ಪ್ರೀತ್ಸೆ..ಪ್ರೀತ್ಸೆ ಅಂತ ಯುವಕನೋರ್ವ ಯುವತಿಯ ಪ್ರಾಣ ತಿಂದಿರುವ ಘಟನೆ ನಡೆದಿದೆ. ಯುವಕನ ಕಾಟ ತಾಳಲಾರದೆ ಯುವತಿ ಆತ್ಮಹತ್ಯೆ ಶರಣಾಗಿದ್ದಾಳೆ
ಮಂಡ್ಯ, (ಜ.30): ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನ ಕಿರುಕುಳದಿಂದ ಬೇಸತ್ತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕು ನಗರಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸೋನಿಕ (19) ಎಂಬಾಕೆಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ. ಅದೇ ಗ್ರಾಮದ ಮಂಜಪ್ಪಗೌಡ ಎಂಬ ಯುವಕ ಕಳೆದ ಹಲವಾರು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ.
ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಪ್ರೇಯಸಿಯ ಕೊಂದ ಪ್ರೇಮಿ!
ಈ ಬಗ್ಗೆ ಆತನಿಗೆ ಬುದ್ದಿ ಹೇಳಿದ್ದರೂ ಕೇಳಿರಲಿಲ್ಲ. ಇದರಿಂದ ಬೇಸತ್ತ ಸೋನಿಕ, ಕೊನೆಗೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯುವತಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.