
ದಾವಣಗೆರೆ(ಜು.05): ತಮಿಳುನಾಡಿನ ಸೇಲಂನಿಂದ ಅನಧಿಕೃತವಾಗಿ 20 ಲಕ್ಷ ಮೌಲ್ಯದ 102 ಕೆಜಿ ಬೆಳ್ಳಿ ಗೆಜ್ಜೆ ತಂದಿದ್ದ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದರು.
ಇಂದು(ಮಂಗಳವಾರ) ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಹಿತಿ ನೀಡಿದ ಅವರು, ದಾವಣಗೆರೆಗೆ ಜು. 3 ರಂದು ಬಂದಿದ್ದ ಸೇಲಂನ ಸೆಲ್ವಂ ಮತ್ತು ಬಾಲಾಜಿ ಎಂಬಿಬ್ಬರನ್ನು ಬಂಧಿಸಲಾಗಿದೆ. ಇಬ್ಬರ ಬಳಿಯೂ ಬೆಳ್ಳಿಗೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳು ಇರಲಿಲ್ಲ ಮಾರಾಟ ಮಾಡಲು ಬಂದಿದ್ದೇವೆ ಎಂದು ಹೇಳುತ್ತಿದ್ದಾರೆ. ಯಾವ ಕಾರಣದಿಂದ ಇಷ್ಟೊಂದು ಪ್ರಮಾಣದ ಬೆಳ್ಳಿ ತಂದಿದ್ದರು, ಕದ್ದಂತಹವುದು ಏನಾದರೂ ಇರಬಹುದೇ ಎಂಬ ವಿಷಯಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಹಳೆಯ ಬೆಳ್ಳಿ ಖರೀದಿಸಿ ಪಾಲಿಷ್ ಮಾಡಿ ಮಾರಾಟಕ್ಕೇನಾದರೂ ತಂದಿರಬಹುದೇ ಎಂಬ ದಿಕ್ಕಿನಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಸದಸ್ಯನ ಭೀಕರ ಹತ್ಯೆ
ಕಳ್ಳತನ ಮಾಡಿಕೊಂಡು ಬಂದು ಕಡಿಮೆ ದರಕ್ಕೆ ಮಾರಾಟಕ್ಕೆ ಯತ್ನಿಸಿರುವ ಪ್ರಕರಣಗಳು ಹಲವು ಕಡೆ ನಡೆದಿವೆ. ದಾವಣಗೆರೆಯ ಚಿನ್ನ ಬೆಳ್ಳಿ ಮಾರಾಟಗಾರರ ಸಭೆ ನಡೆಸಿ ಬಿಲ್ ಇಲ್ಲದೇ ಇರುವ ಚಿನ್ನ ಬೆಳ್ಳಿ ಆಭರಣ ಖರೀದಿ ಮಾಡದಂತೆ ಸೂಚನೆ ನೀಡಲಾಗಿದೆ. ಯಾವುದೇ ಬಿಲ್ ಇಲ್ಲದಿರುವ ಆಭರಣಗಳ ಖರೀದಿ ಮಾಡುವುದರಿಂದ ಕಳ್ಳರು ಸುಲಭವಾಗಿ ಕದ್ದ ಮಾಲು ಮಾರಾಟ ಮಾಡಬಹುದಾಗಿದೆ. ಹಾಗಾಗಿ ಬಿಲ್ ಇಲ್ಲದೆ ಖರೀದಿ ಮಾಡದಂತೆ ಹಲವಾರು ಸಭೆಯಲ್ಲಿ ತಿಳಿಸಲಾಗಿದೆ ಎಂದರು.
ಚಿನ್ನ ಬೆಳ್ಳಿ ವ್ಯಾಪಾರಸ್ಥರು ಬುಲಿಯನ್ ಖಾತೆಯ ಮೂಲಕವೇ ಖರೀದಿ ಮಾಡಬೇಕು. ಅನಧಿಕೃತವಾಗಿ ಖರೀದಿ ಮಾಡುವಂತಿಲ್ಲ ಎಂದು ತಿಳಿಸಿದರು. ಸಾಕಷ್ಟು ಪರಿಶ್ರಮ ವಹಿಸಿ ಎಲ್ಲರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ತಂಡದ ಪ್ರಶಂಸನೀಯ ಕಾರ್ಯಕ್ಕೆ ನಗದು ಬಹುಮಾನ ಸಹ ನೀಡಲಾಗುತ್ತದೆ ಎಂದು ತಿಳಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಆರ್. ಬಸರಗಿ, ದಾವಣಗೆರೆ ನಗರ ಪೊಲೀಸ್ ಉಪಾಧೀಕ್ಷಕ ನರಸಿಂಹ ತಾಮ್ರಧ್ವಜ್ , ಕೆ.ಎನ್. ಗಜೇಂದ್ರಪ್ಪ, ಧನಂಜಯ ಇತರರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ