ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಸಹೋದರಿಗೆ ಗುಂಡಿಟ್ಟ!

Published : Oct 14, 2020, 12:35 AM ISTUpdated : Oct 14, 2020, 12:39 AM IST
ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಸಹೋದರಿಗೆ ಗುಂಡಿಟ್ಟ!

ಸಾರಾಂಶ

ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಸಹೋದರಿ ಮೇಲೆ ದಾಳಿ/ ಗುಂಡಿಟ್ಟು ಹತ್ಯೆ ಮಾಡಿದ ಸೋದರ ಸಂಬಂಧಿ/ ಬೆಚ್ಚಿ  ಬೀಳಿಸಿದ ಪಂಜಾಬ್ ಪ್ರಕರಣ

ಚಂಡಿಘಡ(ಅ. 13) ಬೇರೆಯವರೊಡನೆ ಸಂಬಂಧ ಹೊಂದಿದ್ದಳು ಎಂಬ ಕಾರಣಕ್ಕೆ 19 ವರ್ಷದ ಯುವತಿಯನ್ನು ಸೋದರಸಂಬಂಧಿ  ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.

ಪಂಜಾಬ್‌ನ ಪಟಿಯಾಲ ಜಿಲ್ಲೆಯ ಸನೌರ್ ಪೊಲೀಸ್ ಠಾಣೆ ವ್ಯಾಪ್ತಿಯ ಭಂಬುವಾನ್ ಗ್ರಾಮದಲ್ಲಿನ ಘಟನೆ ಬೆಚ್ಚಿ ಬೀಳಿಸಿದೆ.

ಘಟನೆಯ ನಂತರ  ಆರೋಪಿ ಪಿಎಸ್ ಸಿಂಗ್ ಪರಾರಿಯಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಆತನ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ.  ಶಸ್ತ್ರಾಸ್ತ್ರ ಕಾಯ್ದೆಯಡಿಯೂ ಆರೋಪ ಸಿದ್ಧಮಾಡಿಕೊಳ್ಳಲಾಗಿದೆ.

ಸೆಕ್ಸ್ ಮಾಡುವಾಗ ಕಾಂಡೋಮ್ ಬಳಸು ಎಂದಿದ್ದಕ್ಕೆ ಕೊಲೆ ಮಾಡಿದ

ಸಂತ್ರಸ್ತೆಯ ತಾಯಿ ದೂರು  ನೀಡಿದ್ದು, ಸೋಮವಾರ ಮಧ್ಯಾಹ್ನ ತನ್ನ ಮಗಳು ಮತ್ತು ಆರೋಪಿಗಳ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಆಕೆ ಯಾರೊಂದಿಗಾದರೂ ಅಕ್ರಮ ಸಂಬಂಧವನ್ನು ಹೊಂದಿದ್ದಾಳೆ ಎಂದು ಆತ ಆರೋಪಿಸುತ್ತಿದ್ದ.  ನಂತರ ಸಿಟ್ಟಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎಂದು ಹೇಳಿಕೆ ನೀಡಿದ್ದಾರೆ.

ಆರೋಪಿಯು ಪಿಸ್ತೂಲ್ ತಂದು ಮೂರು ಸುತ್ತು ಗುಂಡು ಹಾರಿಸಿದ್ದಾನೆ, ಅದರಲ್ಲಿ ಎರಡು ಗುಂಡುಗಳು ಯುವತಿಗೆ ತಗುಲಿದರೆ ಒಂದು ಗುಂಡು ಮನೆಯ ಗೋಡೆಗೆ ಬಡಿದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!