17ರ ಬಾಲಕಿ...42ರ ಪುರುಷ..ಲಾಡ್ಜ್‌ನಲ್ಲಿ ಪ್ರೇಮಿಗಳ ಆತ್ಮಹತ್ಯೆ ಯತ್ನ!

Published : Aug 19, 2021, 12:32 AM ISTUpdated : Aug 19, 2021, 12:34 AM IST
17ರ ಬಾಲಕಿ...42ರ ಪುರುಷ..ಲಾಡ್ಜ್‌ನಲ್ಲಿ ಪ್ರೇಮಿಗಳ ಆತ್ಮಹತ್ಯೆ ಯತ್ನ!

ಸಾರಾಂಶ

* ಬಾಲಕಿಗೆ 17 ವರ್ಷ, ಆಕೆಯ ಪ್ರಿಯಕರಿನಿಗೆ 42 ವರ್ಷ * ವಸತಿ ಗೃಹದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು * ಪ್ರಾಣಾಪಾಯದಿಂದ ಪಾರಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ನೆಲ್ಲೂರು(ಆ. 18) ಪ್ರೀತಿ ಕುರುಡು ಎನ್ನುವ ಮಾತಿದೆ. ಆದರೆ ಇಲ್ಲೊಂದು ಅವಘಡವೇ ಆಗಿದೆ.  ಆಂಧ್ರಪ್ರದೇಶದಿಂದ ಅಂಥದ್ದೊಂದು ಘಟನೆ ವರದಿಯಾಗಿದೆ. ಇವರು ಪ್ರೇಮಿಗಳು ಎಂಬುದನ್ನು ಕೇಳಿ ವಸತಿಗೃಹದ ಸಿಬ್ಬಂದಿ ಹೌಹಾರಿದ್ದಾರೆ. 

ಬಾಲಕಿಗೆ 17 ವರ್ಷ, ಆಕೆಯ ಪ್ರಿಯಕರಿನಿಗೆ 42 ವರ್ಷ.  ಪ್ರಿಯಕರನ ಹೆಸರು ರಾಮಯ್ಯ. ನೆಲ್ಲೂರಿನ ವಸತಿಗೃಹವೊಂದಕ್ಕೆ ತೆರಳಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೊರೋನಾ ಕಾಲದ ಸಾಲ; ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನ ಕುಟುಂಬ ನಾಪತ್ತೆ

ಯಾವ ಕಾರಣಕ್ಕೆ ವಿಷ ಸೇವಿಸಿದರು ಎನ್ನುವುದು ಗೊತ್ತಾಗಿಲ್ಲ. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.   ಪ್ರಿಯಕರ ಮೊದಲೇ
ಮದುವೆಯಾಗಿದ್ದ ವಿಚಾರ ಗೊತ್ತಾದ ನಂತರ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದನ್ನು ಕಂಡ ಪ್ರಿಕರ ಸಹ ಜೀವ ತೆಗೆದುಕೊಳ್ಳಲು ಮುಂದಾಗಿದ್ದಾನೆ.

ನೆಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಯಾವ ಊರಿನಿಂದ ನೆಲ್ಲೂರಿಗೆ ಬಂದಿದ್ದರು ಎಂಬ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. 
 

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?