ಶೃಂಗೇರಿ: ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ, ಕಾರಣ ನಿಗೂಢ?

By Kannadaprabha News  |  First Published Sep 30, 2023, 11:55 AM IST

ಗೌರಿ ಗಣೇಶ ಹಬ್ಬಕ್ಕೆಂದು ಮನೆಗೆ ಹೋದ ಸಂದರ್ಭದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಸುರಕ್ಷಾ


ಶೃಂಗೇರಿ(ಸೆ.30): ತಾಲೂಕಿನ ಬೇಗಾರು ಪಂಚಾಯಿತಿ ವ್ಯಾಪ್ತಿಯ ಬೇಗಾರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಶೃಂಗೇರಿ ಪದವಿ ಕಾಲೇಜಿನಲ್ಲಿ ಬಿಕಾಂ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ(19) ಪಟ್ಟಣದ ಸಚ್ಚಿದಾ ನಂದಪುರದ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿದ್ದುಕೊಂಡು ಕಾಲೇಜು ವಿದ್ಯಾಭ್ಯಾಸ ಮಾಡುತ್ತಿದ್ದಳು. ಗೌರಿ ಗಣೇಶ ಹಬ್ಬಕ್ಕೆಂದು ಮನೆಗೆ ಹೋದ ಸಂದರ್ಭದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.

Tap to resize

Latest Videos

undefined

ರಾತ್ರಿ 10 ಗಂಟೆಗೆ ಮೇಲಿಂದ ಬಿತ್ತು ಹೆಣ..! ಗಣೇಶ ಹಬ್ಬಕ್ಕೆ ಬಂದವಳು ಹೆಣವಾಗಿದ್ಲು..!

ಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಈ ಸಂಬಂಧ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. 

click me!