನು ತನ್ನ ಪ್ರೇಯಸಿ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದ ಬಿಬಿಎಂಪಿ ದ್ವಿತೀಯ ದರ್ಜೆ ಸಹಾಯಕ ಹಾಗೂ ಆತನ ಪ್ರೇಯಸಿಯನ್ನು ಅಮೃತಹಳ್ಳಿ ಠಾಣೆ ಪೊಲೀಸ(Amritahalli Police Station)ರು ಬಂಧಿಸಿದ್ದಾರೆ. ಥಣಿಸಂದ್ರ(Thanisandra)ದ ಎಕೆ ಕಾಲನಿ ನಿವಾಸಿ ಎಂ.ಕೆ.ಪ್ರಕಾಶ್(M.Prakash) (39) ಮತ್ತು ಯಲಹಂಕ ಉಪನಗರದ ಬ್ಯೂಟಿಷಿಯನ್ ಕಾಂಚನಾ(Kanchana) (30) ಬಂಧಿತರು. ಬಿಬಿಎಂಪಿ ಯಲಹಂಕ ವಲಯ ಬ್ಯಾಟರಾಯನಪುರ(Byatarayanapur) ಕಚೇರಿಯಲ್ಲಿ ಎಸ್‌ಡಿಎ(SDA) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಕಾಶ್, 2021-22ನೇ ಸಾಲಿನಲ್ಲಿ .14.07 ಲಕ್ಷ ದುರುಪಯೋಗ ಪಡಿಸಿಕೊಂಡಿದ್ದರು. ಈ ಸಂಬಂಧ ಕಾರ್ಯಪಾಲಕ ಎಂಜಿನಿಯರ್ (ವಿದ್ಯುತ್) ರಾಜೇಂದ್ರ ನಾಯ್‌್ಕ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Honey Trap ಬಲೆಗೆ ಮಂಡ್ಯದ ಉದ್ಯಮಿ : ಚಿನ್ನದ ಅಂಗಡಿ ಮಾಲೀಕನ ಬಳಿ 50ಲಕ್ಷ ಪೀಕಿದ ಗ್ಯಾಂಗ್!
ಎಸ್‌ಡಿಎ ಪ್ರಕಾಶ್, ವಾರ್ಡ್‌ನಲ್ಲಿ ನಡೆಯುತ್ತಿದ್ದ ಕಾಮಗಾರಿಗಳ ಸಂಬಂಧ ಮೇಲಧಿಕಾರಿ ಸಹಿ ಹಾಗೂ ಒಪ್ಪಿಗೆ ಪಡೆದು ಗುತ್ತಿಗೆದಾರರಿಗೆ ಚೆಕ್ ಅಥವಾ ಆರ್‌ಟಿಜಿಎಸ್ ಮುಖಾಂತರ ಹಣ ಬಿಡುಗಡೆ ಮಾಡಬೇಕಿತ್ತು. ಈ ನಡುವೆ ಪ್ರಕಾಶ್‌ಗೆ ಬ್ಯೂಟಿಶಿಯನ್ ಕಾಂಚನಾ ಪರಿಚಯವಾಗಿ ಕೆಲ ದಿನಗಳ ಬಳಿಕ ಆಪ್ತರಾಗಿದ್ದರು. ಹೀಗಾಗಿ ಪ್ರಕಾಶ್ ಪಾಲಿಕೆ ಬ್ಯಾಂಕ್ ಖಾತೆಯಿಂದ ಚೆಕ್ ಅಥವಾ ಆರ್‌ಟಿಜಿಎಸ್‌ನಲ್ಲಿ ಹಣ ಪಾವತಿಸುವಾಗ ಕಾಂಚನಾ ಬ್ಯಾಂಕ್ ಖಾತೆಗೆ ಜಮೆ ಮಾಡುತ್ತಿದ್ದ. ಆದರೆ, ಪಾಲಿಕೆ ದಾಖಲೆಗಳಲ್ಲಿ ಗುತ್ತಿಗೆದಾರರಿಗೆ ಹಣ ಪಾವತಿಸಲಾಗಿದೆ ಎಂದು ನಮೂದಿಸುತ್ತಿದ್ದ. 2021ರ ನವೆಂಬರ್‌ನಿಂದ .14.07 ಲಕ್ಷ ದುರ್ಬಳಕೆ ಮಾಡಿಕೊಂಡಿದ್ದ.
ಲೆಕ್ಕಪರಿಶೋಧನೆ ವೇಳೆ ಸಿಕ್ಕಿಬಿದ್ದ: ಕಳೆದ ಜುಲೈನಲ್ಲಿ ಪಾಲಿಕೆ ಲೆಕ್ಕಪರಿಶೋಧನೆ ಆರಂಭವಾದ ಬಳಿಕ ಪ್ರಕಾಶ್ ಮೇಲಧಿಕಾರಿಗಳ ಅನುಮತಿ ಪಡೆಯದೆ ದಿಢೀರ್ ರಜೆ ಹಾಕಿಕೊಂಡಿದ್ದ. ಲೆಕ್ಕ ಪರಿಶೋಧನೆ ವೇಳೆ ಕೆಲ ಲೆಕ್ಕಪತ್ರಗಳು ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ಪಾಲಿಕೆಯ ಬ್ಯಾಂಕ್ ಖಾತೆಯ ಸ್ಟೇಟ್‌ಮೆಂಟ್ ತೆಗೆದು ನೋಡಿದಾಗ ಅಪರಿಚಿತ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಸಂಬಂಧ ವಿಚಾರಿಸಲು ಕರೆ ಮಾಡಿದರೂ ಪ್ರಕಾಶ್ ಕರೆ ಸ್ವೀಕರಿಸಿಲ್ಲ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಿದಾಗ ಹಣ ದುರ್ಬಳಕೆ ಮಾಡಿಕೊಂಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಎಂಜಿನಿಯರ್ ಸೋಗಲ್ಲಿ ಸಿಎಂ ಗೃಹಕಚೇರಿಗೆ ಎಂಟ್ರಿ, ಬಂಧನ
ಆರೋಪಿ ಪ್ರಕಾಶ್ ಪ್ರೇಯಿಸಿ ಕಾಂಚನಾ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದ ಹಣದಲ್ಲಿ ಆಕೆ ಚಿನ್ನಾಭರಣ ಖರೀದಿಸಿದ್ದಳು. ಅಷ್ಟೇ ಅಲ್ಲದೆ, ಇಬ್ಬರೂ ಮೋಜು-ಮಸ್ತಿಗಾಗಿ ಹಣವನ್ನು ಬಳಸಿಕೊಂಡಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ