Kalaburagi: ನಿಂತಿದ್ದ ಕಬ್ಬಿನ ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು, ಐವರ ಸ್ಥಿತಿ ಗಂಭೀರ

By Govindaraj SFirst Published Dec 24, 2022, 10:10 AM IST
Highlights

ನಿಂತಿದ್ದ ಕಬ್ಬಿನ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನಪ್ಪಿ, ಐವರ ಸ್ಥಿತಿ ಗಂಭೀರವಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಗವನಳ್ಳಿ ಕ್ರಾಸ್ ಬಳಿ ನಡೆದಿದೆ. 

ಕಲಬುರಗಿ (ಡಿ.24): ನಿಂತಿದ್ದ ಕಬ್ಬಿನ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನಪ್ಪಿ, ಐವರ ಸ್ಥಿತಿ ಗಂಭೀರವಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಗವನಳ್ಳಿ ಕ್ರಾಸ್ ಬಳಿ ನಡೆದಿದೆ. ಟಿಟಿ ಚಾಲಕ ಅಪ್ಪರಾಯ್ ಬಿರಾದರ್ (39) ಹಾಗೂ ಸಂಜುಕುಮಾರ್ ಸ್ಥಳದಲ್ಲೆ ಸಾವನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಟಿಟಿ ವಾಹನದ ಮುಂಭಾಗ ನುಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಒಂದೇ ಕುಟುಂಬದ 16 ಜನ ಪ್ರವಾಸಕ್ಕೆ ಹೋಗಿದ್ದರು. ಇವರು ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದ ನಿವಾಸಿಗಳಾಗಿದ್ದು, ಪ್ರವಾಸ ಮುಗಿಸಿಕೊಂಡು ವಾಪಾಸಾಗುತ್ತಿದ್ದಾಗ ಇನ್ನೇನು ಅರ್ಧ ಗಂಟೆಯೊಳಗೆ ಮನೆ ಸೇರುತ್ತಿದ್ದರು ಎನ್ನುವಾಗ ಅಪಘಾತವಾಗಿದೆ. ಸ್ಥಳಕ್ಕೆ ಜೇವರ್ಗಿ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬೊಲೆರೋ ಡಿಕ್ಕಿ, ಇಬ್ಬರು ಬೈಕ್‌ ಸವಾರರ ಸಾವು: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಸಮೀಪ ಶುಕ್ರವಾರ ಬೆಳಗಿನ ಜಾವ ಸುಮಾರು 8 ಗಂಟೆ ಸಮಯದಲ್ಲಿ ಬೊಲೇರಾ ವಾಹನ ಹಿಂಬದಿಯಿಂದ ದ್ವಿಚಕ್ರ ವಾಹನಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಕೂಲಿ ಕಾರ್ಮಿಕ ಹಾಗೂ ಹಿಂಬದಿ ಕೂತಿದ್ದ ನರ್ಸರಿ ಮಾಲೀಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿಯ ಹೋಬಳಿಯ ಚಿನ್ನಪ್ಪನಹಳ್ಳಿ ಗ್ರಾಮದ ಕೂಲಿ ಕಾರ್ಮಿಕ ಲಕ್ಷ್ಮೇನಾರಾಯಣ್‌ ಬಿನ್‌ ನರಸಿಂಹಪ್ಪ ಹಾಗೂ ಜಯಂತಿ ಗ್ರಾಮದ ನರ್ಸರಿ ಮಾಲೀಕ ರಾಜೇಶ್‌ ಬಿನ್‌ ವೆಂಕಟರವಣಪ್ಪ ಎಂದು ಗುರುತಿಸಲಾಗಿದೆ.

ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿ: 7 ಮಂದಿಗೆ ಗಾಯ

ಕೂಲಿ ಕಾರ್ಮಿಖ ಲಕ್ಷ್ಮೇನಾರಾಯಣ್‌ರನ್ನು ಹಿಂಬದಿ ಕೂರಿಸಿಕೊಂಡು ನರ್ಸರಿ ಮಾಲೀಕ ರಾಜೇಶ್‌ ಬೈಕ್‌ ಚಾಲನೆ ಮಾಡಿಕೊಂಡು ಬರುವಾಗ ಬಾಗೇಪಲ್ಲಿ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 44 ರ ಗಂಗೋತ್ರಿ ಪೆಟ್ರೋಲ್‌ ಬಂಕ್‌ ಎದರು ಬೊಲೇರಾ ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮೇನಾರಾಯಣ್‌ಗೆ ತಲೆಗೆ ಗಂಭೀರ ಪೆಟ್ಟು ಸ್ಥಳದಲ್ಲಿಯೆ ಅಸುನೀಗಿದರೆ, ನರ್ಸರಿ ಮಾಲೀಕ ರಾಜೇಶ್‌ ಗಂಭೀರವಾಗಿ ಗಾಯಗೊಂಡು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೊಲೆರೋ ವಾಹನ ಚಾಲಕ ಅಪಘಾತ ಸ್ಥಳದಲ್ಲಿಯೆ ವಾಹನ ಬಿಟ್ಟು ಎಸ್ಕೇಟ್‌ ಆಗಿದ್ದಾನೆ.

ವಿದ್ಯಾರ್ಥಿ ಅಪಘಾತದಲ್ಲಿ ಸಾವು: ಬಿಲ್ವಿದ್ಯೆ ಪ್ರವೀಣ, ನಗರದ ಮಾರಿಕಾಂಬಾ ಕಾಲೇಜ್‌ ವಿದ್ಯಾರ್ಥಿ ನಾರಾಯಣ ಮರಾಠೆ (17) ರಸ್ತೆ ಅಪಘಾತದಲ್ಲಿ ಮೃತಪಟ್ಟಘಟನೆ ಯಾದಗಿರಿಯಲ್ಲಿ ಶುಕ್ರವಾರ ನಡೆದಿದೆ. ರಾಂಚಿಯಲ್ಲಿ ಮುಂದಿನ ತಿಂಗಳು ನಡೆಯಬೇಕಿದ್ದ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ಅವರಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮವಿತ್ತು. ಅದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಯಾದಗಿರಿಗೆ ತೆರಳಿ, ಅಲ್ಲಿಂದ ರಿಕ್ಷಾ ಮಾಡಿಸಿಕೊಂಡು ತರಬೇತಿ ಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್‌ ಅವರ ರಿಕ್ಷಾಕ್ಕೆ ಬಡಿದಿದೆ. 

ಹಾವು ಕಡಿತ, ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್‌ ಸಿಗದೆ ಬಾಲಕ ಸಾವು

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ. ಮಾರಿಕಾಂಬಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ನಾರಾಯಣ ಕೃಷ್ಣ ಮರಾಠೆ ವಿದ್ಯಾಭ್ಯಾಸದಲ್ಲೂ ಉತ್ತಮ ಸಾಧನೆ ತೋರುತ್ತಿದ್ದರು. ವನವಾಸಿ ಸಂಸ್ಥೆಯವರು ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಆತನ ಜೊತೆಗಿದ್ದ ಇನ್ನೋರ್ವ ವಿದ್ಯಾರ್ಥಿ ಚಂದನ ಮರಾಠೆಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

click me!