Bengaluru: ಕದ್ದ ಚಿನ್ನಾಭರಣ ಧರಿಸಿ ರೀಲ್ಸ್ ಮಾಡುತ್ತಿದ್ದ ಮುಂಬೈ ಖದೀಮರಿಬ್ಬರ ಬಂಧನ

Published : Apr 05, 2023, 06:41 AM IST
Bengaluru: ಕದ್ದ ಚಿನ್ನಾಭರಣ ಧರಿಸಿ ರೀಲ್ಸ್ ಮಾಡುತ್ತಿದ್ದ ಮುಂಬೈ ಖದೀಮರಿಬ್ಬರ ಬಂಧನ

ಸಾರಾಂಶ

ನಗರದಲ್ಲಿ ಬೀಗ ಹಾಕಿದ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ದೋಚಿದ್ದ ಇಬ್ಬರು ಕುಖ್ಯಾತ ಖದೀಮರನ್ನು ಅಮೃತಹಳ್ಳಿ ಠಾಣೆ ಪೊಲೀಸರು ಸೆರೆ ಹಿಡಿದು 67 ಲಕ್ಷ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. 

ಬೆಂಗಳೂರು (ಏ.05): ನಗರದಲ್ಲಿ ಬೀಗ ಹಾಕಿದ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ದೋಚಿದ್ದ ಇಬ್ಬರು ಕುಖ್ಯಾತ ಖದೀಮರನ್ನು ಅಮೃತಹಳ್ಳಿ ಠಾಣೆ ಪೊಲೀಸರು ಸೆರೆ ಹಿಡಿದು 67 ಲಕ್ಷ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಮಹಾರಾಷ್ಟ್ರ ಮುಂಬೈ ನಗರದ ಸಲೀಂ ರಫೀಕ್‌ ಶೇಖ್‌ ಅಲಿಯಾಸ್‌ ಬಾಂಬೆ ಸಲೀಂ ಹಾಗೂ ಯಾಸ್ಮಿನ್‌ ಮಕ್ಬುಲ್‌ ಖಾನ್‌ ಅಲಿಯಾಸ್‌ ಅಸ್ಲಾಂ ಉಪ್‌ರ್‍ ಪಾಂಡೆ ಬಂಧಿತರಾಗಿದ್ದು, ಆರೋಪಿಗಳಿಂದ 1 ಕೆಜಿ ತೂಕದ ಚಿನ್ನಾಭರಣ, 6.5 ಕೆಜಿ ತೂಕದ ಬೆಳ್ಳಿ ವಸ್ತುಗಳು, ಮೂರು ಬೈಕ್‌ಗಳು ಜಪ್ತಿ ಸೇರಿದಂತೆ 67 ಲಕ್ಷ ರು ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 

ಇತ್ತೀಚಿಗೆ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ್ದರು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಇನ್ಸ್‌ಪೆಕ್ಟರ್‌ ಗುರುಪ್ರಸಾದ್‌ ನೇತೃತ್ವದ ತಂಡ, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಮುಂಬೈನಲ್ಲಿ ಬಂಧಿಸಿ ನಗರಕ್ಕೆ ಕರೆತಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಾಂಬೆ ಸಲೀಂ ವೃತ್ತಿಪರ ಖದೀಮನಾಗಿದ್ದು, ಆತನ ಮೇಲೆ ಬಸವನಗುಡಿ, ರಾಜರಾಜೇಶ್ವರಿ ನಗರ, ಪುಲಿಕೇಶಿ ನಗರ, ಮೈಕೋ ಲೇಔಟ್‌, ಗಿರಿನಗರ, ಚನ್ನಮ್ಮನಕೆರೆ ಅಚ್ಚುಕಟ್ಟು, ತಿಲಕನಗರ, ಹಾಗೂ ಮಹಾಲಕ್ಷ್ಮೇ ಲೇಔಟ್‌ ಸೇರಿದಂತೆ ಇತರೆ ಠಾಣೆಗಳಲ್ಲಿ 35 ಪ್ರಕರಣಗಳು ದಾಖಲಾಗಿವೆ. 

ಪ್ರತಿ ಕ್ಷೇತ್ರಕ್ಕೂ ಕಡ್ಡಾಯವಾಗಿ 3 ಆಕಾಂಕ್ಷಿಗಳ ಹೆಸರು ಕಳಿಸಿ: ಬಿಜೆಪಿ ಹೈಕಮಾಂಡ್‌

ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಆತನ ಮೇಲೆ ವಾರೆಂಟ್‌ ಸಹ ಜಾರಿಗೊಂಡಿದ್ದವು ಎಂದು ಪೊಲೀಸರು ವಿವರಿಸಿದ್ದಾರೆ. ಅಮೃತಹಳ್ಳಿಯಲ್ಲಿ ಮನೆಗಳ್ಳತನ ಎಸಗಿದ ಬಳಿಕ ಮುಂಬೈ, ಹೈದರಾಬಾದ್‌, ದೆಹಲಿ ಹಾಗೂ ಗುಜರಾತ್‌ ರಾಜ್ಯಗಳಲ್ಲಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಆರೋಪಿಗಳನ್ನು ಬಂಧಿಸಲಾಯಿತು. ಆರೋಪಿಗಳ ಬಂಧನದಿಂದ ಬೆಂಗಳೂರಿನ 7, ತುಮಕೂರು ನಗರ 2, ಬೆಳಗಾವಿ ನಗರದ 1 ಸೇರಿ 10 ಪ್ರಕರಣಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕಾಂಗ್ರೆಸ್ಸಿಗೆ 60 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟು: ಆಕಾಂಕ್ಷಿ ಸಂಖ್ಯೆ 2ಕ್ಕೆ ಇಳಿಸಲು ರಾಹುಲ್‌ ತಾಕೀತು

ರೀಲ್ಸ್‌ ಸ್ಟಾರ್‌ ಸಲೀಂ..!: ಮನೆಗಳ್ಳತನ ಕೃತ್ಯದಿಂದ ಸಂಪಾದಿಸಿದ ಹಣದಲ್ಲಿ ಬಾಂಬೆ ಸಲೀಂ ಮೋಜು ಮಸ್ತಿ ನಡೆಸುತ್ತಿದ್ದ. ಒಡವೆಗಳನ್ನು ಧರಿಸಿಕೊಂಡು ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಆತ, ಯೂಟ್ಯೂಬ್‌ ಚಾನೆಲ್‌ ಸಹ ಮಾಡಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ
ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!