Crime News: 18 ನಾಡ ಬಂದೂಕು ವಶ: ಇಬ್ಬರಿಗೆ ನ್ಯಾಯಾಂಗ ಬಂಧನ

Published : Feb 23, 2023, 05:26 AM IST
Crime News: 18 ನಾಡ ಬಂದೂಕು ವಶ:  ಇಬ್ಬರಿಗೆ ನ್ಯಾಯಾಂಗ ಬಂಧನ

ಸಾರಾಂಶ

ಬಾಳೆಹೊನ್ನೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಎರಡು ಬಂದೂಕು ದುರಸ್ತಿ ಕೇಂದ್ರಗಳ ಮೇಲೆ ದಾಳಿ ನಡೆಸಿ ಒಟ್ಟು 18 ನಾಡ ಬಂದೂಕುಗಳನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಪಡಿಸಲಾಗಿದೆ.

ಬಾಳೆಹೊನ್ನೂರು (ಫೆ.23) : ಬಾಳೆಹೊನ್ನೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಎರಡು ಬಂದೂಕು ದುರಸ್ತಿ ಕೇಂದ್ರಗಳ ಮೇಲೆ ದಾಳಿ ನಡೆಸಿ ಒಟ್ಟು 18 ನಾಡ ಬಂದೂಕುಗಳನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಪಡಿಸಲಾಗಿದೆ.

ಕೊಪ್ಪ ಎಎಸ್‌ಪಿ ಗುಂಜನ್‌ ಆರ್ಯ(Koppa ASP Gunjan Arya) ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿ, ಬಿದರೆ ಗ್ರಾಮದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಮವಾರ ಅಕ್ರಮ ಬಂದೂಕಿನಿಂದ ಗುಂಡಿಕ್ಕಿ ಇಬ್ಬರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆಯಂತೆ ಬಂದೂಕುಗಳನ್ನು ದುರಸ್ತಿ ಮಾಡುವ ಎರಡು ಕೇಂದ್ರಗಳ ಮೇಲೆ ದಾಳಿ ನಡೆಸಿ ಒಟ್ಟು 18 ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚಿಕ್ಕಮಗಳೂರು: ದತ್ತಪೀಠ ಸಮಿತಿ ರದ್ದತಿಗೆ ಮುಸ್ಲಿಂ ಮುಖಂಡರ ಆಗ್ರಹ

ಹಿರೇಗದ್ದೆ ಗ್ರಾಮದ ಅಡಿಗೆಬೈಲಿನ ಸದಾಶಿವ ಆಚಾರ್ಯ(Adigebail sadashiva acharya) ಎಂಬುವವರ ಕೋವಿ ದುರಸ್ತಿ ಕೇಂದ್ರದಲ್ಲಿ ಪರವಾನಗಿ ಇಲ್ಲದ 15 ನಾಡ ಬಂದೂಕು(Gun), ರಂಭಾಪುರಿಮಠ ರಸ್ತೆ(Rambhapuri math road)ಯ ರಾಮಚಂದ್ರ ಆಚಾರ್ಯ ಅವರ ಕೋವಿ ದುರಸ್ತಿ ಕೇಂದ್ರದಲ್ಲಿ ಪರವಾನಗಿ ರಹಿತ 3 ನಾಡ ಬಂದೂಕು ವಶಕ್ಕೆ ಪಡೆದು ದುರಸ್ತಿ ಕೇಂದ್ರದ ಮಾಲೀಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಶಪಡಿಸಿಕೊಂಡಿರುವ ಬಂದೂಕಗಳ ಕುರಿತು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿ ಯಾರದ್ದು ಎಂದು ತಿಳಿದು ಕೊಳ್ಳಲಾಗುವುದು ಎಂದರು.

ಪಾಸಣೆಗಾಗಿ ಈಗಾಗಲೇ ವಿಶೇಷ ತಂಡವನ್ನು ರಚನೆ ಮಾಡಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದರು.

ತರೀಕೆರೆ: ವ್ಯಕ್ತಿ ಗಡಿಪಾರಿಗೆ ಆದೇಶ

ಚಿಕ್ಕಮಗಳೂರು: ಮಟ್ಕಾ, ಜೂಜಾಟದ ದಂಧೆಯಲ್ಲಿ ತೊಡಗಿದ್ದ ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿ ವ್ಯಕ್ತಿಯೋರ್ವರನ್ನು ಒಂದು ವರ್ಷದ ಅವಧಿಗೆ ಅನ್ವಯವಾಗುವಂತೆ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಟಿ.ಡಿ.ದೇವೇಂದ್ರರಾವ್‌(TD Devendra rao) ಅವರನ್ನು 2023ರ ಫೆ.21 ರಿಂದ ಅನ್ವಯವಾಗುತ್ತವೆ 2024ರ ಫೆ.20ರವರೆಗೆ ಜಿಲ್ಲೆ ವ್ಯಾಪ್ತಿಯಿಂದ ಗಡಿಪಾರು ಮಾಡಿ ಆದೇಶಿಸಿದ್ದಾರೆ. ದೇವೇಂದ್ರರಾವ್‌ ಕಳೆದ ಹಲವು ವರ್ಷಗಳಿಂದ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡು ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುತ್ತಿರುವುದರಿಂದ ಅವರ ವಿರುದ್ಧ ತರೀಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಟ್ಕಾ, ಜೂಜಾಟದಂತಹ ಚಟುವಟಿಕೆಯಲ್ಲಿ ತೊಡಗಿದ್ದರಿಂದ ಒಟ್ಟು 12 ಪ್ರಕರಣಗಳನ್ನು ದಾಖಲು ಮಾಡಲಾಗಿತ್ತು.

ದತ್ತಪೀಠದ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೊನೆಗೂ ಕ್ಷಮೆಯಾಚಿಸಿದ ಶಾಸಕ ಟಿ.ಡಿ.ರಾಜೇಗೌಡ

ಈ ಪೈಕಿ ಕೆಲವು ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದರೆ, ಕೆಲವು ಖುಲಾಸೆ ಆಗಿದ್ದವು. 2014 ರಿಂದ ಸ್ಥಳೀಯ ಪೊಲೀಸರು ಎಚ್ಚರಿಕೆ ನೀಡಿದರೂ ಮಟ್ಕಾ, ಜೂಜಾಟ ದಂಧೆಯನ್ನು ಮುಂದುವರೆಸಿಕೊಂಡು ಬಂದಿದ್ದರು. ಈತನಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಹಿನ್ನಲೆಯಲ್ಲಿ ಪೊಲೀಸ್‌ ಅಧೀಕ್ಷಕರ ವರದಿ ಆಧಾರದ ಮೇಲೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!