
ಬೆಂಗಳೂರು (ಫೆ.17): ಬೆಂಗಳೂರಿನಲ್ಲಿ ಬಾಲ್ಯ ವಿವಾಹ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಈ ಘಟನೆ ಸ್ಪಷ್ಟ ನಿದರ್ಶನವಾಗಿದೆ. ಬಾಲಕಿಯ ತಂದೆ ತಾಯಿಗೆ ಮಾಹಿತಿಯನ್ನೇ ತಿಳಿಸದೆ ಆಕೆಯ ದೊಡ್ಡಪ್ಪ ಹಾಗೂ ದೊಡ್ಡಮ್ಮ ಯುವಕನ ಜೊತೆ ಮದುವೆ ಮಾಡಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಸರ್ಜಾಪುರದಲ್ಲಿ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಸ್ವತಃ ಬಾಲಕಿ ತಾಯಿ ಈ ಬಗ್ಗೆ ಸರ್ಜಾಪುರ ಠಾಣೆಗೆ ದೂರು ನೀಡಿದ್ದಾರೆ.
ಯುವತಿ ಎಂಟನೇ ತರಗತಿಯಲ್ಲಿ ಓದುತ್ತಿದ್ದು, ಈಗ ಆಕೆಗೆ 14 ವರ್ಷವಾಗಿದೆ. ಯುವಕನಿಗೆ 24 ವರ್ಷವಾಗಿದೆ. ದೂರುದಾರ ಮಹಿಳೆಯ ಅತ್ತೆ , ಭಾವ, ಭಾವನ ಪತ್ನಿ ವಿರುದ್ದ ದೂರು ದಾಖಲು ಮಾಡಲಾಗಿದೆ. ಇದೇ ತಿಂಗಳು 15 ರಂದು ಯುವತಿಯ ಅಜ್ಜಿ, ದೊಡ್ಡಪ್ಪ-ದೊಡ್ಡಮ್ಮ ತಂದೆ-ತಾಯಿಯಾಗಿರುವ ನಮಗೆ ಗೊತ್ತೇ ಇಲ್ಲದೆ ಮದುವೆ ಮಾಡಿಸಿದ್ದಾರೆಂದು ಯುವತಿಯ ತಾಯಿ ಸರ್ಜಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಗಳು ಇನ್ನೂ ಅಪ್ರಾಪ್ತೆಯಾಗಿದ್ದಾಳೆ. ನನ್ನ ಮಗಳನ್ನು ಪುಸಲಾಯಿಸಿ ಮದುವೆ ಮಾಡಿಸಿದ್ದಾರೆ. ಕೈವಾರದಲಿನ ಯಲಮ್ಮ ದೇವಾಲಯದಲ್ಲಿ ತಂದೆ ತಾಯಿಗೆ ಗೊತ್ತಿಲ್ಲದೆ ಮದುವೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹಲಸಿನಕಾಯಿಪುರ ಗ್ರಾಮದ ವಿನೋದ್ ಕುಮಾರ್ ಜೊತೆಯಲಿ ಮದುವೆ ಮಾಡಿಸಿದ್ದು, ಮದುವೆಗೆ ವಿನೋದ್ ಕುಮಾರ್ ತಂದೆ ಮುನಿಯಪ್ಪ, ತಾಯಿ ರತ್ನಮ್ಮ, ವಿನೋದ್ ಕುಮಾರ್ ಅಣ್ಣ ವಿಜಯ್ ಕುಮಾರ್ ಮತ್ತು ಮುನಿಯಪ್ಪ, ವೆಂಕಟಮ್ಮರವರು ಸೇರಿ ಮದುವೆ ಮಾಡಿದ್ದಾರೆ.
ನನ್ನ ಮಗಳು ಅಪ್ರಾಪ್ತ ವಯಸ್ಕಳೆಂದು ಗೊತ್ತಿದ್ದರೂ ಸಹ ಬಲತ್ಕಾರದ ಮದುವೆ ಮಾಡಿದ್ದಾರೆ. ಕಾನೂನು ಬಾಹಿರವಾಗಿ ಮದುವೆ ಮಾಡಿದ್ದು, ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ