
ಶ್ರೀರಂಗಪಟ್ಟಣ(ಜೂ.09): ವರದಕ್ಷಿಣೆ ಕಿರುಕುಳ ನೀಡಿ ಪತ್ನಿ ಸಾವಿಗೆ ಕಾರಣನಾಗಿದ್ದ ಪತಿಗೆ ಶ್ರೀರಂಗಪಟ್ಟಣ ನ್ಯಾಯಾಲಯ 17 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಪಾಂಡವಪುರ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ನಿವಾಸಿ ಕೃಷ್ಣಾಚಾರಿ ಪುತ್ರ ಲೋಕೇಶಚಾರಿ ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ. ಲೋಕೇಶಚಾರಿ ಎಚ್.ಡಿ.ಕೋಟೆ ತಾಲೂಕಿನ ಅಗಸನಹುಂಡಿ ಗ್ರಾಮದ ನಿವಾಸಿ ಸೋದರಮಾವ ಸೋಮಚಾರಿ ಪುತ್ರಿ ಎಸ್.ಸುಜಾತ ಅವರನ್ನು ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಲಾರಿ ಚಾಲಕನಾಗಿದ್ದ ಲೋಕೇಶಚಾರಿ ಪತ್ನಿ ಸುಜಾತಗೆ ತವರು ಮನೆಯಿಂದ ವರದಕ್ಷಿಣೆ ತರುವಂತೆ ಪದೇ ಪದೇ ಪೀಡಿಸುತ್ತಿದ್ದನು. ನಿತ್ಯ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದನು. ಕಿರುಕುಳ ತಾಳಲಾರದೆ ಸುಜಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Mandya: ಟಾರ್ಗೆಟ್ ಮಾಡಿದ್ದು ತಮ್ಮನನ್ನ ಹಂತಕರ ಕೈಯಲ್ಲಿ ತಗಲಾಕಿ ಪ್ರಾಣ ಬಿಟ್ಟಿದ್ದು ಅಣ್ಣ!
ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸುಜಾತ ಅವರ ತಂದೆ ಸೋಮಚಾರಿ ಪಾಂಡವಪುರ ಪಟ್ಟಣದ ಪೊಲೀಸ್ ಠಾಣೆಗೆ 2015 ಫೆ.1ರಂದು ಅಳಿಯ ಲೋಕೇಶಚಾರಿ ವಿರುದ್ಧ ದೂರು ನೀಡಿದ್ದರು. ಈ ಬಗ್ಗೆ 6 ಜುಲೈ 2015ರಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಲೋಕೇಶಾಚಾರಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ಶ್ರೀರಂಗಪಟ್ಟಣದ ನ್ಯಾಯಾಲಯದ ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ಅಂತಿಮವಾಗಿ ಲೋಕೇಶಾಚಾರಿ ಅಪರಾಧಿ ಎಂದು ತೀರ್ಮಾನಿಸಿ 17 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ